ಮೈಸೂರು

ಮೈಸೂರು: ಬಿಲ್ ಬಾಕಿ ಇದ್ದರೆ ಅ.7 ರಿಂದ ವಿದ್ಯುತ್‌ ಸಂಪರ್ಕ ಕಡಿತ

ಮೈಸೂರು: ಅವಧಿ ಮೀರಿದ್ದರೂ ವಿದ್ಯುತ್‌ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿದ್ದಲ್ಲಿ, ಅ.7ರಿಂದ ವಿದ್ಯುತ್‌ ಸಂಪರ್ಕ ಕಡಿತಗೊಳಿಸುವುದಾಗಿ ಸೆಸ್ಕ್‌ ತಿಳಿಸಿದೆ.

ಎಲ್ಲಾ ಪ್ರವರ್ಗದ ವಿದ್ಯುತ್ ಗ್ರಾಹಕರು, ಸರ್ಕಾರಿ ಇಲಾಖೆಗಳು ಸೇರಿದಂತೆ ತಮ್ಮ ವಿದ್ಯುತ್ ಸ್ಥಾವರಗಳ ಬಾಕಿ ವಿದ್ಯುತ್ ಶುಲ್ಕವನ್ನು 7 ದಿನದೊಳಗೆ ಪಾವತಿಸುವಂತೆ ಮಾಧ್ಯಮಗಳ ಮೂಲಕ 25.09.2024ರಲ್ಲಿ ಕೋರಲಾಗಿತ್ತು. ಆದರೂ, ಬಹುತೇಕ ಗ್ರಾಹಕರು ವಿದ್ಯುತ್‌ ಬಾಕಿ ಉಳಿಸಿಕೊಂಡಿದ್ದಾರೆ.

ಬಾಕಿ ಇರುವ ವಿದ್ಯುತ್‌ ಶುಲ್ಕ ಪಾವತಿಗೆ ನಿಗಮದಿಂದ ನೀಡಲಾಗಿದ್ದ 7 ದಿನಗಳ ಗಡುವು ಮುಗಿದಿದೆ. ಈ ಹಿನ್ನೆಲೆಯಲ್ಲಿ ವಿದ್ಯುತ್‌ ಶುಲ್ಕ ಬಾಕಿ ಉಳಿಸಿಕೊಂಡಿರುವ ಎಲ್ಲ ಗ್ರಾಹಕರ, ಸರ್ಕಾರಿ ಇಲಾಖೆಗಳ ವಿದ್ಯುತ್‌ ಸಂಪರ್ಕ ಕಡಿತಗೊಳಿಸುವುದು ಅನಿವಾರ್ಯವಾಗಿದ್ದು, 2024ರ ಅ.7ರಿಂದ ಸಾಮೂಹಿಕ ವಿದ್ಯುತ್‌ ನಿಲುಗಡೆ ಅಭಿಯಾನದ ಅಡಿಯಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗುವುದು.

ಅಲ್ಲದೇ ವಿದ್ಯುತ್‌ ಸಂಪರ್ಕ ಕಡಿತದಿಂದ ಉಂಟಾಗುವ ಅನಾನುಕೂಲಗಳಿಗೆ ಯಾವುದೇ ರೀತಿಯಲ್ಲೂ ಸೆಸ್ಕ್‌ ಜವಾಬ್ದಾರಿ ಆಗುವುದಿಲ್ಲ ಎಂದು ಪತ್ರಿಕಾ ಪ್ರಕಟಣೆಯ ಮೂಲಕ ಸ್ಪಷ್ಟಪಡಿಸಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಶಾಸಕರ ಅಸಂಬದ್ಧ ಹೇಳಿಕೆ

ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…

2 hours ago

ಓದುಗರ ಪತ್ರ: ಅಮಿತ್‌ ಶಾ ಹೇಳಿಕೆ ಖಂಡನೀಯ

ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…

2 hours ago

ವಾಹನ ಸಂಚಾರಕ್ಕೆ ಸಂಚಕಾರ ತರುತ್ತಿರುವ ಅವರೆಕಾಯಿ ವ್ಯಾಪಾರ

ದಾ.ರಾ. ಮಹೇಶ್‌ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…

3 hours ago

ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

  ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…

4 hours ago

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

13 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

13 hours ago