Mysore
16
few clouds

Social Media

ಶನಿವಾರ, 20 ಡಿಸೆಂಬರ್ 2025
Light
Dark

ಮೈಸೂರು: ಪರೀಕ್ಷೆ ಮೂಂದೂಡಿಕೆಗೆ ಮಹಾರಾಜ ಕಾಲೇಜು ವಿದ್ಯಾರ್ಥಿಗಳ ಆಗ್ರಹ

ಮೈಸೂರು: ಪಠ್ಯಕ್ರಮ ಪೂರ್ಣಗೊಳ್ಳದೆ ಪರೀಕ್ಷೆ ನಡೆಸುತ್ತಿರುವ ಮೈಸೂರು ವಿವಿಯ ಕ್ರಮವನ್ನು ಖಂಡಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಜೇಷನ್ (ಎಐಡಿಎಸ್‌ಒ) ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಬುಧವಾರ ವಿವಿ ಕಾರ್ಯಸೌಧದ ಮುಂಭಾಗ ಜಮಾವಣೆಗೊಂಡ ವಿದ್ಯಾರ್ಥಿಗಳು ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿ, ಮಹಾರಾಜ ಕಾಲೇಜಿನ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಆಗ್ರಹಿಸಿದರು.

ಮೈಸೂರು ವಿಶ್ವವಿದ್ಯಾನಿಲಯದ ಪದವಿ ವಿದ್ಯಾರ್ಥಿಗಳ ಪರೀಕ್ಷಾ ಸೂಚನೆ ಪ್ರಕಾರ ಡಿ.೨೮ರಿಂದ ಪರೀಕ್ಷೆಗಳು ಪ್ರಾರಂಭವಾಗಲಿವೆ. ಆದರೆ, ತರಗತಿಗಳು ಆಗಸ್ಟ್‌ನಲ್ಲಿ ಆರಂಭವಾದರೂ ಅತಿಥಿ ಉಪನ್ಯಾಸಕರ ಕೊರತೆಯಿಂದಾಗಿ ಉಪನ್ಯಾಸಕರ ನೇಮಕವಾಗಿಲ್ಲದ ಕಾರಣ ತರಗತಿಗಳು ನಡೆದಿಲ್ಲ. ಒಂದೂವರೆ ತಿಂಗಳ ನಂತರ ತರಗತಿಗಳು ಪ್ರಾರಂಭವಾಗಿವೆ. ಇದರಿಂದ ಪಠ್ಯಕ್ರಮಗಳ ಬೋಧನೆ ಸಂಪೂರ್ಣವಾಗಿ ನಡೆದಿಲ್ಲ ಎಂದರು.

ಪಠ್ಯಕ್ರಮ ಪೂರ್ಣಗೊಳ್ಳದೆ ಪರೀಕ್ಷೆ ನಡೆಸುವುದು ಅವೈಜ್ಞಾನಿಕ. ಅಲ್ಲದೇ ಇದು ವಿದ್ಯಾರ್ಥಿಗಳ ಮೇಲೆ ಒತ್ತಡ ಉಂಟು ಮಾಡುವುದರಿಂದ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಒತ್ತಾಯಿಸಿದರು.

ಎಐಡಿಎಸ್‌ಒ ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದಕೊಪ್ಪ, ಜಿಲ್ಲಾ ಕಾರ್ಯದರ್ಶಿ ನಿತಿನ್, ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳಾದ ಉಮೇಶ್, ಮನೋಜ್, ಕಿರಣ್ ಕುಮಾರ್, ಮಹದೇವ್, ಸಂತೋಷ್, ಪೂಜಾ, ಕವನ, ರಾಽಕಾ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

 

 

Tags:
error: Content is protected !!