ಮೈಸೂರು

ಮೈಸೂರು | ಮೈಮುಲ್‌ ಅಧ್ಯಕ್ಷ ಸ್ಥಾನಕ್ಕೆ ಚೆಲುವರಾಜು ರಾಜೀನಾಮೆ

ಮೈಸೂರು : ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ (ಮೈಮುಲ್) ಅಧ್ಯಕ್ಷ ಸ್ಥಾನಕ್ಕೆ ಆರ್.ಚೆಲುವರಾಜು ರಾಜೀನಾಮೆ ನೀಡಿದ್ದಾರೆ.

ಅಧಿಕಾರ ಹಂಚಿಕೆಯ ಒಪ್ಪಂದದಂತೆ ಹೈಕಮಾಂಡ್ ನಿರ್ದೇಶನದ ಮೇರೆಗೆ ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ. ವಾಪಸ್ ಪಡೆಯಲು ಹದಿನೈದು ದಿನಗಳ ಸಮಯವಿದೆ. ಕಳೆದ ಎರಡು ತಿಂಗಳಿನಿಂದ ರಾಜೀನಾಮೆ ವಿಚಾರದಲ್ಲಿ ನಡೆಯುತ್ತಿದ್ದ ಆಂತರಿಕ ಮುಸುಕಿನ ಗುದ್ದಾಟಕ್ಕೂ ಬ್ರೇಕ್ ಬಿದ್ದಿದೆ.

ಮೈಮುಲ್‌ನ ಐದು ವರ್ಷಗಳ ಆಡಳಿತಮಂಡಳಿಯ ಚುನಾವಣೆ ನಡೆದು ಮೊದಲಿಗೆ ಪಿರಿಯಾಪಟ್ಟಣ ಕ್ಷೇತ್ರದ ಮಾಜಿ ಶಾಸಕ ಕೆ.ಮಹದೇವ ಪುತ್ರ ಪಿ.ಎಂ. ಪ್ರಸನ್ನ ಆಯ್ಕೆಯಾಗಿದ್ದರು. ನಂತರ, ತಮಗೆ ಮುಕ್ತವಾಗಿ ಕೆಲಸ ಮಾಡಲು ಸಚಿವರೊಬ್ಬರು ಅವಕಾಶ ಕೊಡದೆ ಕಿರುಕುಳ ನೀಡುತ್ತಿದ್ದಾರೆಂದು ರಾಜೀನಾಮೆ ನೀಡಿದ್ದರು. ನಂತರ, 2024 ಆಗಸ್ಟ್ ತಿಂಗಳ 8 ರಂದು ನಡೆದ ಚುನಾವಣೆಯಲ್ಲಿ ತಿ.ನರಸೀಪುರ ತಾಲ್ಲೂಕಿನ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದ ಆರ್.ಚೆಲುವರಾಜು ಅವಿರೋಧವಾಗಿ ಆಯ್ಕೆಯಾಗಿದ್ದರು. ಇದೀಗ ಪಕ್ಷದ ಒಳಗೆ ನಡೆದ ಅಽಕಾರ ಹಂಚಿಕೆ ಪ್ರಕಾರ ಸೋಮವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಉಳಿದ ಅವಧಿಗೆ ಎಚ್.ಡಿ.ಕೋಟೆ ತಾಲ್ಲೂಕಿನ ಈರೇಗೌಡ ಅವರಿಗೆ ಅವಕಾಶ ದೊರೆಯುವ ಸಾಧ್ಯತೆ ಇದೆ. ಎರಡು ತಿಂಗಳಿಂದ ಅಧ್ಯಕ್ಷ ಆರ್.ಚೆಲುವರಾಜು ಅವರಿಂದ ರಾಜೀನಾಮೆ ಕೊಡಿಸುವಂತೆ ಆಕಾಂಕ್ಷಿ ಈರೇಗೌಡ ಸೇರಿದಂತೆ ಕಾಂಗ್ರೆಸ್ ಶಾಸಕರು ಒತ್ತಡ ಹೇರಿದ್ದರು. ಬಳಿಕ, ಎರಡು ತಿಂಗಳ ಸಮಯ ಪಡೆದಿದ್ದ ಚೆಲುವರಾಜು ಕೊನೆಗೂ ರಾಜೀನಾಮೆ ಕೊಟ್ಟಿದ್ದಾರೆ.

ಆಂದೋಲನ ಡೆಸ್ಕ್

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

11 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

12 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

13 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

13 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

13 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

16 hours ago