ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ಆದೇಶದಂತೆ ಮೈಸೂರು ನಗರ ಡಿಸಿಪಿ ಮುತ್ತುರಾಜು ನನ್ನ ವಿರುದ್ಧ ಕೆ.ಆರ್ ಠಾಣೆಯಲ್ಲಿ ದುರುದ್ದೇಶಪೂರ್ವಕವಾಗಿ ಪ್ರಕರಣ ದಾಖಲಿಸಿ ನನ್ನ ಬಂಧನಕ್ಕೆ ಮುಂದಾಗಿದ್ದಾರೆ, ಅವರ ಮೇಲೆ ಕ್ರಮ ಜರುಗಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮಂಗಳವಾರ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ನೀಡಿದ್ದಾರೆ.
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ಲೋಕಾಯುಕ್ತಕ್ಕೆ ದೂರು ನೀಡಿದ ನನ್ನ ಮೇಲೆ ಪೊಲೀಸರು ದ್ವೇಷ ಸಾಧನೆಗೆ ಮುಂದಾಗಿದ್ದಾರೆ. ಮುತ್ತುರಾಜು ಅವರನ್ನು ಮೈಸೂರಿನಿಂದ ವರ್ಗಾವಣೆ ಮಾಡಬೇಕು ಎಂದು ದೂರಿನಲ್ಲಿ ಕೋರಿದ್ದಾರೆ. ಇದೇ ದೂರನ್ನು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೂ ಸಲ್ಲಿಸಿದ್ದಾರೆ.