ಮೈಸೂರು

Mysuru dasara 2024 : ದಸರಾ ಉಪಸಮಿತಿ ರಚನೆ, ಅಧಿಕಾರಿಗಳಿಗೆ ಜವಾಬ್ದಾರಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಅದ್ದೂರಿಯಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ ದಸರಾ ಮಹೋತ್ಸವದ ಕಾರ್ಯಕ್ರಮಗಳನ್ನು ವಿಜೃಂಭಣೆಯಿಂದ ಆಯೋಜಿಸಲು 19 ಉಪಸಮಿತಿಗಳನ್ನು ರಚಿಸಿ ದಸರಾ ವಿಶೇಷಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮಿಕಾಂತ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ವಿವಿಧ ಇಲಾಖೆಗಳ ಅಧಿಕಾರಿಗಳನ್ನು ದಸರಾ ಮಹೋತ್ಸವದ ಉಪ ವಿಶೇಷಾಧಿಕಾರಿ, ಕಾರ್ಯಧ್ಯಕ್ಷರು ಹಾಗೂ ಕಾರ್ಯದರ್ಶಿಗಳನ್ನು ನೇಮಿಸಲಾಗಿದೆ. 19 ಉಪಸಮಿತಿಗಳ ಪಟ್ಟಿ ಇಲ್ಲಿದೆ.

ಸ್ವಾಗತ ಆಮಂತ್ರಣ ಮತ್ತು ಸ್ಥಳಾವಕಾಶ: ಅಪರ ಜಿಲ್ಲಾಧಿಕಾರಿಗಳಾದ ಡಾ.ಪಿ.ಶಿವರಾಜು  ಉಪ ವಿಶೇಷಾಧಿಕಾರಿಯಾಗಿ, ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ರೂಪ  ಕಾರ್ಯಾಧ್ಯಕ್ಷರು, ಮೈಸೂರು ಮಹಾನಗರ ಪಾಲಿಕೆಯ ಅಧೀಕ್ಷಕ ಅಭಿಯಂತರರಾದ ಸಿಂಧು(ಸಹ ಕಾರ್ಯಾಧ್ಯಕ್ಷರು), ಮೈಸೂರು ಉಪ ವಿಭಾಗದ ಉಪ ವಿಭಾಗಾಧಿಕಾರಿಗಳಾದ ರಕ್ಷಿತ್ ಕೆ.ಆರ್ ಸ್ಥಳಾವಕಾಶದ ಕಾರ್ಯಧ್ಯಕ್ಷರಾಗಿ ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆದ ಕುಬೇರಪ್ಪ ಹಾಗೂ ಮೈಸೂರು ತಹಶೀಲ್ದಾರರಾದ ಮಹೇಶ್ ಕುಮಾರ್ ಅವರನ್ನು ಕಾರ್ಯದರ್ಶಿಗಳಾಗಿ ನೇಮಿಸಲಾಗಿದೆ.

ಮೆರವಣಿಗೆ : ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಉಪ ವಿಶೇಷಾಧಿಕಾರಿಯಾಗಿ, ಕಾರ್ಯಾಧ್ಯಕ್ಷರಾಗಿ ಕಾನೂನು ಮತ್ತು ಸುವ್ಯವಸ್ಥೆಯ ಉಪ ಪೊಲೀಸ್ ಆಯುಕ್ತರಾದ ಮುತ್ತುರಾಜ್ ಹಾಗೂ ಕಾರ್ಯದರ್ಶಿಗಳಾಗಿ ದೇವರಾಜ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶಾಂತ ಮಲ್ಲಪ್ಪ ಹಾಗೂ ಸಮನ್ವಯಾಧಿಕಾರಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಎಂ.ಡಿ.ಸುದರ್ಶನ್ ಅವರನ್ನು ನೇಮಿಸಲಾಗಿದೆ.

ಪಂಜಿನ ಕವಾಯಿತು: ಉಪ ವಿಶೇಷಾಧಿಕಾರಿಯಾಗಿ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಹಾಗೂ ಕಾರ್ಯಾಧ್ಯಕ್ಷರಾಗಿ ನಗರ ಸಂಚಾರ ಉಪ ಪೊಲೀಸ್ ಆಯುಕ್ತರಾದ ಜಾಹ್ನವಿ, ಸಿ.ಎ.ಆರ್ ಉಪ ಪೊಲೀಸ್ ಆಯುಕ್ತರಾದ ಮಾರುತಿ  ಹಾಗೂ ಕಾರ್ಯದರ್ಶಿಗಳಾಗಿ ನರಸಿಂಹರಾಜ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಸಿ.ಕೆ ಅಶ್ವಥ್ ನಾರಾಯಣ್ ಹಾಗೂ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರೂಪಶ್ರೀ ಅವರನ್ನು ನೇಮಿಸಲಾಗಿದೆ.

ಸ್ತದ್ಭಚಿತ್ರ: ಉಪ ವಿಶೇಷಾಧಿಕಾರಿಯಾಗಿ ಜಿಲ್ಲಾ ಪಂಚಾಯತ್‌ನ ಮುಖ್ಯ ಯೋಜನಾಧಿಕಾರಿ (ಪ್ರಭಾರ) ಪ್ರಭುಸ್ವಾಮಿ, ಕಾರ್ಯಾಧ್ಯಕ್ಷರಾಗಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ರಂಜಿತ್ ಹಾಗೂ ಕಾರ್ಯದರ್ಶಿಯಾಗಿ ಜಿಲ್ಲಾ ಪಂಚಾಯತ್‌ನ ಖಾದಿ ಮತ್ತು ಗ್ರಾಮೋದ್ಯೋಗ ಇಲಾಖೆಯ ಉಪನಿರ್ದೇಶಕರಾದ ಮೇಘಲಾ ಅವರನ್ನು ನೇಮಿಸಲಾಗಿದೆ.

ರೈತ ದಸರಾ (ಗ್ರಾಮೀಣ ದಸರಾ): ಉಪ ವಿಶೇಷಾಧಿಕಾರಿಯಾಗಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಕೃಷ್ಣಂರಾಜು, ಕಾರ್ಯಧ್ಯಕ್ಷರಾಗಿ ಜಂಟಿ ಕೃಷಿ ನಿರ್ದೇಶಕರಾದ ಚಂದ್ರಶೇಖರ್ ಸಹಕಾರ್ಯಾಧ್ಯಕ್ಷರಾಗಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ಶಿವಲಿಂಗಯ್ಯ ಹಾಗೂ ಕಾರ್ಯದರ್ಶಿಗಳಾಗಿ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ್ ಅವರನ್ನು ನೇಮಿಸಲಾಗಿದೆ.

ಕ್ರೀಡಾ ದಸರಾ: ಉಪ ವಿಶೇಷಾಧಿಕಾರಿಯಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾದ ಪ್ರಸನ್ನ ಕುಮಾರ್ ವಿ.ಕೆ, ಕಾರ್ಯಾಧ್ಯಕ್ಷರಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರಾದ ಡಾ.ಜಿತೇಂದ್ರ ಶೆಟ್ಟಿ  ಹಾಗೂ ಕಾರ್ಯದರ್ಶಿಯಾಗಿ ಯುವಜನ ಸೇವಾ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಭಾಸ್ಕರ್ ನಾಯಕ್ ಅವರನ್ನು ನೇಮಿಸಲಾಗಿದೆ.

ಸಾಂಸ್ಕೃತಿಕ ದಸರಾ: ಅರಮನೆ ವೇದಿಕೆಗೆ ಉಪ ವಿಶೇಷಾಧಿಕಾರಿಯಾಗಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಎಂ ಗಾಯಿತ್ರಿ , ಕಾರ್ಯಧ್ಯಕ್ಷರಾಗಿ ಅರಮನೆ ಮಂಡಳಿಯ ಉಪ ನಿರ್ದೇಶಕರಾದ ಸುಬ್ರಮಣ್ಯ ಟಿ.ಎನ್  ಹಾಗೂ ಕಾರ್ಯದರ್ಶಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಎಂ.ಡಿ.ಸುದರ್ಶನ್ ಅವರನ್ನು ನೇಮಿಸಲಾಗಿದ್ದು, ಇತರೆ ವೇದಿಕೆ ಕಾರ್ಯಕ್ರಮಕ್ಕೆ ಕಾರ್ಯಧ್ಯಕ್ಷರಾಗಿ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರುದ್ರೇಶ್ ಅವರನ್ನು ನೇಮಿಸಲಾಗಿದೆ.

ಲಲಿತ ಕಲೆ: ಉಪ ವಿಶೇಷಾಧಿಕಾರಿಯಾಗಿ ಪ್ರಾಚ್ಯ ವಸ್ತು ಸಂಗ್ರಹಾಲಯದ ಆಯುಕ್ತರಾದ ದೇವರಾಜು, ಕಾರ್ಯಾಧ್ಯಕ್ಷರಾಗಿ ಕಾವಾ ಕಾಲೇಜಿನ ಅನ್ವಯ ಕಲಾವಿಭಾಗದ ರೀಡರ್(ಪ್ರ) ಹಾಗೂ ಮುಖ್ಯಸ್ಥರಾದ ಬಿಂದುರಾಯ.ಆರ್.ಬಿರಾದಾರ್  ಹಾಗೂ ಕಾರ್ಯದರ್ಶಿಗಳಾಗಿ ಕಾವಾ ಕಾಲೇಜಿನ ಪ್ರೋಗ್ರಾಮಿಂಗ್ ಅಸಿಸ್ಟೆಂಟ್ ಆದ ಹೆಚ್.ಬಿ ಜಯಶಂಕರ್ ಅವರನ್ನು ನೇಮಿಸಲಾಗಿದೆ.

ದೀಪಾಲಂಕಾರ: ಉಪ ವಿಶೇಷಾಧಿಕಾರಿಯಾಗಿ ಚೆಸ್ಕಾಂ ಮ್ಯಾನೇಜಿಂಗ್ ಡೈರೆಕ್ಟರ್‌ ಆದ ಜಿ.ಶೀಲಾ, ಕಾರ್ಯಾಧ್ಯಕ್ಷರಾಗಿ ಚೆಸ್ಕಾಂನ ಅಧೀಕ್ಷಕ ಇಂಜಿನಿಯರ್ ಸುನಿಲ್ ಹಾಗೂ ಕಾರ್ಯದರ್ಶಿಗಳಾಗಿ ಎನ್.ಆರ್ ಮೊಹಲ್ಲಾದ ಕಾರ್ಯಪಾಲಕ ಇಂಜಿನಿಯರ್‌  ಪೂರ್ಣಚಂದ್ರ ತೇಜಸ್ವಿ ಆರ್ ಅವರನ್ನು ನೇಮಿಸಲಾಗಿದೆ.

ಕವಿಗೋಷ್ಠಿ: ಉಪ ವಿಶೇಷಾಧಿಕಾರಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ಮಲ್ಲಿಕಾರ್ಜುನ ಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮೈಸೂರು ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಲೋಲಾಕ್ಷಿ ಎನ್.ಕೆ. ಹಾಗೂ ಕಾರ್ಯದರ್ಶಿಗಳಾಗಿ ಮೈಸೂರು ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ಅವರನ್ನು ನೇಮಿಸಲಾಗಿದೆ.

ಯೋಗ ದಸರಾ: ಉಪ ವಿಶೇಷಾಧಿಕಾರಿಯಾಗಿ ಭೂ ದಾಖಲೆಗಳ ಇಲಾಖೆಯ ಉಪನಿರ್ದೇಶಕರಾದ ರಮ್ಯಾ,  ಆಯುಷ್ ಇಲಾಖೆಯ ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ. ಪುಷ್ಪ  ಕಾರ್ಯಾಧ್ಯಕ್ಷರಾಗಿ ಹಾಗೂ ಕಾರ್ಯದರ್ಶಿಗಳಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿಗಳಾದ ಅನಂತರಾಜು ಎಂ.ಆರ್ ಅವರನ್ನು ನೇಮಿಸಲಾಗಿದೆ.

ಯುವ ಸಂಭ್ರಮ:  ಉಪ ವಿಶೇಷಾಧಿಕಾರಿಯಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ವಿಷ್ಣುವರ್ಧನ.ಎನ್, ಕಾರ್ಯಾಧ್ಯಕ್ಷರಾಗಿ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಶಿವಕುಮಾರ್.ಪಿ, ಸಹ ಕಾರ್ಯಾಧ್ಯಕ್ಷರಾಗಿ ಮೈಸೂರು ವಿಶ್ವವಿದ್ಯಾನಿಲಯದ ಕಾರ್ಯಪಾಲಕ ಇಂಜಿನಿಯರ್ ಆದ ಹರೀಶ್, ಕಾರ್ಯದರ್ಶಿಗಳಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವಿಶೇಷ ತಹಶೀಲ್ದಾರ್ ಆದ ಮೋಹನ ಕುಮಾರಿ ಹಾಗೂ ಮೈಸೂರು ಮಹಾನಗರ ಪಾಲಿಕೆಯ ವಲಯ ಕಛೇರಿ 3 ರ ವಲಯ ಆಯುಕ್ತ(ಪ್ರಭಾರ)ರಾದ ಸತ್ಯಮೂರ್ತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾದ ರಾಘವೇಂದ್ರ ಅವರನ್ನು ನೇಮಿಸಲಾಗಿದೆ.

ಯುವ ದಸರಾ: ಉಪ ವಿಶೇಷಾಧಿಕಾರಿಯಾಗಿ ಜಿಲ್ಲಾ ಪೊಲೀಸ್ ಅಧಿಕ್ಷಕರಾದ ವಿಷ್ಣುವರ್ಧನ ಎನ್, ಕಾರ್ಯಾಧ್ಯಕ್ಷರಾಗಿ ಮೈಸೂರು ಉಪ ವಿಭಾಗದ ಉಪ ವಿಭಾಗಾಧಿಕಾರಿಗಳಾದ ರಕ್ಷಿತ್ ಕೆ.ಆರ್  ಹಾಗೂ ಕಾರ್ಯದರ್ಶಿಗಳಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನ ಅಧಿಕಾರಿಯಾದ ಮಂಜುನಾಥ್ ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಶುಭ ಮತ್ತು ಸಮನ್ವಯಾಧಿಕಾರಿಗಳಾಗಿ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕೇಂದ್ರ ಸಂವಹನ ಇಲಾಖೆಯ ಕ್ಷೇತ್ರ ಪ್ರಚಾರ ಅಧಿಕಾರಿಯಾದ ಶೃತಿ ಎಸ್.ಟಿ ಅವರನ್ನು ನೇಮಿಸಲಾಗಿದೆ.

ಮಹಿಳಾ ಮತ್ತು ಮಕ್ಕಳ ದಸರಾ: ಉಪ ವಿಶೇಷಾಧಿಕಾರಿಯಾಗಿ ಆಡಳಿತ ತರಬೇತಿ ಸಂಸ್ಥೆಯ ಜಂಟಿ ನಿರ್ದೇಶಕರಾದ ಪ್ರಿಯದರ್ಶಿನಿ ಕೆ, ಕಾರ್ಯಾಧ್ಯಕ್ಷರಾಗಿ ಬುಡಕಟ್ಟು ಸಂಶೋಧನಾ ಸಂಸ್ಥೆಯ ಉಪನಿರ್ದೇಶಕರಾದ ಪ್ರಭಾ ಬಿ.ಎಸ್, ಸಹ ಕಾರ್ಯಾಧ್ಯಕ್ಷರಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ್ ಹಾಗೂ ಕಾರ್ಯದರ್ಶಿಗಳಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಟಿ.ಜವರೇಗೌಡ ಅವರನ್ನು ನೇಮಿಸಲಾಗಿದೆ.

 

ಆಹಾರ ಮೇಳ: ಉಪ ವಿಶೇಷಾಧಿಕಾರಿಯಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ರಘುನಂದನ್ ಎ ಎನ್, ಕಾರ್ಯಾಧ್ಯಕ್ಷರಾಗಿ ಆಹಾರ ಭದ್ರತೆ ಮತ್ತು ಸುರಕ್ಷತೆ ಪ್ರಾಧಿಕಾರದ ಜಿಲ್ಲಾ ಅಂಕಿತ ಅಧಿಕಾರಿಯಾದ ಡಾ. ಕಾಂತರಾಜು ಹಾಗೂ ಕಾರ್ಯದರ್ಶಿಗಳಾಗಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರತೀಕ್ ಜಿ. ಹೆಗ್ಡೆ ಅವರನ್ನು ನೇಮಿಸಲಾಗಿದೆ.

ಸ್ವಚ್ಛತೆ ಮತ್ತು ವ್ಯವಸ್ಥೆ :  ಉಪ ವಿಶೇಷಾಧಿಕಾರಿಯಾಗಿ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಆಶಾದ್ ಉರ್ ರೆಹಮಾನ್ ಶರೀಫ್, ಕಾರ್ಯಾಧ್ಯಕ್ಷರಾಗಿ ಮೈಸೂರು ಮಹಾನಗರ ಪಾಲಿಕೆಯ ಉಪ ಆಯುಕ್ತ (ಕಂದಾಯ)ರಾದ ಸೋಮಶೇಖರ್ ಹಾಗೂ ಮೈಸೂರು ಮಹಾನಗರ ಪಾಲಿಕೆಯ ಮುಖ್ಯ ಆರೋಗ್ಯಾಧಿಕಾರಿಯಾದ ಡಾ.ವೆಂಕಟೇಶ್ ಅವರನ್ನು ನೇಮಿಸಲಾಗಿದೆ.

ಚಲನಚಿತ್ರ : ಉಪ ವಿಶೇಷಾಧಿಕಾರಿಯಾಗಿ ಮೈಸೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾದ ಬಸವರಾಜು, ಕಾರ್ಯಾಧ್ಯಕ್ಷರಾಗಿ ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದ ಜಂಟಿ ನಿರ್ದೇಶಕರಾದ ಶಿವರಾಂ ಹಾಗೂ ಸಹ ಕಾರ್ಯಾಧ್ಯಕ್ಷರಾಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ರಂಗೇಗೌಡ ಅವರನ್ನು ಹಾಗೂ ಕಾರ್ಯದರ್ಶಿಗಳಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ.ಕೆ.ಹರೀಶ್ ಅವರನ್ನು ನೇಮಿಸಲಾಗಿದೆ.

ಕುಸ್ತಿ: ಉಪ ವಿಶೇಷಾಧಿಕಾರಿಯಾಗಿ ಮೈಸೂರು ಜಿಲ್ಲೆಯ ಅಪರ ಪೊಲೀಸ್ ಅಧೀಕ್ಷಕರು, ಕಾರ್ಯಾಧ್ಯಕ್ಷರಾಗಿ ಕೆ.ಐ.ಎ.ಡಿ.ಬಿ ವಿಶೇಷ ಭೂ ಸ್ವಾಧೀನಾಧಿಕಾರಿಗಳಾದ ವೆಂಕಟರಾಜು ಹಾಗೂ ನಂಜನಗೂಡು ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕರಾದ ರಘು ಅವರನ್ನು ನೇಮಿಸಲಾಗಿದೆ.

ಗಜಪಯಣ : ಮೈಸೂರು ವೃತ್ತ ಅರಣ್ಯ ಸಂರಕ್ಷಣಾಧಿಕಾರಿಯಾದ ಮಾಲತಿ ಪ್ರಿಯ , ಕಾರ್ಯಾಧ್ಯಕ್ಷರಾಗಿ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾದ ಪ್ರಭುಗೌಡ ಐ.ಬಿ  ಹಾಗೂ ಕಾರ್ಯದರ್ಶಿಗಳಾಗಿ ವನ್ಯಜೀವಿ ವಲಯದ ವಲಯ ಅರಣ್ಯ ಸಂರಕ್ಷಣಾಧಿಕಾರಿಯಾದ ಸಂತೋಷ್ ಹೂಗಾರ್ ಅವರನ್ನು ನೇಮಿಸಲಾಗಿದೆ ಎಂದು ದಸರಾ ವಿಶೇಷಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ ರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಾಯಕರೇ ಸುಳ್ಳುಕೋರರಾದರೆ ಅನುಯಾಯಿಗಳು ಸತ್ಯವಂತರಾಗಲು ಹೇಗೆ ಸಾಧ್ಯ? ಮೋದಿಗೆ ಸಿದ್ದರಾಮಯ್ಯ ಟಾಂಗ್‌

ಬೆಂಗಳೂರು: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ರಾಜಕುಟುಂಬದ…

6 hours ago

‘ವಿದ್ಯಾಪತಿ’ ಹಾಡಿಗೆ ಜಗ್ಗೇಶ್‍ ಧ್ವನಿ; ‘ಅಯ್ಯೋ ವಿಧಿಯೇ …’

ಧನಂಜಯ್ ನಿರ್ಮಾಣದ ‘ವಿದ್ಯಾಪತಿ’ ಚಿತ್ರದ ಚಿತ್ರೀಕರಣ ಮುಗಿದಿದ್ದು, ಸದ್ಯದಲ್ಲೇ ಬಿಡುಗಡೆಯಾಗಲಿದೆ. ಇದೀಗ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದ್ದು, ಈ ಹಾಡನ್ನು…

7 hours ago

ಪ್ರಭಾಸ್‌ ಜತೆಗೆ ಹೊಂಬಾಳೆ ಫಿಲಂಸ್‍ ಮೂರು ಸಿನಿಮಾ ಘೋಷಣೆ

ಹೊಂಬಾಳೆ ಫಿಲಂಸ್‍ನ ವಿಜಯ್‍ ಕಿರಗಂದೂರು ಇದೀಗ ತೆಲುಗು, ತಮಿಳು, ಮಲಯಾಳಂ ಸೇರಿದಂತೆ ಬೇರೆ ಭಾಷೆಗಳಿಗೂ ಕಾಲಿಟ್ಟಿದೆ. ಈಗಾಗಲೇ ‘ಕೆಜಿಎಫ್‍’, ‘ಸಲಾರ್‍’…

7 hours ago

ಕರ್ನಾಟಕ ಕಾಂಗ್ರೆಸ್‌ನ ಎಟಿಎಂ ಆಗಿದೆ: ಸಿದ್ದು ಸರ್ಕಾರದ ವಿರುದ್ಧ ಮೋದಿ ಗುಡುಗು

ಮುಂಬೈ : ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ನೇತ್ವತ್ವದ ಸರ್ಕಾರ ಕಾಂಗ್ರೆಸ್‌ನ ಎಟಿಎಂ ಆಗಿದೆ ಎಂದು ಪ್ರಧಾನಿ ನರೇಂದ್ರ ವಾಗ್ದಾಳಿ…

7 hours ago

ಚನ್ನಪಟ್ಟಣಕ್ಕೆ ಡಿ.ಕೆ ಸುರೇಶ್‌ ಕೊಡುಗೆ ಏನು: ನಿಖಿಲ್‌ ಪ್ರಶ್ನೆ

ಚನ್ನಪಟ್ಟಣ: ಡಿಸಿಎಂ ಡಿಕೆ ಶಿವಕುಮಾರ್‌ ಅವರು ನಿನ್ನೆ ಕ್ಷೇತ್ರದ ಪ್ರಚಾರ ವೇಳೆ ಚನ್ನಪಟ್ಟಣಕ್ಕೆ ದೇವೇಗೌಡ ಹಾಗೂ ಕುಮಾರಸ್ವಾಮಿ ಅವರ ಕೊಡುಗೆ…

8 hours ago

ವಕ್ಫ್‌ ವಿರುದ್ಧ ನಮ್ಮ ಆಸ್ತಿ ಉಳಿಸಿಕೊಳ್ಳಲು ಪ್ರತಿಭಟನೆ ಅಗತ್ಯ; ಪ್ರತಾಪ್‌ ಸಿಂಹ

ಮಡಿಕೇರಿ: ರಾತ್ರೋರಾತ್ರಿ ಈ ಭಾಗದ ಜನತೆಯ ಜಮೀನು ವಕ್ಫ್‌ ಆಸ್ತಿವೆಂದು ಸೃಷ್ಠಿಯಾಗುತ್ತಿದೆ. ಹೀಗಾಗಿ ನಮ್ಮ ಆಸ್ತಿಯನ್ನು ಉಳಿಸಿಕೊಳ್ಳಲು ಸರ್ಕಾರದ ವಿರುದ್ಧ…

8 hours ago