ಮೈಸೂರು : ಕೇಂದ್ರ ಸರ್ಕಾರವು ಪೆಟ್ರೋಲ್, ಡಿಸೇಲ್ ಹಾಗೂ ಅನಿಲ ದರ ಏರಿಸಿರುವುದನ್ನು ಖಂಡಿಸಿ ಜಿಲ್ಲಾ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ರಾಮಸ್ವಾಮಿ ವೃತ್ತದ ಬಳಿ ಗ್ರಾಮಾಂತರ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಚಂದನ್ ಗೌಡ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಕಾರರು. ಖಾಲಿ ಸಿಲಿಂಡರ್‌ನ್ನು ರಸ್ತೆಯಲ್ಲಿಟ್ಟು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ ಪ್ರತಿಭಟನಕಾರರು, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾತೈಲದ ಬೆಲೆ ಇಳಿಕೆ ಕಂಡಿದ್ದರೂ ದೇಶದಲ್ಲಿ ಇಂಧನದ ಬೆಲೆ ಏರಿಸಿರುವುದು ಮೋದಿ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ. ಇದನ್ನು ರಾಜ್ಯ ಬಿಜೆಪಿ ಅವರು ಸಮರ್ಥಿಸುತ್ತಿರುವುದು ವಿಷಾದನೀಯ ಎಂದರು.
ಪ್ರತಿಭಟನೆಯಲ್ಲಿ ನೂರಾರು ಯೂತ್ ಕಾಂಗ್ರೆಸ್ ನ ಕಾರ್ಯಕರ್ತರು ಭಾಗಿಯಾಗಿದ್ದರು.





