ಮೈಸೂರು:ಮೈಸೂರು ವಿಶ್ವವಿದ್ಯಾನಿಲಯದ ಅಭಿವೃದ್ಧಿ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ, ನಿರ್ದೇಶಕರೂ ಆಗಿದ್ದ ಪ್ರೊ.ವಿ.ಕೆ. ನಟರಾಜ್ (85) ಅನಾರೋಗ್ಯದಿಂದ ಸೋಮವಾರ ಬೆಳಿಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಅವರಿಗೆ ಇಬ್ಬರು ಪುತ್ರಿಯರಿದ್ದಾರೆ. ನಿವೃತ್ತಿ ನಂತರ ಚೆನ್ನೈನ ಮದ್ರಾಸ್ ಇನ್ಸ್‌ಟಿಟ್ಯೂಟ್ ಆಫ್ ಡೆವಲಪ್‌ಮೆಂಟ್ ಸ್ಟಡೀಸ್ (MIDS) ನ ನಿರ್ದೇಶಕರಾಗಿದ್ದರು. ಬಳಿಕ ಇಂಡೊ-ಕೆನೆಡಿಯನ್ ಸ್ಟಡಿ ಸೆಂಟರ್ ಸಂದರ್ಶಕ ಪ್ರಾಧ್ಯಾಪಕರಾಗಿದ್ದರು.
ಅಭಿವೃದ್ದಿ ಅರ್ಥಶಾಸ್ತ್ರದಲ್ಲಿ ಪರಿಣಿತಿ ಹೊಂದಿದ್ದು, ಮೂರು ದಶಕಗಳ ಕಾಲ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ತಮ್ಮ ಅಧ್ಯಾಪಕ ಜೀವನವನ್ನು ನಡೆಸಿದ್ದಾರೆ. ನಂತರ ಅಭಿವೃದ್ದಿ ಅಧ್ಯಯನ ವಿಭಾಗದ ಮುಖ್ಯಸ್ಥರು ಆಗಿದ್ದರು.
ಅರ್ಥಶಾಸ್ತ್ರ ಕುರಿತು ಇಂಗ್ಲಿಷ್ ಪತ್ರಿಕೆಗಳಿಗೆ ಲೇಖನ ಬರೆಯುತ್ತಿದ್ದರು. ವರ್ಲ್ಡ್ ಬ್ಯಾಂಕಿನ ಸಲಹೆಗಾರರಾಗಿದ್ದ ಇವರು ಖ್ಯಾತ ಸರೋಜ ವಾದಕ ಪಂ. ತಾರಾನಾಥರ ಆತ್ಮೀಯರೂ ಆಗಿದ್ದರು.
ಸಂಬಂಧಿಕರು, ಹಿತೈಷಿಗಳು, ಸ್ನೇಹಿತರು ಅಂತಿಮ ನಮನ ಸಲ್ಲಿಸಲು ಮಂಗಳವಾರ (ಡಿ.10) ಬೆಳಿಗ್ಗೆ ಅವರ ನಿವಾಸದಲ್ಲಿ ಇರಿಸಲಾಗುವುದು. ನಂತರ ಬೆಳಿಗ್ಗೆ 11ಕ್ಕೆ ಜೆಎಸ್‌ಎಸ್ ಅಸ್ಪತ್ರೆಗೆ ದಾನವಾಗಿ ನೀಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…