ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ.
ಹುಣಸೂರು ತಾಲ್ಲೂಕಿನ ಗೌಡನಕಟ್ಟೆ ಗ್ರಾಮದಲ್ಲಿ ನವೆಂಬರ್.29ರಂದು ತಾಯಿಯೊಂದಿಗೆ 4 ಹುಲಿ ಮರಿಗಳು ಸೆರೆ ಸಿಕ್ಕಿದ್ದವು.
ಇದನ್ನು ಓದಿ: ನವೆಂಬರ್‌ನಲ್ಲೇ 1.59 ಕೋಟಿ ರೂ ರಾಜಸ್ವ ಸಂಗ್ರಹ
ಆಹಾರ ಸೇವಿಸದೇ ಅಸ್ವಸ್ಥಗೊಂಡಿದ್ದ ಹುಲಿ ಮರಿಗಳೀಗ ಮೃತಪಟ್ಟಿವೆಯೆಂದು ತಿಳಿದುಬಂದಿದೆ. ಮರಿಗಳ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಪಶುವೈದ್ಯರು ಮೃತ ಹುಲಿ ಮರಿಗಳ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕವಷ್ಟೇ ಹುಲಿ ಮರಿಗಳ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ. ಸದ್ಯ ತಾಯಿ ಹುಲಿ ಆರೋಗ್ಯವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.




