ಮೈಸೂರು

ಮೈಸೂರು | ಕಾದ ಭೂಮಿಯ ತಣಿಸಿದ ವರ್ಷದ ಮೊದಲ ಮಳೆ

ಮೈಸೂರು: ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬುಧವಾರ(ಏ.2) ರಾತ್ರಿ ವರ್ಷದ ಮೊದಲ ಮಳೆ ಸುರಿದಿದೆ. ಬಿಸಿಲಿನ ಜಳಕ್ಕೆ ಬಸವಳಿದಿದ್ದ ಜನರಿಗೆ ಮಳೆರಾಯ ಸದ್ಯ ತಂಪೆರೆದಿದ್ದಾನೆ.

ರಾತ್ರಿ 8 ಗಂಟೆಯ ಹೊತ್ತಿಗೆ ಆರಂಭವಾದ ಮಳೆ ಒಂದು ಗಂಟೆಗೂ ಹೆಚ್ಚು ಕಾಲ ಜೋರು ಮಳೆ ಸುರಿಯಿತು. ಅಲ್ಲದೆ, ಇನ್ನೂ ಉಳಿದ ತಾಲ್ಲೂಕಿನ ಹಲವು ಕಡೆಗಳಲ್ಲಿ ಗುಡುಗು ಸಹಿತ ಮೋಡ ಕವಿದ ವಾತಾವರಣದಿಂದ ಮಳೆ ಆಗಿದೆ.

ಮಳೆಯ ಮುನ್ಸೂಚನೆ ಇಲ್ಲದೆ ಮನೆಗೆ ತೆರಳುತ್ತಿದ್ದ ಸಾರ್ವಜನಿಕರು ಮಳೆಯಿಂದಾಗಿ ಅಂಗಡಿ-ಮುಗ್ಗಟ್ಟುಗಳ ಬಳಿ ಆಶ್ರಯ ಪಡೆದರು. ಇನ್ನೂ ಬೈಕ್‌ ಸವಾರರಿಗೆ ಸಂಚಾರದ ಸಮಸ್ಯೆಯೂ ಉಂಟಾಯಿತು.

ಮುಂದಿನ ನಾಲ್ಕೈದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ವರ್ಷದ ಮೊದಲ ಮಳೆಯಿಂದಾಗಿ ಮೈಸೂರು ಸದ್ಯ ತಂಪಾಗಿದೆ. ವರ್ಷದ ಮೊದಲ ಮಳೆ ಕಂಡು ಜನರಲ್ಲಿ ಸಂತಸ ಮೂಡಿದೆ.

ನಗರದ ಡಿ.ದೇವರಾಜ ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆ, ಧನ್ವಂತ್ರಿ ರಸ್ತೆ, ಅಶೋಕ ರಸ್ತೆ, ನಾರಾಯಣ ಶಾಸಿ ರಸ್ತೆ, ಚಾಮರಾಜ ಜೋಡಿರಸ್ತೆ, ಅಗ್ರಹಾರ, ಇರ್ವಿನ್ ರಸ್ತೆ, ಗಾಂಧಿನಗರ, ಉದಯಗಿರಿ, ಗಂಗೋತ್ರಿ ಬಡವಣೆ ಮೊದಲಾದ ಕಡೆಗಳಲ್ಲಿ ಮಳೆ ಜೋರು ಸುರಿಯಿತು. ಈ ವೇಳೆ ಜನರು ಅಲ್ಲಲ್ಲಿ ನಿಂತು ಆಶ್ರಯ ಪಡೆದರೆ, ಹೊರಗಿನವರು ನಗರ ಮತ್ತು ಸಬ್ ಅರ್ಬನ್ ಬಸ್ ನಿಲ್ದಾಣಕ್ಕೆ ಮಳೆಯಲ್ಲೇ ನೆನೆದು ಬಸ್‌ಗಳನ್ನು ಹತ್ತಿ ಹೊರಟರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ.ಸುರೇಶ್‌

ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆ ನೀಡಿದ್ದಾರೆ. ಈ…

2 mins ago

ಸದ್ದಿಲ್ಲದೆ ಸಮಾಜಸೇವೆಗೆ ನಿಂತ ಎಂಬಿಶ್ರೀ ಪ್ರತಿಷ್ಠಾನ ತಂಡ

ಹೇಮಂತ್‌ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…

13 mins ago

ನಟ ದರ್ಶನ್‌ ವಿರುದ್ಧ ಸುಳ್ಳು ದಾಖಲೆ ಸೃಷ್ಟಿ ಆರೋಪ: ಕನ್ನಡ ಒಕ್ಕೂಟದಿಂದ ಧರಣಿಗೆ ಕರೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ನಟ ದರ್ಶನ್‌ ವಿರುದ್ಧ ಸುಳ್ಳು ದಾಖಲೆ ಸೃಷ್ಟಿಸಿದ್ದಾರೆ ಎಂಬ…

27 mins ago

ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ

ಟೆಹರಾನ್:‌ ಇರಾನ್‌ ಮತ್ತು ಇಸ್ರೇಲ್‌ ನಡುವೆ ಯುದ್ಧದ ಕಾರ್ಮೋದ ಹೆಚ್ಚಿದ್ದು, ಇರಾನ್‌ನ ಸರ್ವೋಚ್ಛ ನಾಯಕ ಅಲಿ ಖಮೇನಿ ಹಾಗೂ ಅಧ್ಯಕ್ಷ…

39 mins ago

ನಾಳೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಭೇಟಿ

ದಕ್ಷಿಣ ಕನ್ನಡ: ನಾಳೆ(ಮಾರ್ಚ್.‌1) ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಅವರು ಭೇಟಿ ನೀಡಲಿದ್ದಾರೆ.…

50 mins ago

ಮಾರ್ಚ್.‌11ರಿಂದ ಸರ್ಕಾರಿ ವೈದ್ಯರ ಮುಷ್ಕರ

ಬೆಂಗಳೂರು: ಸರ್ಕಾರದ ಶಿಸ್ತುಕ್ರಮಕ್ಕೂ ಕ್ಯಾರೆ ಎನ್ನದ ಸರ್ಕಾರಿ ವೈದ್ಯರು ತಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ರಾಜ್ಯಾದ್ಯಂತ ಮಾ.11ರಿಂದ ನಡೆಸಲು…

57 mins ago