ಮೈಸೂರು : ಮನೆಯ ಮುಂಬಾಗಿಲನ್ನು ಮುರಿದು ಒಳ ನುಗ್ಗಿರುವ ಕಳ್ಳರು ಸುಮಾರು ೧ ಕೋಟಿ ರೂ. ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳನ್ನು ದೋಚಿ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ನಗರದ ದಟ್ಟಗಳ್ಳಿ ೩ನೇ ಹಂತದ ಕನಕದಾಸನಗರ ’ಜೆ’ಬ್ಲಾಕ್‌ನಲ್ಲಿ ವಾಸಿಸುತ್ತಿರುವ ಸಾಫ್ಟ್‌ವೇರ್ ಎಂಜಿನಿಯರ್ ವಿನಯ್ ಕುಮಾರ್ ಅವರ ಮನೆಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ:-ಮೈಸೂರು | ಮನೆಯಲ್ಲಿ ಕಳ್ಳತನ ; ಸುಮಾರು 1 ಕೋಟಿ ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿ ವಸ್ತುಗಳು ಕಳ್ಳರ ಪಾಲು
ಅ.೨೦ ರಂದು ವಿನಯ್ ತನ್ನ ಪತ್ನಿ ಮತ್ತು ಮಕ್ಕಳೊಂದಿಗೆ ಚಿಕ್ಕಮಗಳೂರಿಗೆ ಕುಟುಂಬ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳಿದ್ದರು. ಅ.೨೧ ರಂದು ಮಧ್ಯಾಹ್ನ ೩ ಗಂಟೆಗೆ ಹಿಂತಿರುಗಿದ್ದರು.
ವಿನಯ್ ಮುಂಭಾಗದ ಬಾಗಿಲು ತೆರೆದಿರುವುದನ್ನು ನೋಡಿ ಆಘಾತಕ್ಕೊಳಗಾಗಿದ್ದರು.
ಮನೆಯೊಳಗೆ ಪ್ರವೇಶಿಸಿದಾಗ ಮಲಗುವ ಕೋಣೆಯಲ್ಲಿದ್ದ ವಾಡ್ರೂಬ್‌ನಲ್ಲಿ ಇರಿಸಲಾಗಿದ್ದ ಬೆಲೆಬಾಳುವ ವಸ್ತುಗಳು ಕಳ್ಳತನವಾಗಿರುವುದನ್ನು ಗೊತ್ತಾಗಿದೆ. ಖದೀಮರು ಸುಮಾರು ೭೦೦ ಗ್ರಾಂ ತೂಕದ ಚಿನ್ನದ ಆಭರಣಗಳು, ನಾಲ್ಕು ಸರಗಳು, ಮೂರು ಆಭರಣ ಸೆಟ್‌ಗಳು, ಐದು ಬಳೆಗಳು, ಎಂಟು ಕಿವಿಯೋಲೆಗಳು, ೧೦ ಉಂಗುರಗಳು ಮತ್ತು ೩ ಕೆಜಿ ಬೆಳ್ಳಿ ವಸ್ತುಗಳು ಕಳುವಾಗಿವೆ, ತಕ್ಷಣ, ವಿನಯ್ ಸರಸ್ವತಿಪುರಂ ಪೊಲೀಸರಿಗೆ ಮಾಹಿತಿ ನೀಡಿದಾಗ, ಪೊಲೀಸರು ಶ್ವಾನ ದಳ ಮತ್ತು ಬೆರಳಚ್ಚು ತಜ್ಞರೊಂದಿಗೆ ಬಂದು ಮಹಜರು ನಡೆಸಿದರು. ಈ ಸಂಬಂದ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…