Mysore
26
broken clouds

Social Media

ಸೋಮವಾರ, 10 ಆಗಸ್ಟ್ 2026
Light
Dark

ಮೈಸೂರು | ಅತ್ಯಾಚಾರ ಖಂಡಿಸಿ ಏಕಾಂಗಿ ಪ್ರತಿಭಟನೆ

ಮೈಸೂರು: ಉತ್ತರ ಪ್ರದೇಶದ ವಾರಣಾಸಿಯಲ್ಲಿ 19 ವರ್ಷದ ಯುವತಿ ಮೇಲೆ ಅತ್ಯಾಚಾರ ನಡೆಸಿರುವುದನ್ನು ಖಂಡಿಸಿ ಗಂಧದಗುಡಿ ಫೌಂಡೇಶನ್‌ನ ಅಧ್ಯಕ್ಷ ಆರ್ಯನ್ ನಗರದ ಜಿಲ್ಲಾಧಿಕಾರಿ ಹಳೇ ಕಚೇರಿ ಬಳಿ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು.

19 ವರ್ಷದ ಯುವತಿಯನ್ನು ಅಪಹರಿಸಿ, ಒಂದು ವಾರದಲ್ಲಿ 23 ಪುರುಷರಿಂದ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ ಹೃದಯ ವಿದ್ರಾವಕ ಘಟನೆಯು ವಾರಣಾಸಿಯಲ್ಲಿ ನಡೆದಿದೆ.

ಈ ಸಂಬಂಧ ಏ.6ರಂದು ಲಾಲ್ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳಿಗೆ ಕೂಡಲೇ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.

 

 

Tags:
error: Content is protected !!