ಮೈಸೂರು

ಮೈಸೂರು: ನಗರಸಭೆ ಕಮಿಷನರ್ ಖುರ್ಚಿಗೆ ಇಬ್ಬರು ಅಧಿಕಾರಿಗಳ ಜಟಾಪಟಿ

ಮೈಸೂರು : ಮೈಸೂರಿನ ಹೂಟಗಳ್ಳಿ ನಗರಸಭೆಯ ಕಮಿಷನರ್ ಹುದ್ದೆಗಾಗಿ ಹಾಲಿ ಕಮಿಷನರ್ ಸಂದೀಪ್ ಮತ್ತು ಈ ಹಿಂದೆ ಇದೇ ನಗರಸಭೆ ಕಮಿಷನರ್ ಆಗಿದ್ದ ನರಸಿಂಹಮೂರ್ತಿ ಎಂಬುವವರ ನಡುವೆ ಕಿತ್ತಾಟ ಶುರುವಾಗಿದೆ. ಈ ಹಿಂದೆ ಇಬ್ಬರು ಅಧಿಕಾರಿಗಳು ಕೋರ್ಟ್ ಮೆಟ್ಟಿಲೇರಿದ್ದರು.

ನಿನ್ನೆ(ಫೆ.08) ಏಕಾಏಕಿ ನಗರಸಭೆಗೆ ಆಗಮಿಸಿದ ನರಸಿಂಹಮೂರ್ತಿ ಅವರು, ಕಮಿಷನರ್ ಕೊಠಡಿಗೆ ಬೀಗ ಹಾಕಿಕೊಂಡು ಹೋಗಿದ್ದಾರೆ. ಒಂದೇ ಹುದ್ದೆಗೆ ಇಬ್ಬರು ಅಧಿಕಾರಿಗಳು ಜಟಾಪಟಿ ನಡೆಸಿದ ಘಟನೆ ಮೈಸೂರಿನ ಹೂಟಗಳ್ಳಿ ನಗರಸಭೆಯಲ್ಲಿ ದಾಖಲಾಗಿದೆ.

ನರಸಿಂಹಮೂರ್ತಿ ಅವರು ಕಮಿಷನರ್ ಕೊಠಡಿಗೆ ಬೀಗ ಹಾಕಿಕೊಂಡು ಹೋಗಿದ್ದು, ಬೆಳಿಗ್ಗೆ ಎಂದಿನಂತೆ ಕರ್ತವ್ಯಕ್ಕೆ ಬಂದ ಕಮಿಷನರ್​ ಸಂದೀಪ್​ಗೆ ಆತಂಕಕ್ಕೊಳಗಾಗಿದ್ದಾರೆ. ಕೊಡಲೇ ಕಮಿಷನರ್ ಕೊಠಡಿ ಆಚೆಯೇ ಟೇಬಲ್ ಹಾಕಿ ಕುಳಿತು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಬಂದಂತಹ ಜನರ ಸಮಸ್ಯೆಯನ್ನ ಆಲಿಸುತ್ತಿದ್ದಾರೆ.

ಘಟನೆ ಸಂಬಂಧ ಹಾಲಿ ನಗರಸಭೆ ಕಮಿಷನರ್ ಸಂದೀಪ್ ಅವರು ನರಸಿಂಹಮೂರ್ತಿ ವಿರುದ್ಧ ವಿಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

andolanait

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

8 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

8 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

10 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

12 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

15 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

15 hours ago