ಮೈಸೂರು: ಮುಸ್ಲಿಂ ಕುಟುಂಬವೊಂದು ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸುವ ಮೂಲಕ ಸೌಹಾರ್ದತೆಯನ್ನು ಬಿಂಬಿಸಿರುವ ಘಟನೆ ಮೈಸೂರು-ಮಾನಂದವಾಡಿ ರಸ್ತೆಯಲ್ಲಿರುವ ಕೋಟೆ ಹುಂಡಿಯಲ್ಲಿ ನಡೆದಿದೆ.
ಕೋಟೆ ಹುಂಡಿಯಲ್ಲಿರುವ ಜಾಕೀರ್ ಹುಸೇನ್ ಹಾಗೂ ಮಮತ ದಂಪತಿ ಶುಕ್ರವಾರ ವರಮಹಾಲಕ್ಷ್ಮಿ ಹಬ್ಬವನ್ನು ವಿಭಿನ್ನ ವಿನೂತನವಾಗಿ ಆಚರಿಸಿದರು. ಇವರಿಬ್ಬರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಈಗ ಹಿಂದೂ-ಮುಸ್ಲಿಂ ಎರಡೂ ಧರ್ಮದ ಹಬ್ಬಗಳನ್ನು ಆಚರಿಸುವ ಮೂಲಕ ಈ ದಂಪತಿ ಸೌಹಾರ್ದತೆ ಮೆರೆಯುತ್ತಿದ್ದಾರೆ.
ಸುಮಾರು 7 ವರ್ಷದಿಂದ ಈ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬ ಆಚರಣೆ ಮಾಡಲಾಗುತ್ತಿದೆ. ಬಕ್ರೀದ್ ಹಬ್ಬವನ್ನು ಆಚರಿಸಿದ್ದ ಈ ದಂಪತಿ ಇದೀಗ ಚಿಂತಕರ ಸಮ್ಮುಖದಲ್ಲಿ ವರಮಹಾಲಕ್ಷ್ಮಿ ಹಬ್ಬ ಆಚರಿಸಿದ್ದಾರೆ. ಎಲ್ಲರೂ ಒಗ್ಗೂಡಬೇಕೆಂಬ ಒತ್ತಾಸೆಯಲ್ಲಿ ಈ ದಂಪತಿ ಈ ಹಬ್ಬ ಆಚರಣೆ ಮಾಡಿದ್ದಾರೆ.
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…
ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…
ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…
ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…
ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…