ಮೈಸೂರು

ನಮ್ಮ ಬಳಿ ರಾಜಮನೆತನಕ್ಕೆ ಸೇರಿದ ಯಾವುದೇ ದಾಖಲೆಗಳಿಲ್ಲ: ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪನಾಗ್

ಮೈಸೂರು: 5 ಸಾವಿರ ಎಕರೆ ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲಾಧಿಕಾರಿಗೆ ರಾಜಮಾತೆ ಪ್ರಮೋದಾದೇವಿ ಒಡೆಯರ್ ಪತ್ರ ಬರೆದಿದ್ದ ವಿಚಾರ ಇದೀಗ ಭಾರೀ ಸದ್ದು ಮಾಡುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಚಾ.ನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಪ್ರತಿಕ್ರಿಯೆ ನೀಡಿದ್ದು, ನಮ್ಮ ಬಳಿ ರಾಜಮನೆತನಕ್ಕೆ ಸೇರಿದ ಯಾವುದೇ ದಾಖಲೆಗಳಿಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಬಳಿ ರಾಜಮನೆತನಕ್ಕೆ ಸೇರಿದ ಯಾವುದೇ ದಾಖಲೆಗಳಿಲ್ಲ. ಆದ್ದರಿಂದ ಸಾರ್ವಜನಿಕರು ಆತಂಕಪಡುವ ಪ್ರಮೇಯವಿಲ್ಲ. ರಾಜಮಾತೆ ಅವರು ಕಳೆದ ಮಾರ್ಚ್ ಕೊನೆಯ ವಾರದಂದು ತಕರಾರು ಪತ್ರ ಬರೆದಿದ್ದಾರೆ. ಅದರಲ್ಲಿ ಅಟ್ಟುಗುಳಿಪುರ ಸೇರಿದಂತೆ 7-8 ಗ್ರಾಮಗಳಲ್ಲಿ ನಮ್ಮ ಜಮೀನುಗಳ ಮೇಲೆ ಹಕ್ಕುಗಳಿವೆ. ಹೀಗಾಗಿ ಕಂದಾಯ ಗ್ರಾಮ ಎಂದು ಕಳುಹಿಸಬೇಡಿ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಆದರೆ ನಮಗೆ ಪತ್ರದೊಂದಿಗೆ ಯಾವುದೇ ಸೂಕ್ತ ದಾಖಲೆಗಳನ್ನು ನೀಡಿಲ್ಲ. ಸದ್ಯ ಪತ್ರವನ್ನು ಎಸಿ ಹಾಗೂ ತಹಸೀಲ್ದಾರ್ ಅವರಿಗೆ ಪರಿಶೀಲಿಸುವಂತೆ ತಿಳಿಸಿದ್ದೇನೆ. ಪರಿಶೀಲಿಸಿದ ನಂತರ ಎಲ್ಲಾ ಮಾಹಿತಿ ದೊರೆಯಲಿದೆ. ನಮ್ಮ ಬಳಿ ರಾಜಮನೆತನಕ್ಕೆ ಸೇರಿದ ಆಸ್ತಿ ಎಂದು ಇದುವರೆಗೂ ಯಾವುದೇ ದಾಖಲೆ ದೊರೆತಿಲ್ಲ. ಅವರು ತಕರಾರು ಪತ್ರ ಬರೆದಿರುವ ಹಿನ್ನೆಲೆಯಲ್ಲಿ ಅದನ್ನು ಪರಿಶೀಲನೆ ನಡೆಸಲು ಹೇಳಿದ್ದೇವೆ. ಒಂದು ವಾರದೊಳಗೆ ದಾಖಲೆ ಪರಿಶೀಲಿಸಿ ವರದಿ ನೀಡುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ? | ಹಾಲಿನ ದರ ಏರಿಕೆ ನಡುವೆ ಕಾಫಿ,ಟೀ ಬೆಲೆ ಹೆಚ್ಚುವ ಸಾಧ್ಯತೆ

ಬೆಂಗಳೂರು : ಹಾಲಿನ ದರ ಏರಿಕೆ ಕುರಿತು ರಾಜ್ಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ…

52 mins ago

ಕೆಪಿಎಸ್‌ಸಿ ಅಕ್ರಮ | 1.52 ಕೋಟಿ ಹಣ ಪಾವತಿ ಪತ್ತೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ…

1 hour ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ನೆರಳಿನಂತಿದ್ದ ಕಸ್ತೂರ ಬಾ

ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗೊಂದಲಗೊಳಿಸುತಿದ್ದ ಹಲವು ಸಂದೇಹಗಳು

ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…

3 hours ago

ಯುಪಿಯಲ್ಲಿ ತಯಾರಾಗುತ್ತಿರುವ ಬ್ರಹ್ಮೋಸ್‌ ಕ್ಷಿಪಣಿಗಳು ಪಾಕ್‌ ನಿದ್ದೆಗೆಡಿಸಿವೆ: ಅಮಿತ್‌ ಶಾ

ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.…

21 hours ago

ಪ್ರಜಾಪ್ರಭುತ್ವ ರಕ್ಷಿಸಲು ಗಾಂಧಿ ಜಯಂತಿಯಂದು ಪ್ರತಿಜ್ಞೆ ಮಾಡೋಣ: ಅಭಿಜಿತ್‌ ದೀಪ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…

22 hours ago