Mysore
23
haze

Social Media

ಶುಕ್ರವಾರ, 10 ಜನವರಿ 2025
Light
Dark

Mysuru dasara 2024: ದಸರಾ ಮಹೋತ್ಸವ: ಕವಿಗೋಷ್ಠಿಗೆ ಅರ್ಜಿ ಆಹ್ವಾನ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕವಿಗೋಷ್ಠಿ ಉಪ ಸಮಿತಿಯಿಂದ ಅಕ್ಟೋಬರ್ 05 ರಿಂದ 09 ರವರೆಗೆ ಐದು ದಿನಗಳ ವೈವಿಧ್ಯಮಯ ಕವಿಗೋಷ್ಠಿ ಕಾರ್ಯಕ್ರಮಗಳನ್ನು ಜಗನ್ಮೋಹನ ಅರಮನೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದು, ಪ್ರಾದೇಶಿಕ ಕವಿಗೋಷ್ಠಿ ಹಾಗೂ ವಿಖ್ಯಾತ ಕವಿಗೋಷ್ಠಿಗೆ ಕವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ರಾದೇಶಿಕ ಕವಿಗೋಷ್ಠಿಗೆ ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ಮಡಿಕೇರಿ ಜಿಲ್ಲೆಗಳ ಕವಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸುವವರು ಕನಿಷ್ಠ ಒಂದು ಕವನ ಸಂಕಲನ ಪ್ರಕಟಿಸಿರಬೇಕು ಹಾಗೂ ವಿಖ್ಯಾತ ಕವಿಗೋಷ್ಠಿಗೆ ಕರ್ನಾಟಕದ ಎಲ್ಲಾ ಜಿಲ್ಲೆಗಳಿಂದ ಒಬ್ಬರಂತೆ ಭಾಗವಹಿಸಲು ಅವಕಾಶವಿದೆ. ಅರ್ಜಿ ಸಲ್ಲಿಸುವವರು ಕನಿಷ್ಠ ಎರಡು ಕವನ ಸಂಕಲನಗಳನ್ನು ಪ್ರಕಟಿಸಿರಬೇಕು. ಕವಿತೆಗಳು ಕಡ್ಡಾಯವಾಗಿ ಕನ್ನಡದಲ್ಲಿರಬೇಕು. ಕಳೆದ ಎರಡು ವರ್ಷಗಳಿಂದ ದಸರಾ ಕವಿಗೋಷ್ಠಿಯಲ್ಲಿ ಭಾಗವಹಿಸದವರು ತಮ್ಮ ಸ್ವ ವಿವರ ಮತ್ತು ಕವನ ಸಂಕಲನಗಳೊoದಿಗೆ ಅರ್ಜಿಗಳನ್ನು ದಸರಾ ಕವಿಗೋಷ್ಠಿ ಉಪಸಮಿತಿಯ ಕಾರ್ಯಾಧ್ಯಕ್ಷರು ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರಿಗೆ ನೇರವಾಗಿ ಅಥವಾ ನೊಂದಾಯಿತ ಅಂಚೆ ಮೂಲಕ ಸೆಪ್ಟಂಬರ್ 12 ರ ಸಂಜೆ 5 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ: 9902242703, 6360351727 ಹಾಗೂ ಕವಿಗಳಿಗೆ ಕಾರ್ಯಕ್ರಮಕೊಡಿಸುವುದಾಗಿ ಯಾವುದೇ ಮಧ್ಯವರ್ತಿಗಳು ಸಂಪರ್ಕಿಸಿ ಹಣದ ಬೇಡಿಕೆ ಇಟ್ಟಲ್ಲಿ ತಕ್ಷಣ ಮಾಹಿತಿ ಸಮೇತ ಮೇಲ್ಕಾಣಿಸಿದ ನಿರ್ದೇಶಕರ ಕಚೇರಿಗೆ ದೂರು ಸಲ್ಲಿಸಬಹುದು ಎಂದು ದಸರಾ ಕವಿಗೋಷ್ಠಿ ಉಪ ಸಮಿತಿಯ ಕಾರ್ಯದರ್ಶಿ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags: