ಮೈಸೂರು

ಮೈಸೂರು | ಅನಧಿಕೃತ ಪ್ಲೇಕ್ಸ್, ಬ್ಯಾನರ್ ತೆರವುಗೊಳಿಸಿ ; ಜಿಲ್ಲಾಧಿಕಾರಿ ಆದೇಶ

ಮೈಸೂರು : ಸಂಘ ಸಂಸ್ಥೆ, ಸಂಘಟನೆಗಳು, ಸಾರ್ವಜನಿಕರು ಹಾಗೂ ಇತರರು ಸಾರ್ವಜನಿಕ ಪ್ರದೇಶದಲ್ಲಿ ಪ್ಲೇಕ್ಸ್ ಮತ್ತು ಬ್ಯಾನರ್ ಗಳನ್ನು ಅಳವಡಿಸಬೇಕಾದ್ದಲ್ಲಿ ಸಂಬಂಧಿಸಿದ ಪ್ರದೇಶ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ್ ರೆಡ್ಡಿ ಅವರು ಆದೇಶಿಸಿದ್ದಾರೆ.

ಅನಧಿಕೃತವಾಗಿ ಪ್ಲೇಕ್ಸ್ ಮತ್ತು ಬ್ಯಾನರ್‌ ಗಳನ್ನು ಅಳವಡಿಸಿರುವುದು ಜಿಲ್ಲೆಯ ಪಾರಂಪಾರಿಕತೆ ಹಾಗೂ ಸೌಂದರ್ಯಕ್ಕೆ ಧಕ್ಕೆಯಾಗುತ್ತಿರುತ್ತದೆ. ಹೀಗಾಗಿ ಮೈಸೂರು ನಗರ ಮತ್ತು ಜಿಲ್ಲಾ ವ್ಯಾಪ್ತಿಯ ಸಾರ್ವಜನಿಕ ಪ್ರದೇಶಗಳಲ್ಲಿ ಸಾರ್ವಜನಿಕ ಆಸ್ತಿಗಳಿಗೆ ಹಾನಿ ಉಂಟಾಗದಂತೆ ನಿಗಧಿತ ಅವಧಿ ಮುಕ್ತಾಯ ನಂತರ ತೆರವುಗೊಳಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಬಹಿರಂಗ ಸ್ಥಳಗಳ (ವಿರೂಪಗೊಳಿಸುವುದನ್ನು ಪ್ರತಿಬಂಧಿಸುವ) (ತಿದ್ದುಪಡಿ) ಅಧಿನಿಯಮ 2020 ರನ್ವಯ ಕಾಯ್ದೆಯ ಕಲಂ 3 ರನ್ವಯ ಜಾಹೀರಾತುಗಳ ಮೂಲಕ ಅನಧಿಕೃತವಾಗಿ ವಿರೂಪಗೊಳಿಸುವುದಕ್ಕೆ ಗರಿಷ್ಠ 6 ತಿಂಗಳುಗಳ ಸೆರೆವಾಸದ ದಂಡನೆ ಅಥವಾ ಗರಿಷ್ಠ ಒಂದು ಸಾವಿರ ರೂಗಳವರೆಗೆ ದಂಡ ವಸೂಲಾತಿ ಅಥವಾ ಎರಡು ವಿಧವಾದ ದಂಡನೆ ವಿಧಿಸಲು ಅವಕಾಶ ಇರುತ್ತದೆ. ಕರ್ನಾಟಕ ಮುನ್ಸಿಪಲ್ ಆಕ್ಟ್ 1964ರ ಕಲಂ 133 ಹಾಗೂ 136 ರಲ್ಲಿ ಕ್ರಮವಾಗಿ ಜಾಹೀರಾತು ಹಾಗೂ ಅನಧಿಕೃತ ಜಾಹೀರಾತುಗಳನ್ನು ತೆರವುಗೊಳಿಸುವ ಬಗ್ಗೆ ಸ್ಪಷ್ಟವಾದ ಆದೇಶವಿರುತ್ತದೆ. ಆದ್ದರಿಂದ ಮೈಸೂರು ನಗರ ಮತ್ತು ಜಿಲ್ಲಾ ವ್ಯಾಪ್ತಿಯಲ್ಲಿ ಸಂಘ ಸಂಸ್ಥೆಗಳ, ಸಂಘಟನೆಗಳು, ಸಾರ್ವಜನಿಕರು, ಹಾಗೂ ಇತರರು ಸಾರ್ವಜನಿಕ ಪ್ರದೇಶದಲ್ಲಿ ಪ್ಲೇಕ್ಸ್ ಮತ್ತು ಬ್ಯಾನರ್ ಗಳನ್ನು ಅಳವಡಿಸಲು ಅನುಮತಿ ನೀಡುವಾಗ ಕಾರ್ಯಕ್ರಮಗಳ ನಿಗಧಿತ ಅವಧಿಗೆ ಮಾತ್ರ ಸೀಮಿತಗೊಳಿಸಿ, ಕಾರ್ಯಕ್ರಮಗಳು ಮುಕ್ತಾಯವಾದ ನಂತರ ಸಂಬಂಧಪಟ್ಟವರೇ ಪ್ಲೇಕ್ಸ್ ಮತ್ತು ಬ್ಯಾನರ್ ಗಳನ್ನು ಕಡ್ಡಾಯವಾಗಿ ತೆರವುಗೊಳಿಸಬೇಕು.

ಒಂದು ವೇಳೆ ತೆರವುಗೊಳಿಸದಿದ್ದರೇ ಸಂಬಂಧಪಟ್ಟವರ ಮೇಲೆ Karnataka open places (prevention of disfigurement) act 1981 ಹಾಗೂ ಕರ್ನಾಟಕ ಮುನ್ಸಿಪಾಲಿಟಿಗಳ ಅಧಿನಿಯಮ 1964 ಕಾಯ್ದೆಗಳನ್ವಯ ಕಾನೂನು ಕ್ರಮವನ್ನು ಕೈಗೊಳ್ಳಲಾಗುವುದು. ಹಾಗಾಗಿ ಹೀಗಾಗಲೇ ಮೈಸೂರು ನಗರ ಮತ್ತು ಜಿಲ್ಲಾ ವ್ಯಾಪ್ತಿಯ ಸಾರ್ವಜನಿಕ ಪ್ರದೇಶಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಪ್ಲೇಕ್ಸ್ ಮತ್ತು ಬ್ಯಾನರ್‌ ಗಳನ್ನು ಕೂಡಲೇ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ್ ರೆಡ್ಡಿ ಪ್ರಕಟಣೆಯಲ್ಲಿ ಆದೇಶ ಹೊರಡಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

12 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

12 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

14 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

14 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

14 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

22 hours ago