ಮೈಸೂರು: ಇಲ್ಲಿನ ಊಟಿ ರಸ್ತೆಯಲ್ಲಿರುವ ಜೆಎಸ್ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು ಹಾಗೂ ಬೆಂಗಳೂರಿನ ಇನ್ ಸ್ಟಿಟ್ಯೂಟ್ ಆಫ್ ಮೀಡಿಯಾ ಸ್ಟಡೀಸ್ ಆಂಡ್ ರಿಸರ್ಚ್ (ಐಎಂಎಸ್ಆರ್) ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಪತ್ರಿಕೋದ್ಯಮದ ವಿದ್ಯಾರ್ಥಿಗಳಿಗೆ ಪತ್ರಿಕಾ ಬರಹ ಕೌಶಲ ಕುರಿತು ಎರಡು ದಿನಗಳ ಕಾರ್ಯಾಗಾರವನ್ನು ಮಾರ್ಚ್ 25, 26 ರಂದು ಏರ್ಪಡಿಸಲಾಗಿದೆ.
ಕಾರ್ಯಾಗಾರದ ಉದ್ಘಾಟನಾ ಸಮಾರಂಭವು ಮಾರ್ಚ್ 25 ರಂದು ಬೆಳಗ್ಗೆ 10.30 ಗಂಟೆಗೆ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ನಡೆಯಲಿದೆ.
ಕಾರ್ಯಾಗಾರವನ್ನು ಮೈಸೂರು ವಿಶ್ವವಿದ್ಯಾನಿಲಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥೆ ಪ್ರೊ.ಎನ್.ಮಮತಾ ಉದ್ಘಾಟಿಸುವರು. ಅಸ್ಸಾಂನ ಸಿಲ್ಚಾರ್ ನ ಕೇಂದ್ರೀಯ ವಿಶ್ವವಿದ್ಯಾನಿಲಯದ ವಿಶ್ರಾಂತ ಸಹ ಕುಲಪತಿ ಪ್ರೊ.ಕೆ.ವಿ.ನಾಗರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕಾಲೇಜಿನ ಚೀಫ್ ಎಕ್ಸಿಕ್ಯೂಟಿವ್ ಪ್ರೊ.ಬಿ.ವಿ.ಸಾಂಬಶಿವಯ್ಯ ಅಧ್ಯಕ್ಷತೆ ವಹಿಸುವರು. ಪ್ರಾಂಶುಪಾಲರಾದ ಡಾ.ಎಂ.ಪ್ರಭು, ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ತ್ರಿವೇಣಿ ಅವರು ಉಪಸ್ಥಿತರಿರುವರು.
ಕಾರ್ಯಾಗಾರದಲ್ಲಿ ಹಿರಿಯ ಪತ್ರಕರ್ತರಾದ ಎಚ್.ಆರ್.ಶ್ರೀಶ, ಎಂ.ನಾಗರಾಜ, ಹೊನಕೆರೆ ನಂಜುಂಡೇಗೌಡ, ಡಾ.ಕೂಡ್ಲಿ ಗುರುರಾಜ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸುವರು.
ಗ್
ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ…
ಬೆಂಗಳೂರು: ಮನರೇಗಾ ಯೋಜನೆ ಇದು ಬಡವರ ಹಕ್ಕು ಹಾಗೂ ಉದ್ಯೋಗ. ಬಡವರ ಹಕ್ಕಿಗೋಸ್ಕರ ನಾವು ಹೋರಾಟ ಮಾಡುತ್ತಿದ್ದೇವೆ. ಬಡವರಿಗೆ ಮನರೇಗಾ…
ಬೆಂಗಳೂರು: ಮನರೇಗಾ ಮರು ಜಾರಿ ಮಾಡುವವರೆಗೆ ನಾವು ಹೋರಾಟದ ಹಾದಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು…
ಮಂಡ್ಯ: ನಗರದ ಹೊರವಲಯದಲ್ಲಿರುವ ಅಗ್ರಿ ಕ್ಲಬ್ ಮೇಲೆ ದಾಳಿ ನಡೆಸಿರುವ ಮಂಡ್ಯ ಗ್ರಾಮಾಂತರ ಪೊಲೀಸರು ಜೂಜಾಟದಲ್ಲಿ ತೊಡಗಿದ್ದ 29 ಮಂದಿಯನ್ನು…
ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್ ನಾಯಕರು…
ಚಾಮರಾಜನಗರ: ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು…