ಮೈಸೂರು

ಮೈಸೂರು | ನಾಳೆ ಈ ಪ್ರದೇಶದಲ್ಲಿ ದಿನವಿಡಿ ಕರೆಂಟ್‌ ಇರಲ್ಲ..!

ಮೈಸೂರು: ವಿ.ವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ ಮೇಟಗಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮಾ.೨೩ ರಂದು ೪ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಅಂದು ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೦೬ ಗಂಟೆಯವರೆಗೆ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಚಾ.ವಿ.ಸ.ನಿ.ನಿ.,ಯ ವಿ.ವಿ ಮೊಹಲ್ಲಾ ವಿಭಾಗದ, ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳು: ಮೇಟಗಳ್ಳಿ ವ್ಯಾಪ್ತಿಯ ಹೆಬ್ಬಾಳ್ ಕೈಗಾರಿಕಾ ಪ್ರದೇಶ, ಮೇಟಗಳ್ಳಿ, ಬೃಂದಾವನ ಬಡಾವಣೆ, ಲೋಕನಾಯಕ ನಗರ, ಜಯದೇವ ನಗರ, ಬಿ.ಎಂ.ಶ್ರೀನಗರ, ಹೆಬ್ಬಾಳ್ ಹೊರ ವರ್ತುಲ ರಸ್ತೆ,  HPCL GAS ಪ್ಲ್ಯಾಂಟ್ ಸುತ್ತಮುತ್ತ, ಹೆಬ್ಬಾಳ್ ೧ನೇ, ೨ನೇ ಹಾಗೂ ೩ನೇ ಹಂತ, ಸುಬ್ರಹ್ಮಣ್ಯನಗರ, ಬಸವನಗುಡಿ, ಎಸ್.ಬಿ.ಎಂ ಬ್ಯಾಂಕ್ ಸುತ್ತ ಮುತ್ತ, ಹೆಬ್ಬಾಳ್ ಕಾಲೋನಿ, ಹೆಬ್ಬಾಳ್ ಮುಖ್ಯರಸ್ತೆ, ಲಕ್ಷ್ತ್ರ್ಮಿಕಾಂತ ನಗರ, ಸಂಕ್ರಾoತಿ ವೃತ್ತ, ಗೋಲ್ಡನ್ ಬೇಕರಿ, ಕೆ.ಐ.ಎ.ಡಿ.ಬಿ ಲೇಔಟ್, ಮಯೂರ ವೃತ್ತ, ಕಾವೇರಿ ವೃತ್ತ, ಮಿಲಿಟರಿಕ್ವಾಟ್ರಸ್, ಆರ್.ಬಿ.ಐ, ವಿಕ್ರಾಂತ್ ಮೇನ್ ಪ್ಲ್ಯಾಂಟ್ ಮತ್ತು ಶಿವಮೊಗ್ಗ ಸ್ಟೀಲ್ಸ್ ಸುತ್ತ ಮುತ್ತಲಿನ ಪ್ರದೇಶಗಳು.

ಬೆಳಗೊಳ ಕೈಗಾರಿಕಾ ಪ್ರದೇಶ, ಕೆ.ಆರ್.ಎಸ್ ರಸ್ತೆ , ಭೈರವೇಶ್ವರನಗರ, ಬಸವೇಶ್ವರನಗರ, ಮೇಟಗಳ್ಳಿ ಕೈಗಾರಿಕಾ ಪ್ರದೇಶ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

2025 ಸವಿನೆನಪು: ಸ್ಯಾಂಡಲ್‌ವುಡ್ ಏಳು-ಬೀಳು

‘ಸ್ಯಾಂಡಲ್ ವುಡ್’ ಎಂದೇ ಹೆಸರಾಗಿರುವ ಕನ್ನಡ ಚಿತ್ರರಂಗ ಇಂದು ಭಾರತದ ಒಂದು ಪ್ರಮುಖ ಚಿತ್ರೋದ್ಯಮವಾಗಿ ಬೆಳೆದಿದೆ. ಈ ಮೊದಲು ಪ್ರತಿ…

1 hour ago

ಉದ್ಘಾಟನೆಯಾಗದ ಅಂಬಾರಿ ಖ್ಯಾತಿಯ ಅರ್ಜುನನ ಸ್ಮಾರಕ

ಲಕ್ಷ್ಮಿಕಾಂತ್ ಕೊಮಾರಪ್ಪ ೨೦೨೩ರ ಡಿ.೪ರಂದು ಕಾಡಾನೆ ಕಾರ್ಯಾಚರಣೆ ವೇಳೆ ಮೃತಪಟ್ಟಿದ್ದ ಅರ್ಜುನ; ೨ ವರ್ಷ ಕಳೆದರೂ ಅರ್ಜುನನ ಸ್ಮಾರಕ, ಪ್ರತಿಮೆಗಿಲ್ಲ…

1 hour ago

ಸಾಂಸ್ಕೃತಿಕ ನಗರಿಯಲ್ಲಿ ಕ್ರಿಸ್‌ಮಸ್ ಸಂಭ್ರಮ

ಮೈಸೂರು: ಸಂಭ್ರಮ, ಸಡಗರ, ವಿಶೇಷ ಪ್ರಾರ್ಥನೆಯೊಂದಿಗೆ ಕ್ರೈಸ್ತ ಧರ್ಮದ ದೈವ ಬಾಲಏಸುವಿನ ಜಯಂತಿಯ ಸ್ಮರಣೆಯು ಅದ್ಧೂರಿಯಾಗಿ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ…

2 hours ago

ರಾಗಿ, ಹುರುಳಿ ಒಕ್ಕಣೆಗೆ ರಸ್ತೆಯೇ ಕಣ!

ಪ್ರಶಾಂತ್ ಎಸ್. ಗ್ರಾಮೀಣ ಭಾಗದ ರಸ್ತೆಗಳಲ್ಲಿ ಸಮಸ್ಯೆ ಕಣ್ಣಿಗೆ ದೂಳು ಬಿದ್ದರೆ ಅನಾಹುತ ಸಾಧ್ಯತೆ ವಾಹನ ಸವಾರರಿಗೆ ಸವಾಲು; ಎಚ್ಚರ…

2 hours ago

ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ-CBC ಕಚೇರಿ ಸ್ಥಗಿತ ಬೇಡ : ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಸಚಿವ ಎಚ್‌ಡಿಕೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…

12 hours ago

ಉನ್ನಾವೋ ಅತ್ಯಾಚಾರ ಪ್ರಕರಣ : ರಾಹುಲ್‌ಗಾಂಧಿ ಭೇಟಿಯಾದ ಸಂತ್ರಸ್ತೆ ಕುಟುಂಬ

ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…

13 hours ago