ಮೈಸೂರು

ಮೈಸೂರು | ಉದ್ಯಾನದಲ್ಲಿ ಚಿರತೆ ಕಂಡ ವದಂತಿ; ಪರಿಶೀಲನೆ

ಮೈಸೂರು: ಇಲ್ಲಿನ ಕುವೆಂಪುನಗರದ ವಿಜಯ್‌ ಬ್ಯಾಂಕ್‌ ವೃತ್ತ ಸಮೀಪದ ವಿಶ್ವನಂದನ ಉದ್ಯಾನದ ಬಳಿ ಗುರುವಾರ ಮುಂಜಾನೆ ಚಿರತೆ ಕಾಣಿಸಿಕೊಂಡ ವದಂತಿ ಕಾರಣ, ಚಿರತೆ ಕಾರ್ಯಪಡೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.

ವಿಶ್ವನಂದನ ಪಾರ್ಕ್‌ನಲ್ಲಿ ಚಿರತೆ ಕಂಡುಬಂದ ಹಿನ್ನೆಲೆ ಪಾರ್ಕ್‌ಗೆ ಮುಖ್ಯದ್ವಾರಕ್ಕೆ ಬೀಗ ಜಡಿಯಲಾಗಿದೆ. ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದ್ದು, ಚಿರತೆ ಸೆರೆಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆಗೆ ಮುಂದಾಗಿದ್ದಾರೆ.

ಬೆಳಿಗ್ಗೆ 7 ಗಂಟೆಗೆ ಧಾವಿಸಿದ ಕಾರ್ಯಪಡೆ ಸಿಬ್ಬಂದಿ ಗಂಟೆಗೂ ಹೆಚ್ಚು ಕಾಲ ಪರಿಶೀಲಿಸಿದರು.

ಹೆಚ್ಚೆ ಗುರುತು, ಸುಳಿವು ಪತ್ತೆ ಆಗಿಲ್ಲ. ಉದ್ಯಾನದ ಸುತ್ತಮುತ್ತಲ ಮನೆಗಳ ಸಿಸಿಟಿವಿ ಕ್ಯಾಮೆರಾಗಳನ್ನು ನೋಡಲಾಗುವುದು. ಕಂಡು ಬಂದಿದ್ದರೆ, ಮತ್ತೆ ಬಂದು ಪರಿಶೀಲಿಸುತ್ತೇವೆ ಎಂದು ಕಾರ್ಯಪಡೆ ಸಿಬ್ಬಂದಿಯೊಬ್ಬರು ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಡ್ಯಕ್ಕೆ ನನ್ನ ಕೊಡುಗೆ ಹೇಳುತ್ತೇನೆ, ನಿಮ್ಮ ಕೊಡುಗೆ ಪಟ್ಟಿ ಕೊಡಿ: ಸಿಎಂ ಸಿದ್ದುಗೆ ಎಚ್‌ಡಿಕೆ ಸವಾಲು

ನವದೆಹಲಿ: ಕುಮಾರಸ್ವಾಮಿ ಮಂಡ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಕೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀಕ್ಷ್ಣವಾಗಿ ತಿರುಗೇಟು ಕೊಟ್ಟಿರುವ ಕೇಂದ್ರ ಸಚಿವ…

14 mins ago

ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ: ಅಕ್ರಮ ಪತ್ತೆಗೆ ಎಸ್‌ಐಟಿ ರಚಿಸಿ ಎಂದ ಸಿ.ಟಿ.ರವಿ

ಬೆಳಗಾವಿ: ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ರಫ್ತಾಗುತ್ತಿದ್ದು, ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಅಕ್ರಮ ಪತ್ತೆಗೆ ಎಸ್‌ಐಟಿ ರಚಿಸುವಂತೆ ಎಂಎಲ್‌ಸಿ ಸಿ.ಟಿ.ರವಿ ಆಗ್ರಹಿಸಿದರು. ಇಂದು…

42 mins ago

ಸ್ವಾತಂತ್ರ್ಯ ಚಳುವಳಿಗೆ ವಂದೇ ಮಾತರಂ ಶಕ್ತಿ ತುಂಬಿತು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…

2 hours ago

ಸಿಎಂ ಸಿದ್ದರಾಮಯ್ಯಗೆ ಬಿಗ್‌ಶಾಕ್‌ ಕೊಟ್ಟ ಸುಪ್ರೀಂಕೋರ್ಟ್‌

ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್‌ ನೋಟಿಸ್‌ ನೀಡಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ…

2 hours ago

ಬೆಳಗಾವಿ ಚಳಿಗಾಲದ ಅಧಿವೇಶನ: ಮೊದಲಿಗೆ ಅಗಲಿದ ಗಣ್ಯರಿಗೆ ಸಂತಾಪ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ…

3 hours ago

ಮುಂದುವರಿದ ಇಂಡಿಗೋ ಸಮಸ್ಯೆ: ದೇಶಾದ್ಯಂತ 450ಕ್ಕೂ ಹೆಚ್ಚು ವಿಮಾನಗಳು ರದ್ದು

ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127…

3 hours ago