ಮೈಸೂರು: ಪಠ್ಯಕ್ರಮ ಪೂರ್ಣಗೊಳ್ಳದೆ ಪರೀಕ್ಷೆ ನಡೆಸುತ್ತಿರುವ ಮೈಸೂರು ವಿವಿಯ ಕ್ರಮವನ್ನು ಖಂಡಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಜೇಷನ್ (ಎಐಡಿಎಸ್‌ಒ) ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಬುಧವಾರ ವಿವಿ ಕಾರ್ಯಸೌಧದ ಮುಂಭಾಗ ಜಮಾವಣೆಗೊಂಡ ವಿದ್ಯಾರ್ಥಿಗಳು ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿ, ಮಹಾರಾಜ ಕಾಲೇಜಿನ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಆಗ್ರಹಿಸಿದರು.
ಮೈಸೂರು ವಿಶ್ವವಿದ್ಯಾನಿಲಯದ ಪದವಿ ವಿದ್ಯಾರ್ಥಿಗಳ ಪರೀಕ್ಷಾ ಸೂಚನೆ ಪ್ರಕಾರ ಡಿ.೨೮ರಿಂದ ಪರೀಕ್ಷೆಗಳು ಪ್ರಾರಂಭವಾಗಲಿವೆ. ಆದರೆ, ತರಗತಿಗಳು ಆಗಸ್ಟ್‌ನಲ್ಲಿ ಆರಂಭವಾದರೂ ಅತಿಥಿ ಉಪನ್ಯಾಸಕರ ಕೊರತೆಯಿಂದಾಗಿ ಉಪನ್ಯಾಸಕರ ನೇಮಕವಾಗಿಲ್ಲದ ಕಾರಣ ತರಗತಿಗಳು ನಡೆದಿಲ್ಲ. ಒಂದೂವರೆ ತಿಂಗಳ ನಂತರ ತರಗತಿಗಳು ಪ್ರಾರಂಭವಾಗಿವೆ. ಇದರಿಂದ ಪಠ್ಯಕ್ರಮಗಳ ಬೋಧನೆ ಸಂಪೂರ್ಣವಾಗಿ ನಡೆದಿಲ್ಲ ಎಂದರು.
ಪಠ್ಯಕ್ರಮ ಪೂರ್ಣಗೊಳ್ಳದೆ ಪರೀಕ್ಷೆ ನಡೆಸುವುದು ಅವೈಜ್ಞಾನಿಕ. ಅಲ್ಲದೇ ಇದು ವಿದ್ಯಾರ್ಥಿಗಳ ಮೇಲೆ ಒತ್ತಡ ಉಂಟು ಮಾಡುವುದರಿಂದ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಒತ್ತಾಯಿಸಿದರು.
ಎಐಡಿಎಸ್‌ಒ ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದಕೊಪ್ಪ, ಜಿಲ್ಲಾ ಕಾರ್ಯದರ್ಶಿ ನಿತಿನ್, ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳಾದ ಉಮೇಶ್, ಮನೋಜ್, ಕಿರಣ್ ಕುಮಾರ್, ಮಹದೇವ್, ಸಂತೋಷ್, ಪೂಜಾ, ಕವನ, ರಾಽಕಾ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಾಷ್ಟ್ರಕವಿ ಕುವೆಂಪು ಅವರು ವಾಸವಿದ್ದ ನಿವಾಸವನ್ನು ಸ್ಮಾರಕ ಮತ್ತು ಮ್ಯೂಸಿಯಂ ಮಾಡಲು ಸರ್ಕಾರ…
ಬೆಂಗಳೂರು : ಕೃಷಿ ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ನಿರಂತರವಾಗಿ ಅಧಿಕಾರಿಗಳ ಸಭೆ ಮಾಡುವುದರೊಂದಿಗೆ ರೈತರೊಂದಿಗೆ ಹಾಗೂ ಜನಪ್ರತಿನಿಧಿಗಳೊಂದಿಗೆ ವಿಮೆ…