ಮೈಸೂರು

ಮೈಸೂರು: ಗಮನ ಸೆಳೆಯುತ್ತಿವೆ ವಿಶೇಷ ಗಣಪತಿ ವಿಗ್ರಹಗಳು…

ಮೈಸೂರು: ನಾಡಿನಾದ್ಯಂತ ಗಣೇಶ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಸಾರ್ವಜನಿಕ ಸ್ಥಳ ಹಾಗೂ ಮನೆಗಳಲ್ಲಿ ವಿನಾಯಕನನ್ನು ಕೂರಿಸಿ, ವಿಶೇಷ ಅಲಾಂಕಾರ ಮಾಡಿ ಪೂಜಿಸಲಾಗುತ್ತಿದೆ.

ಸದ್ಯ ಮೈಸೂರಲ್ಲಿ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಎಲ್ಲೆಡೆ ಗಣೇಶ ವಿಗ್ರಹಗಳನ್ನು ಕೂರಿಸಲಾಗುತ್ತಿದೆ. ಪ್ರತಿ ಏರಿಯಾಗಳಲ್ಲೂ ವಿನಾಯಕ ಗೆಳೆಯರ ಬಳಗದಿಂದ ಗಣಪನನ್ನು ವಾದ್ಯ ಶಬ್ದಗಳೊಂದಿಗೆ ಬರಮಾಡಿಕೊಂಡು ಹಬ್ಬದ ವೈಭವವನ್ನು ಹೆಚ್ಚಿಸಿದ್ದಾರೆ.

ಇನ್ನೂ ಗಣೇಶ ವಿಗ್ರಹಗಳು ಕೂಡ ನೋಡುಗರ ಕಣ್ಮನ ಸೆಳೆಯುತ್ತಿವೆ. ನಗರದ ಕಲಾವಿದ ರೇವಣ್ಣ ಕೈಚಳಕದಲ್ಲಿ ಮೂಡಿಬಂದ ವಿಭಿನ್ನ ಗಣೇಶ ಮೂರ್ತಿಗಳು ನೋಡುಗರನ್ನು ಮಂತ್ರ ಮುಗ್ದರನ್ನಾಗಿಸುತ್ತಿವೆ.

ಗಣಪತಿ ಪಕ್ಕದಲ್ಲಿ ಪ್ರಧಾನಿ ನರೇಂದ್ರ ಮೋದಿ, ಸಂಸದ ಯದುವೀರ್‌, ಅಯೋಧ್ಯಾ ರಾಮಲಲ್ಲಾ ವಿಗ್ರಹದ ಜೊತೆ ಗಣೇಶ್‌, ಮೇಘಾಲಯದ ರಾಜ್ಯಪಾಲರಾದ ಕನ್ನಡಿಗ ಸಿ.ಎಚ್‌ ವಿಜಯಶಂಕರ್‌, ನಟ ರಿಷಬ್‌ ಶೆಟ್ಟಿ, ಪುನೀತ್‌ ರಾಜ್‌ಕುಮಾರ್‌ ಸೇರಿದಂತೆ ಹಲವು ಮೂರ್ತಿಗಳನ್ನು ನಿಲ್ಲಿಸಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸದೇ ಹೋದರೆ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…

7 hours ago

ಹನೂರು| ರಸ್ತೆಯಲ್ಲಿ ಹುಲಿ ದರ್ಶನ: ವಿಡಿಯೋ ವೈರಲ್‌

ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…

8 hours ago

ಶೀಘ್ರದಲ್ಲೇ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ರಹೀಂ ಖಾನ್‌

ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್‌ ತಿಳಿಸಿದರು. ವಿಧಾನಪರಿಷತ್‌ ಕಲಾಪದಲ್ಲಿ…

8 hours ago

ಎಚ್‌ಡಿಕೆ ಹುಟ್ಟುಹಬ್ಬ: ಮಂಡ್ಯದಲ್ಲಿ ಕಾರ್ಯಕರ್ತರಿಂದ ಅದ್ಧೂರಿ ಆಚರಣೆ

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್‌ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…

8 hours ago

ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ: ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಿಷ್ಟು.!

ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ…

9 hours ago

ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…

9 hours ago