ಮೈಸೂರು: ಯದುವೀರ್ ಪ್ರೌಢಿಮೆ ಹೊಂದಿರುವ ಯುವ ನಾಯಕರಾಗಿದ್ದಾರೆ. ಮೈಸೂರಿನ ಅಭಿವೃದ್ಧಿ ಬಗ್ಗೆ ಅವರು ಸಾಕಷ್ಟು ಕಲ್ಪನೆಯನ್ನು ಹೊಂದಿದ್ದಾರೆ ಎಂದು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ತಿಳಿಸಿದರು.
ನಗರದ ಸರಸ್ವತಿಪುರಂ ವಿಜಯವಿಠಲ ಎಜುಕೇಷನಲ್ ಟ್ರಸ್ಟ್ ಇನ್ಸ್ಟಿಟ್ಯೂಟ್ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ಸಾರ್ವಜನಿಕರ ಸಂವಾದದಲ್ಲಿ ಅವರು ಮಾತನಾಡಿದರು.
ಇದು ಅವರಿಗೆ ರಾಜಕೀಯ ಪುನರ್ಜನ್ಮದ ಅವಕಾಶ. ಮೈಸೂರು ಅರಸರು ಆರೋಗ್ಯ, ಶಿಕ್ಷಣಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಯುವ ಸಂಸದರ ನೇತೃತ್ವದಲ್ಲಿ ಮೈಸೂರು ಇನ್ನಷ್ಟು ಅಭಿವೃದ್ಧಿ ಕಾಣಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಯದುವೀರ್ ಅವರನ್ನು ಈಗಾಗಲೇ ಸಂಸದ ಎಂದು ಜನರು ತೀರ್ವಾನಿಸಿದ್ದಾರೆ. ಈಗ ಜನರ ಜವಾಬ್ದಾರಿ ಹೆಚ್ಚಿದೆ. ಈ ಚುನಾವಣೆ ಮೈಸೂರಿನ ರಾಜರನ್ನು ನಾಲ್ಕೈದು ಲಕ್ಷ ಅಂತರದಿಂದ ಗೆಲ್ಲಿಸಬೇಕು. ಯದುವೀರ್ ಅವರಿಂದ ಇಡೀ ಕರ್ನಾಟಕ ಅಭಿವೃದ್ಧಿ ಆಗಬೇಕು ಎಂದು ಮನವಿ ಮಾಡಿದರು.
ಬಳಿಕ ಮಾತನಾಡಿದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ನಮ್ಮ ಪಕ್ಷ ಜಾತ್ಯಾತೀತವಾಗಿ ಕೆಲಸ ಮಾಡುತ್ತಿದೆ ಅದರಲ್ಲಿ ಯಾವ ಸಂಶಯವಿಲ್ಲ. ನಾನು ಜಾತಿ ನೋಡುವುದಿಲ್ಲ ಎಲ್ಲರೂ ಒಂದೇ ಎಂಬ ಮನೋಭಾವನೆ ಇಟ್ಟುಕೊಂಡು ಮತ ಯಾಚಿಸುತ್ತೇನೆ ಎಂದು ಹೇಳಿದರು.
ಮೈಸೂರು ಆರ್ಥಿಕವಾಗಿ ಸಬಲ ಮಾಡುವ ನಿಟ್ಟಿನಲ್ಲಿ ಪ್ರವಾಸೋದ್ಯಮವನ್ನು ಒಳಗೊಂಡಂತೆ ಅರ್ಗಾನಿಕ್ ಡೆವಲಪೆಂಟ್, ಸ್ವಚ್ಚತೆಗಾಗಿ ಬದಲಾವಣೆಯನ್ನು ತರಬೇಕಿರುವ ಬಯಕೆಯನ್ನು ಹೊಂದಿದ್ದೇನೆ. ಅಲ್ಲದೇ ಮೈಸೂರಿನಲ್ಲಿ ಸಂಸ್ಕೃತ ವಿಶ್ವವಿದ್ಯಾಲಯ ಆರಂಭಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.
ಲಿಂಗಾಬುದಿ ಕೆರೆ ಹಾಳಾಗುತ್ತಿದೆ. ಕೆರೆಗಳ ಸಂರಕ್ಷಣೆಗಾಗಿ ವಾರಾಂತ್ಯ ಸ್ವಚ್ಚತೆ ಸಂಬಂಧ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಹೆರಿಟೇಜ್ ಕಟ್ಟಡಗಳಿಗೆ ಆಸ್ತಿ ತೆರಿಗೆ ವಿನಾಯಿತಿ ಸೇರಿದಂತೆ ಕ್ರಮ ವಹಿಸಿ ಜೈಪುರ ಮಾದರಿಲ್ಲಿ ಮೈಸೂರು ಮೂಲ ಸಂಪ್ರದಾಯವನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು ಎಂದು ವಿವರಿಸಿದರು.
ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕೋಳಿ ಫಾರಂ ಶೆಡ್‌ಗೆ ಬೆಂಕಿ ತಗುಲಿ ಸುಮಾರು 4…
ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ…
ಶ್ರೀರಂಗಪಟ್ಟಣ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ…
ಬೆಂಗಳೂರು : ಕರ್ನಾಟಕ ಸರ್ಕಾರವು ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ…
ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್…
ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ…