ಮೈಸೂರು/ಸುತ್ತೂರು : ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ರಥೋತ್ಸವ ಅಪಾರ ಭಕ್ತರ ಮುಗಿಲು ಮುಟ್ಟಿದ ಜಯಘೋಷಗಳೊಂದಿಗೆ ಗುರುವಾರ ಬೆಳಿಗ್ಗೆ ಅದ್ದೂರಿಯಾಗಿ ನಡೆಯಿತು.
ಗ್ರಾಮದ ಕತೃಗದ್ದುಗೆ ಆವರಣದಲ್ಲಿ ಸೇರದ್ದ ಭಕ್ತ ಸಮೂಹ ರಥದ ಮಿಣಿಯನ್ನು ಎಳೆದು, ರಥಕ್ಕೆ ಹಣ್ಣು-ಜವನ ಎಸೆದು, ಹರಕೆ ಕಾರ್ಯ ನೆರವೇರಿಸಿದ ಭಕ್ತರು ದೇವರಿಗೆ ನಮಿಸಿದರು.
ಬೆಳಿಗ್ಗೆ 4ಕ್ಕೆ ಕರ್ತೃ ಗದ್ದುಗೆಯನ್ನು ಅಲಂಕರಿಸಿ ಪೂಜೆ ಸಲ್ಲಿಸಲಾಯಿತು. 6 ಗಂಟೆಗೆ ಮಠದ ಗುರು ಪರಂಪರೆಯ ಸಂಸ್ಮರಣೋತ್ಸವ ಹಾಗೂ ಗದ್ದುಗೆಗೆ ರುದ್ರಾಭಿಷೇಕ ನೆರವೇರಿಸಲಾಯಿತು.
ಬೆಳಿಗ್ಗೆ 9ಕ್ಕೆ ಉತ್ಸವ ಮೂರ್ತಿಗೆ ರಾಜೋಪಚಾರ ನಡೆಯಿತು. 10.30 ಗಂಟೆಗೆ ಶಿವಯೋಗಿಗಳ ಉತ್ಸವಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಅದಕ್ಕೆ ಅರ್ಚಕರು ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು.
ಬೆಳಿಗ್ಗೆ 10.55ಕ್ಕೆ ಗೋವಾ ರಾಜ್ಯಪಾಲ ಶ್ರೀಧರನ್ ಪಿಳ್ಳೆ, ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಚಿವ ಮಂಕಾಳ ಎಸ್. ವೈದ್ಯ, ಬಿ.ಎಸ್.ಯಡಿಯೂರಪ್ಪ, ಮುರುಗೇಶ್ ನಿರಾಣಿ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ, ರಥದ ಮಿಣಿ ಎಳೆದು ರಥೋತ್ಸವಕ್ಕೆ ಚಾಲನೆ ನೀಡುತ್ತಿದ್ದಂತೆ 21 ಕುಶಾಲತೋಪುಗಳು ಸಿಡಿದವು. ಇದರೊಂದಿಗೆ ಭಕ್ತರ ಜಯಘೋಷ ಮುಗಿಲುಮುಟ್ಟಿತ್ತು.
ಜಾನಪದ ಕಲಾತಂಡಗಳು, ತಮಟೆ, ನಗಾರಿ ವಾದ್ಯಗಳ ನಾದಗಳೊಂದಿಗೆ ಪುಷ್ಪಾಲಂಕೃತ ರಥವು ಕ್ರಮಿಸಿತು. ಭಕ್ತರ ಹರ್ಷ ಮುಗಿಲುಮುಟ್ಟಿತು.
ಸುತ್ತೂರು ಮೂಲಮಠದವರೆಗೂ ಭಕ್ತರು ರಥದೊಂದಿಗೆ ಹೆಜ್ಜೆ ಹಾಕಿದರು. ದೊಡ್ಡಮ್ಮತಾಯಿ ದೇವಸ್ಥಾನದ ವೃತ್ತ ಬಳಸಿ ಕತೃಗದ್ದುಗೆಗೆ ರಥ ಮರಳಿತು.
ಗಮನಸೆಳೆದ ಕಲಾತಂಡಗಳು: ರಥೋತ್ಸವದ ಮೆರವಣಿಗೆಯಲ್ಲಿ 35 ಕಲಾತಂಡಗಳು ಹೆಜ್ಜೆ ಹಾಕಿದವು. ನಂದಿಧ್ವಜ ಕುಣಿತ, ನಗಾರಿ, ವೀರಭದ್ರನ ವೇಷ, ಲಿಂಗಧೀರರ ನೃತ್ಯ, ನಾದಸ್ವರ, ಸ್ಯಾಕ್ಟೋಪೋನ್ ವಾದನ, ಸುತ್ತೂರು ಉಚಿತ ಶಾಲೆಯ ಮಕ್ಕಳ ವೀರಗಾಸೆ, ಪೂಜಾಕುಣಿತ, ಗಾರುಡಿ ಗೊಂಬೆಗಳು, ಡೊಳ್ಳು ಕುಣಿತ, ತಮಟೆ-ನಗಾರಿ, ಗೊರವರ ಕುಣಿತ, ಕೋಲಾಟ, ಕಂಸಾಳೆ, ಪಟದ ಕುಣಿತ, ದೊಣ್ಣೆ ವರಸೆ, ಮರಗಾಲು, ಕಾನಪಥಕ್ ಜನರನ್ನು ಮೋಡಿ ಮಾಡಿತು.
ಇದರೊಂದಿಗೆ ತಮಿಳುನಾಡಿನ ಮುರುಗನ್ ತಂಡದ ಕೋಲಾಟಂ, ಕರಗಟ್ಟಂ, ಕಾವಾಡಿಯಾಟಂ ರಥೋತ್ಸವದಲ್ಲಿ ಜನರನ್ನು ಆಕರ್ಷಿಸಿದವು.
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…
ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…