ಮೈಸೂರು: ಇಲ್ಲಿನ ಮಹಾನಗರ ಪಾಲಿಕೆ ಆಯುಕ್ತರಾಗಿ ಶೇಕ್ ತನ್ವೀರ್ ಆಸೀಫ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಮಂಡ್ಯ ಜಿಲ್ಲಾ ಪಂಚಾಯತ್ ಸಿಇಒ ಆಗಿ 22ತಿಂಗಳುಗಳ ಕಾಲ ದಕ್ಷವಾಗಿ ಕರ್ತವ್ಯ ನಿರ್ವಹಸಿದ ಆಸೀಫ್ ಅವರನ್ನು ಇದೀಗ ಮೈಸೂರಿಗೆ ವರ್ಗಾವಣೆ ಮಾಡಲಾಗಿದೆ.
ಸ್ವೀಪ್ ಸಮಿತಿಯ ಅಧ್ಯಕ್ಷರಾಗಿದ್ದ ಅವರು ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಮಂಡ್ಯ ಜಿಲ್ಲೆಯ ಜನರಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸುವ ಮೂಲಕ ಜಿಲ್ಲೆಯಲ್ಲಿ ಅತಿ ಹೆಚ್ಚು ಮತದಾನ ನಡೆಯಲು ಪ್ರಮುಖ ಕಾರಣರಾಗಿದ್ದನ್ನು ಸ್ಮರಿಸಬಹುದು.