ಮೈಸೂರು: ವಿಶ್ವ ರೈತ ದಿನದ ಪ್ರಯುಕ್ತ ಡಿ.23ರಂದು ಬೆಳಿಗ್ಗೆ 10ಕ್ಕೆ ʻರೈತರ ರಾಜ್ಯ ಮಟ್ಟದ ಸಮಾವೇಶʼ ವನ್ನು ನಗರದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ಏರ್ಪಡಿಸಲಾಗಿದೆ. ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರೈತ ಸಂಘ, ಹಸಿರು ಸೇನೆ ಮತ್ತು ಕಬ್ಬು ಬೆಳೆಗಾರರ ಸಂಘದ ಸಹಯೋಗದಲ್ಲಿ ಈ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.
ಶುಕ್ರವಾರ ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಸ್ತುತ ದೇಶದಾದ್ಯಂತ ರೈತರು ಎದುರಿಸುತ್ತಿರುವ ಕೃಷಿ ಸಮಸ್ಯೆಗಳ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನದಟ್ಟು ಮಾಡಿಸಲು ಈ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ವೇದಿಕೆಯ ಸಮಾರಂಭ ಅಂದು ಬೆಳಿಗ್ಗೆ 11ಕ್ಕೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನಿವೃತ್ತ ಕೆಎಎಸ್ ಅಧಿಕಾರಿ ಕಾ. ರಾಮೇಶ್ವರಪ್ಪ ನೇತೃತ್ವದ ʻಇನಿದನಿ ಮಣ್ಣ ಮಕ್ಕಳ ಹೊನ್ನ ಪದಗಳ ಬಳಗದವರು ʼಜಾನಪದ ಸಂಗೀತ ವೈಭವʼ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಸಂಜೆವೇಳೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಸಚಿವ ವಿ.ಸೋಮಣ್ಣ ಹಾಗೂ ಕೆಎಸ್‌ಒಯು ಕುಲಪತಿ ಪೊ.ಶರಣಪ್ಪ ಹಲಸೆ ಭಾಗವಹಿಸಲಿದ್ದಾರೆ.
ತಮಿಳುನಾಡಿನ ರೈತ ಮುಖಂಡ ಪಿ.ಆರ್. ಪಾಂಡ್ಯನ್, ಪರಿಸರ ವಿಜ್ಞಾನಿ ಚಂದ್ರಶೇಖರ ಬೀರಾದಾರ್, ತೆಲಂಗಾಣದ ವೆಂಕಟೇಶ್ವರ ಭಾಗವಹಿಸಲಿದ್ದಾರೆ. ವೇದಿಕೆಯಲ್ಲಿ ನಾಡಿನ ಪ್ರಗತಿಪರ ರೈತ ಹಾಗೂ ಪರಿಸರ ಪ್ರೇಮಿಗಳಿಗೆ ಪುರಸ್ಕಾರ ನೀಡಲಾಗುವುದು ಎಂದು ವಿವರಿಸಿದರು.
ಗೋಷ್ಠಿಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಹುತ್ತಳ್ಳಿ ದೇವರಾಜು, ಬರಡನಪುರ ನಾಗರಾಜ್, ಮುಖಂಡ ಪೈಲ್ವನ್ ವೆಂಕಟೇಶ್ ಸೇರಿದಂತೆ ಇನ್ನಿತರರು ಇದ್ದರು.
ತುಮಕೂರು: ಏಪ್ರಿಲ್.1ರಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು…
ಬೆಂಗಳೂರು: ಏಪ್ರಿಲ್.9ರಂದು ನಡೆಯಲಿರುವ ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಬಾಗಲಕೋಟೆ…
ಬೆಂಗಳೂರು: ಅಮೇರಿಕಾದಲ್ಲಿರುವ ಕನ್ನಡಿಗರ ಅತಿ ದೊಡ್ಡ ಸಾಂಸ್ಕೃತಿಕ ಸಂಭ್ರಮವಾಗಿರುವ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್ ಶೆಟ್ಟಿ…
ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯನ್ನು 48 ಗಂಟೆಯೊಳಗೆ ಸಂಪೂರ್ಣ ಓಪನ್ ಮಾಡಬೇಕು ಎಂದು ಇರಾನ್‌ಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಡುವು…
ಮೈಸೂರಿನ ಶಾರದಾದೇವಿ ನಗರದ ಸರ್ಕಲ್‌ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ…
ರೈಲ್ವೆ ಇಲಾಖೆಯ ಕನ್ನಡ ವಿರೋಧಿ ನೀತಿ ಇನ್ನೊಮ್ಮೆ ಬಯಲಾಗಿದೆ. ನೇಮಕಾತಿ ಮತ್ತು ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ ನಡೆಸುವುದಾಗಿ ಭರವಸೆ…