ಮೈಸೂರು : ನಗರದ ಸಿದ್ದಾರ್ಥ ಬಡಾವಣೆಯಲ್ಲಿರುವ ಟೆರಿಷಿಯನ್ ಕಾಲೇಜಿನ ಅಂತಿಮ ವರ್ಷದ ಬಿ.ಎಸ್ಸಿ ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಮೂಲತಃ ಚಾಮರಾಜನಗರ ನಿವಾಸಿ ಶಕೀಲಾ(19) ಎಂಬವರೇ ಆತ್ಮಹತ್ಯೆಗೆ ಶರಣಾಗಿದ್ದು, ಆಕೆ ಕಾಲೇಜಿನ ವಿದ್ಯಾರ್ಥಿನಿಯಲಯದಲ್ಲಿ ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ.
ಚಾಮರಾಜನಗರ ಜಿಲ್ಲೆಯ ಮಾರ್ಟಳ್ಳಿ ಗ್ರಾಮದ ಶಕೀನಾ ಅವರು ಟೆರೆಷಿಯನ್ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಎಸ್.ಸಿ ವ್ಯಾಸಂಗ ಮಾಡುತ್ತಿದ್ದರು. ಬುಧವಾರ ಅವರು ಆರನೇ ಸೆಮಿಸ್ಟರ್‌ನ ಭೌತಶಾಸ್ತ್ರ ಪರೀಕ್ಷೆ ಬರೆಯಬೇಕಿತ್ತು.
ಪರೀಕ್ಷೆ ಕೊಠಡಿಗೆ ತೆರಳುವ ಮುನ್ನವೇ ಆಕೆ ವಿದ್ಯಾರ್ಥಿ ನಿಲಯದ ಕೊಠಡಿಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ಕಾರಣ ತಿಳಿದುಬಂದಿಲ್ಲ ಎಂದು ತಿಳಿಸಿರುವ ನಜರಬಾದ್ ಠಾಣಾ ಪೊಲೀಸರು ಈ ಸಂಬಂದ ಪ್ರಕರಣ ದಾಖಲಿಸಿದ್ದಾರೆ.





