ಮೈಸೂರು: ಹಾವು ಕಡಿತವನ್ನು ಘೋಷಿತ ಕಾಯಿಲೆಗಳ ಪಟ್ಟಿಗೆ ಸೇರ್ಪಡೆಗೊಳಿಸಿ ಇತ್ತೀಚೆಗಷ್ಟೇ ಸರ್ಕಾರ ಅಧಿಸೂಚನೆ ಹೊರಡಿಸಿದ ಬೆನ್ನಲ್ಲೇ, ಹಾವು ಕಡಿತದ ಸಂದರ್ಭದಲ್ಲಿ ತಕ್ಷಣವೇ ನೆರವಾಗಲು ಮತ್ತು ಕಡಿತಕ್ಕೊಳಗಾದವರಿಗೆ ತಕ್ಷಣವೇ ಸಮೀಪದ ಆರೋಗ್ಯ ಕೇಂದ್ರಕ್ಕೆ ತಲುಪುವಂತೆ ಮಾಡಲು ಸಹಾಯ ಒದಗಿಸುವ ಕಾರ್ಯವನ್ನು ಆಶಾ ಕಾರ್ಯಕರ್ತರಿಗೆ ವಹಿಸಲಾಗಿದೆ.
ಉಪ-ಕೇಂದ್ರಗಳಲ್ಲಿನ ಆರೋಗ್ಯ ಕಾರ್ಯಕರ್ತರು ಪ್ರಥಮ ಚಿಕಿತ್ಸೆ ನೀಡುವ ಜವಾಬ್ದಾರಿಯನ್ನು ಹೊಂದಿರುತ್ತಾರೆ ಮತ್ತು ತಕ್ಷಣದ ಚಿಕಿತ್ಸೆಗೆ ಅನುಕೂಲವಾಗುವಂತೆ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿಗೆ ಸೂಚಿಸಲಿದ್ದಾರೆ ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.
ಮೈಸೂರು ಜಿಲ್ಲೆಯಲ್ಲಿ ಸಿಗಲಿದೆ ಚುಚ್ಚುಮದ್ದು: ಹಾವು ಕಡಿತದ ಚಿಕಿತ್ಸೆಗಾಗಿ ವಿಷ ನಿವಾರಕ ಚುಚ್ಚುಮದ್ದನ್ನು ಈ ಹಿಂದೆ ಕೆಆರ್ ಆಸ್ಪತ್ರೆ ಮತ್ತು ಜಿಲ್ಲಾ ಆರೋಗ್ಯ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ನೀಡಲಾಗುತ್ತಿತ್ತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಕಮಿಷನರೇಟ್ ಹೊರಡಿಸಿದ ಅಧಿಸೂಚನೆಯ ಹಿನ್ನೆಲೆಯಲ್ಲಿ, ಟಿ. ನರಸೀಪುರ, ನಂಜನಗೂಡು, ಎಚ್‌ಡಿ ಕೋಟೆ, ಹುಣಸೂರಿನಲ್ಲಿ 16 ಪ್ರಾಥಮಿಕ ಆರೋಗ್ಯ ಕೇಂದ್ರಗಳು (ಪಿಎಚ್‌ಸಿ), ಆರು ತಾಲ್ಲೂಕು ಜನರಲ್ ಆಸ್ಪತ್ರೆಗಳು ಸೇರಿದಂತೆ 31 ಆರೋಗ್ಯ ಕೇಂದ್ರಗಳು ಇವೆ. ಇದುಗಳನ್ನು ಹಾವು ಕಡಿತದ ಚಿಕಿತ್ಸೆ ನೀಡಲು ಗುರುತಿಸಲಾಗಿದೆ ಎಂದು ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್‌ಒ) ಡಾ. ಪಿಸಿ ಕುಮಾರಸ್ವಾಮಿ ಸ್ಥಳೀಯ ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿದ್ದಾರೆ.
ಇದಲ್ಲದೆ, ಪಿರಿಯಾಪಟ್ಟಣ, ಕೆ.ಆರ್.ನಗರ, ಬನ್ನೂರು, ತಲಕಾಡು, ಜಯಪುರ, ಜಯನಗರ, ಸಾಲಿಗ್ರಾಮ, ಹುಲ್ಲಹಳ್ಳಿ, ತಗಡೂರು, ಸರಗೂರು ಮತ್ತು ಮುಗೂರಿನ ಒಂಬತ್ತು ಸಮುದಾಯ ಆರೋಗ್ಯ ಕೇಂದ್ರಗಳು ಈಗ ಹಾವು ಕಡಿತಕ್ಕೆ ಚಿಕಿತ್ಸೆ ನೀಡಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಹೊಸ ವರ್ಷದಂದು ಹಲವರು ಬಂಧು,ಬಳಗ, ಸ್ನೇಹಿತರ ಜತೆ ಸೇರಿ ಸಂಭ್ರಮಿಸಿದರು. ಆದರೆ ಸಾಂಸ್ಕ ತಿಕ ನಗರ ಮೈಸೂರಿನಲ್ಲಿ ದಾಖಲೆ ಮದ್ಯ…
ಸ್ವಾಗತಾರ್ಹ ನಡೆ! ಜಾತಿ ಮೀರಿ ಪ್ರೀತಿಸಿದರೆ ಕುಂದಲ್ಲವದು ಮರ್ಯಾದೆಗೆ ಬದಲಿಗೆ ಹೆಚ್ಚುವುದು ಮರ್ಯಾದೆ ಗೌರವ! ಜಾತಿ ಕಟ್ಟಳೆ ಮುರಿವ ಸಮತೆಯ…
ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಬ್ಯಾರಿಕೇಡ್‌ಗಳು ಬಳಕೆಯಾದ ನಂತರ ನಿರ್ಲಕ್ಷ್ಯಕ್ಕೆ ಒಳಪಡುತ್ತಿವೆ. ಅವುಗಳನ್ನು ಸುರಕ್ಷಿತವಾಗಿ ಒಂದೆಡೆ…
ಲೊಕ್ಕನಹಳ್ಳಿ ಬಳಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ; ಅಧಿಕಾರಿಗಳ ವಿರುದ್ಧ ಆಕ್ರೋಶ ಹನೂರು: ಒಂದೆಡೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ-ಕಾಲೇಜು…
ನವೀನ್ ಡಿಸೋಜ ೧೮,೫೦೦ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆದಿರುವ ರೈತರು; ಹವಾಮಾನ ವೈಪರೀತ್ಯದ ನಡುವೆಯೂ ಕಟಾವು ಕಾರ್ಯ ಚುರುಕು ಮಡಿಕೇರಿ:…
ಚಾಮರಾಜನಗರ: ತೀವ್ರ ಚಳಿಯಿಂದ ತತ್ತರಿಸಿದ್ದ ಜಿಲ್ಲೆಯ ಜನತೆ ಕಳೆದ ೨-೩ ದಿನಗಳಿಂದ ಎದುರಾಗಿರುವ ಮೋಡ ಕವಿದ ವಾತಾವರಣ ಮತ್ತು ಅಲ್ಲಲ್ಲಿ…