ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಸಂಶೋಧನಾ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಹಿಂದುಳಿದ ವರ್ಗಗಳ ಘಟಕದ ವತಿಯಿಂದ ಅರ್ಜಿ ಆಹ್ವಾನಿಸಲಾಗಿದ್ದು, ಸಂಶೋಧನಾ ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿಯಲ್ಲಿ ಶೇ.55 ಕ್ಕಿಂತ ಹೆಚ್ಚು ಅಂಕ ಪಡೆದಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ 2023-24 ನೇ ಸಾಲಿನ 20 ಸಂಶೋಧನಾ ವಿದ್ಯಾರ್ಥಿಗಳಿಗೆ ಪ್ರತಿ ಮಾಹೆ ರೂ.12,000 ಗಳಂತೆ 03 ವರ್ಷದ ಅವಧಿಗೆ ಶಿಷ್ಯವೇತನಕ್ಕೆ ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಜೂನ್.10 ರಂದು ಕಛೇರಿ ವೇಳೆಯಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಜುಲೈ 01 ಸಂಜೆ 5.30 ಗಂಟೆಯೊಳಗೆ ನಿಗದಿಪಡಿಸಿದ ದಾಖಲೆಗಳೊಂದಿಗೆ ಮಾರ್ಗದರ್ಶಕರು ಹಾಗೂ ವಿಭಾಗದ ಅಧ್ಯಕ್ಷರು/ನಿರ್ದೇಶಕರು/ಪ್ರಾಂಶುಪಾಲರ ಮುಖಾಂತರ ಹಿಂದುಳಿದ ವರ್ಗಗಳ ಘಟಕದ ಸಂಯೋಜನಾಧಿಕಾರಿಗಳಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯದವರಾಗಿದ್ದು, ಮೈಸೂರು ವಿಶ್ವವಿದ್ಯಾನಿಲಯದಿಂದ (ಸ್ವಾಯತ್ತ ಸಂಸ್ಥೆಗಳನ್ನು ಹೊರತುಪಡಿಸಿ) ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ಅಭ್ಯರ್ಥಿಯು 23 ರಿಂದ 35 ವಯಸ್ಸಿನವರಾಗಿರಬೇಕು. Category-1 ಅಭ್ಯರ್ಥಿಗಳ ವಾರ್ಷಿಕ ಆದಾಯ ರೂ.4.50 ಲಕ್ಷ, Category-II(A), II(B), III(A) ಮತ್ತು III(B) ಅಭ್ಯರ್ಥಿಗಳ ವಾರ್ಷಿಕ ಆದಾಯ ರೂ.3.50 ಲಕ್ಷ ವಾರ್ಷಿಕ ಆದಾಯವನ್ನು ಮೀರಿರಬಾರದು. ಆದಾಯ ಮತ್ತು ಜಾತಿ ಪ್ರಮಾಣ ಪತ್ರವು ಅಧಿಸೂಚನೆ ಹೊರಡಿಸಿದ ದಿನಾಂಕದಲ್ಲಿ ಚಾಲ್ತಿಯಲ್ಲಿರಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ:0821-2419906 ಹಾಗೂ ಇ-ಮೇಲ್: obccell@unimysore.ac.in ನ್ನು ಸಂಪರ್ಕಿಸಬಹುದು ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.