ಮೈಸೂರು : ಹೈದ್ರಾಬಾದ್ ವಿಶ್ವವಿದ್ಯಾನಿಲಯದ ಸಂಶೋಧನಾ ವಿದ್ಯಾರ್ಥಿಯಾಗಿ ವ್ಯಾಸಂಗ ಮಾಡುವಾಗ ಆತ್ಮಹತ್ಯೆ ಮಾಡಿಕೊಂಡ ರೋಹಿತ್ ವೇಮುಲಾ ಅವರ ಸಾವಿನ ಬಗ್ಗೆ ಅಲ್ಲಿನ ಪೊಲೀಸರು ನೀಡಿರುವ ಅಂತಿಮ ತನಿಖೆಯ ವರದಿಯನ್ನು ವಿರೋಧಿಸಿ ಮೈಸೂರು ವಿವಿ ವಿದ್ಯಾರ್ಥಿಗಳು ಹಾಗೂ ಸಂಶೋಧನಾ ವಿದ್ಯಾರ್ಥಿಗಳು ಮಾನಸ ಗಂಗೋತ್ರಿಯ ಅಂಬೇಡ್ಕರ್ ಪ್ರತಿಮೆಯ ಮುಂಭಾಗ ಪ್ರತಿಭಟನೆ ನಡೆಸಿದರು.
ಸಂಶೋಧನಾ ವಿದ್ಯಾರ್ಥಿಗಳಾದ ಮಹೇಶ್ ಪಿ.ಮರಹಳ್ಳಿ, ಶಿವು ಬಂಡಳ್ಳಿ, ಆನಂದ್, ಶರತ್, ಪ್ರತಾಪ್ ಮತ್ತು ದಲಿತ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಸಚಿನ್, ಗಿರೀಶ್ ಮತ್ತಿತರರು ಭಾಗವಹಿಸಿದ್ದರು.