ಮೈಸೂರು

Mysuru dasara 2024: ದಸರಾ ಮಹೋತ್ಸವ: ಕವಿಗೋಷ್ಠಿಗೆ ಅರ್ಜಿ ಆಹ್ವಾನ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕವಿಗೋಷ್ಠಿ ಉಪ ಸಮಿತಿಯಿಂದ ಅಕ್ಟೋಬರ್ 05 ರಿಂದ 09 ರವರೆಗೆ ಐದು ದಿನಗಳ ವೈವಿಧ್ಯಮಯ ಕವಿಗೋಷ್ಠಿ ಕಾರ್ಯಕ್ರಮಗಳನ್ನು ಜಗನ್ಮೋಹನ ಅರಮನೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದು, ಪ್ರಾದೇಶಿಕ ಕವಿಗೋಷ್ಠಿ ಹಾಗೂ ವಿಖ್ಯಾತ ಕವಿಗೋಷ್ಠಿಗೆ ಕವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ರಾದೇಶಿಕ ಕವಿಗೋಷ್ಠಿಗೆ ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ಮಡಿಕೇರಿ ಜಿಲ್ಲೆಗಳ ಕವಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸುವವರು ಕನಿಷ್ಠ ಒಂದು ಕವನ ಸಂಕಲನ ಪ್ರಕಟಿಸಿರಬೇಕು ಹಾಗೂ ವಿಖ್ಯಾತ ಕವಿಗೋಷ್ಠಿಗೆ ಕರ್ನಾಟಕದ ಎಲ್ಲಾ ಜಿಲ್ಲೆಗಳಿಂದ ಒಬ್ಬರಂತೆ ಭಾಗವಹಿಸಲು ಅವಕಾಶವಿದೆ. ಅರ್ಜಿ ಸಲ್ಲಿಸುವವರು ಕನಿಷ್ಠ ಎರಡು ಕವನ ಸಂಕಲನಗಳನ್ನು ಪ್ರಕಟಿಸಿರಬೇಕು. ಕವಿತೆಗಳು ಕಡ್ಡಾಯವಾಗಿ ಕನ್ನಡದಲ್ಲಿರಬೇಕು. ಕಳೆದ ಎರಡು ವರ್ಷಗಳಿಂದ ದಸರಾ ಕವಿಗೋಷ್ಠಿಯಲ್ಲಿ ಭಾಗವಹಿಸದವರು ತಮ್ಮ ಸ್ವ ವಿವರ ಮತ್ತು ಕವನ ಸಂಕಲನಗಳೊoದಿಗೆ ಅರ್ಜಿಗಳನ್ನು ದಸರಾ ಕವಿಗೋಷ್ಠಿ ಉಪಸಮಿತಿಯ ಕಾರ್ಯಾಧ್ಯಕ್ಷರು ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರಿಗೆ ನೇರವಾಗಿ ಅಥವಾ ನೊಂದಾಯಿತ ಅಂಚೆ ಮೂಲಕ ಸೆಪ್ಟಂಬರ್ 12 ರ ಸಂಜೆ 5 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ: 9902242703, 6360351727 ಹಾಗೂ ಕವಿಗಳಿಗೆ ಕಾರ್ಯಕ್ರಮಕೊಡಿಸುವುದಾಗಿ ಯಾವುದೇ ಮಧ್ಯವರ್ತಿಗಳು ಸಂಪರ್ಕಿಸಿ ಹಣದ ಬೇಡಿಕೆ ಇಟ್ಟಲ್ಲಿ ತಕ್ಷಣ ಮಾಹಿತಿ ಸಮೇತ ಮೇಲ್ಕಾಣಿಸಿದ ನಿರ್ದೇಶಕರ ಕಚೇರಿಗೆ ದೂರು ಸಲ್ಲಿಸಬಹುದು ಎಂದು ದಸರಾ ಕವಿಗೋಷ್ಠಿ ಉಪ ಸಮಿತಿಯ ಕಾರ್ಯದರ್ಶಿ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ | ಐನ್‌ಸ್ಟೀನ್‌ ಕಂಡಂತೆ ಮಹಾತ್ಮ ಗಾಂಧೀಜಿ

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ ಆಲ್ಬರ್ಟ್ ಐನ್‌ಸ್ಟೀನ್ ಗಾಂಧೀಜಿಯವರನ್ನು ಕುರಿತು ಬರೆಯುತ್ತಾ, ‘ಗಾಂಧಿ…

1 hour ago

ಸ್ಕ್ಯಾನಿಂಗ್‌ ಸೆಂಟರ್‌ ಪರಿಶೀಲನೆಗೆ ಸಮಿತಿ ; ಪಿಸಿಪಿಎನ್‌ಡಿಟಿ ಕಾಯ್ದೆ ಉಲ್ಲಂಘಿಸುವವರ ವಿರುದ್ಧ ಕ್ರಮ : ಡಿಸಿ ಎಚ್ಚರಿಕೆ

ಮಂಡ್ಯ : ಇತ್ತೀಚೆಗೆ ಕೆ.ಆರ್.ಪೇಟೆ ಪಟ್ಟಣದ ಎರಡು ಖಾಸಗಿ ಡಯಾಗ್ನಾಸ್ಟಿಕ್ (ಸ್ಕ್ಯಾನಿಂಗ್) ಸೆಂಟರ್‌ಗಳಲ್ಲಿ ಕಾನೂನುಬಾಹಿರವಾಗಿ ಭ್ರೂಣಲಿಂಗ ಪತ್ತೆ ಮಾಡುತ್ತಿರುವುದನ್ನು ಲೋಕಾಯುಕ್ತ…

1 hour ago

ಕರ ಭಾರದ ನಡುವೆ ಘನ ತ್ಯಾಜ್ಯ ವಿಲೇವಾರಿಗೂ ಸೆಸ್‌

ಜನಪ್ರತಿನಿಧಿಗಳ ಆಡಳಿತವಿಲ್ಲದ ನಗರಪಾಲಿಕೆಯಲ್ಲಿ ಅಧಿಕಾರಿಗಳ ಅಂಧ ದರ್ಬಾರ್‌ ಮೈಸೂರು : ಗ್ಯಾಸ್ ದರ ಹೆಚ್ಚಳ..., ವಿದ್ಯುತ್ ದರ ಹೆಚ್ಚಳ..., ನೀರಿನ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 25 ಶನಿವಾರ

2 hours ago

ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕ್ರಮ: ಸಚಿವ ಸುಧಾಕರ್‌

ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌…

12 hours ago

ರಾಜ್ಯ ಸಂಚಾರ ಪೊಲೀಸರ ಆರೋಗ್ಯ ರಕ್ಷಣೆಗೆ ಕ್ರಮ: ಮಾಸ್ಕ್‌ ನೀರು, ನೆರಳಿನ ವ್ಯವಸ್ಥೆಗೆ ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…

12 hours ago