ಮೈಸೂರು: ಕೇರಳದ ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ ಕಾರು, ಹಣ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಕೇರಳ ಮೂಲದ ಅಶ್ವಿನ್ ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ಈಗಾಗಲೇ ಘಟನೆ ಸಂಬಂಧ ಪ್ರಮೋದ್ ಹಾಗೂ ಕಣ್ಣನ್ ಎಂಬುವವರನ್ನು ಬಂಧಿಸಿರುವ ಪೊಲೀಸರು ಇದೀಗ ಕೇರಳ ಮೂಲದ ಮತ್ತೊಬ್ಬ ಆರೋಪಿ ಅಶ್ವಿನ್ ಎಂಬಾತನನ್ನು ಬಂಧಿಸಿದ್ದಾರೆ.
ಮೈಸೂರು ತಾಲ್ಲೂಕಿನ ಗುಜ್ಜೇಗೌಡನಪುರ ಗ್ರಾಮದ ಬಳಿ ನಡೆದಿದ್ದ ದರೋಡೆಯಲ್ಲಿ ಮುಸುಕುಧಾರಿಗಳ ತಂಡವೊಂದು ಕೇರಳ ವ್ಯಾಪಾರಿ ಮಹಮ್ಮದ್ ಅಶ್ರಫ್ ಎಂಬುವವರ ಕಾರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ್ದರು. ಇದಲ್ಲದೇ ಕಾರಿನೊಂದಿಗೆ 1.50 ಲಕ್ಷ ಹಣ ದರೋಡೆ ಮಾಡಿ ಪರಾರಿಯಾಗಿದ್ದರು.
ಪ್ರಕರಣ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಕರಣದ ಪ್ರಮುಖ ಆರೋಪಿ ಒಬ್ಬನನ್ನು ಬಂಧಿಸಲಾಗಿದ್ದು, ಉಳಿದ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…