ಮೈಸೂರು: ಸೂರತ್‌ನಲ್ಲಿ ನಡೆಯುವ ನ್ಯಾಷನಲ್ ಲೆವೆಲ್ ಯೋಗ ಸ್ಪರ್ಧೆಗೆ ನಂಜನಗೂಡಿನ ಇಬ್ಬರು ಬಾಲಕರು ಆಯ್ಕೆಯಾಗಿ ಕೀರ್ತಿ ತಂದಿದ್ದಾರೆ.
ನಂಜನಗೂಡಿನ ದೇವಿರಮ್ಮನಹಳ್ಳಿಯಲ್ಲಿರುವ ನಂಜುಂಡೇಶ್ವರ ಯೋಗ ವಿದ್ಯಾಲಯದಲ್ಲಿ ಯೋಗಾಭ್ಯಾಸ ಮಾಡುತ್ತಿರುವ ಆರನೇ ತರಗತಿಯ ಚಿರಾಗ್ ಹಾಗೂ ಏಳನೇ ತರಗತಿ ಓದುತ್ತಿರುವ ಜಯಚಂದ್ರ ಎಂಬ ಬಾಲಕರು ಬೆಂಗಳೂರಿನ ಎಸ್‌ಜೆಆರ್ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆದ zonel ಲೆವೆಲ್ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಿ ನ್ಯಾಷನಲ್ ಲೆವೆಲ್‌ಗೆ ಆಯ್ಕೆಯಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಮುಂದೆ ಸೂರತ್‌ನಲ್ಲಿ ನಡೆಯುವ ನ್ಯಾಷನಲ್ ಲೆವೆಲ್ ಯೋಗ ಸ್ಪರ್ಧೆಗೆ ಈ ಬಾಲಕರು ಆಯ್ಕೆಯಾಗಿದ್ದು, ಯೋಗಾ ವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ.
ಯೋಗ ಶಿಕ್ಷಕ ರಮೇಶ್ ಅವರ ಪರಿಶ್ರಮದಿಂದಲೇ ಬಾಲಕರು ಈ ಸಾಧನೆ ಮಾಡಿದ್ದು, ಬಾಲಕರಿಗೆ ಎಲ್ಲೆಡೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.
ಬೆಂಗಳೂರು: ಕೊಳ್ಳೇಗಾಲ ನಗರಸಭೆ ವ್ಯಾಪ್ತಿಯ ಬಸ್ತೀಪುರದ ಬಡ ಕುಟುಂಬಗಳಿಗೆ ಹಕ್ಕು ಪತ್ರ ನೀಡುವ ಬಗ್ಗೆ ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಕ್ರಮ…
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…