ಮೈಸೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಿರುಕುಳಕ್ಕೆ ಆತ್ಮಹತ್ಯೆ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಇದೀಗ ಮತ್ತೊಬ್ಬ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೈಸೂರು ಜಿಲ್ಲೆಯ ಎಚ್‌ಡಿ ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದ ರೈತ ಜಯರಾಮು (55) ಎಂಬಾತ ಪೈಕ್ರೋ ಫೈನಾನ್ಸ್‌ಗಳ ಹಾವಳಿಗೆ ಬಲಿಯಾದ ವ್ಯಕ್ತಿ. ಈತ ಇಕ್ವಿಟಾಸ್, ಜನಬ್ಯಾಂಕ್, ಮೈಕ್ರೋ ಫೈನಾನ್ಸ್ ಕಂಪನಿಗಳಲ್ಲಿ ಸುಮಾರು 5 ಲಕ್ಷವರೆಗೆ ಸಾಲ ಪಡೆದಿದ್ದರು.
ಜಯರಾಮು ಎಂಬಾತ ಮಕ್ಕಳ ಮದುವೆ ಹಾಗೂ ಕೃಷಿಗಾಗಿ ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಸಾಲ ಪಡೆದಿದ್ದ. ಅವನಿಗಿದ್ದ ಎರಡು ಎಕರೆ ಜಮೀನಿನಲ್ಲಿ ಕೃಷಿ ಮಾಡಿ ಸಾಲ ತೀರಿಸುತ್ತಾ ಬರುತ್ತಿದ್ದ. ಇತ್ತೀಚಿಗೆ ಮೈಕ್ರೋ ಫೈನಾನ್ಸ್ ಕಂಪನಿಗಳ ಸಿಬ್ಬಂದಿಗಳಿಂದ ಕಿರುಕುಳ ಹೆಚ್ಚಾಗಿದ್ದು, ಸಾಲ ತೀರಿಸಲಾಗದೆ ತಮ್ಮ ಜಮೀನಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಎಚ್ ಡಿ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.