ಮೈಸೂರು

Mysuru dasara 2024: ಮೈಸೂರಿನತ್ತ ಹೆಜ್ಜೆ ಹಾಕಿದ ಗಜಪಡೆ

ಮೈಸೂರು:  ನಾಡಹಬ್ಬ ದಸರಾ ಮಹೋತ್ಸವದ ಆಕರ್ಷಣೆಯಾದ ಜಂಬೂಸವಾರಿಗೆ ನಾಗರಹೊಳೆಯ ವೀರನಹೊಸಹಳ್ಳಿ ಗೆಟ್ ಬಳಿ ಬುಧವಾರ(ಆ.21) ಅಭಿಮನ್ಯು ನೇತೃತ್ವದ 9 ಗಜಪಡೆಗೆ ಮೈಸೂರು ಅರಮನೆ ಪುರೋಹಿತರು ತುಲಾ ಲಗ್ನದಲ್ಲಿ ಪೂಜೆ ಸಲ್ಲಿಸುವ ಮೂಲಕ ಅರಣ್ಯ ಇಲಾಖೆ ಸಚಿವರಾದ ಈಶ್ವರ ಖಂಡ್ರೆ ಹಾಗೂ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ ಸಾಂಪ್ರದಾಯಿಕವಾಗಿ ಚಾಲನೆ ನೀಡಿದರು.

ಮೊದಲ ಹಂತದಲ್ಲಿ ಒಟ್ಟು ಒಂಭತ್ತು ಆನೆಗಳು ಗಜಪಯಣದ ಮೂಲಕ ಮೈಸೂರಿಗೆ ತೆರಳುತ್ತಿದ್ದು, ವಿಶ್ವ ವಿಖ್ಯಾತ 414 ನೇ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲಿವೆ.

ದಸರಾದಲ್ಲಿ ಒಟ್ಟು 14 ಆನೆಗಳು ಭಾಗಿ: ಈ ಬಾರಿ ನಾಡ ಹಬ್ಬ ದಸರಾದಲ್ಲಿ ಒಟ್ಟು 14 ಆನೆಗಳು ಭಾಗವಹಿಸಲಿವೆ. ಮೊದಲ ಹಂತದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳು ಹಾಗೂ 2ನೇ ಹಂತದಲ್ಲಿ 5 ಆನೆಗಳು ಮೈಸೂರಿಗೆ ಆಗಮಿಸಲಿವೆ. ಅಲ್ಲದೆ ಹೆಚ್ಚುವರಿಯಾಗಿ 4 ಮೀಸಲು ಆನೆಗಳನ್ನು ಆಯ್ಕೆ ಮಾಡಲಾಗಿದ್ದು, ಅಗತ್ಯವಿದ್ದರೆ ಮೀಸಲು ಆನೆಗಳನ್ನ ಬಳಸಿಕೊಳ್ಳಲು ಇಲಾಖೆ ತೀರ್ಮಾನಿಸಿದೆ.ಆಗಸ್ಟ್‌ 23 ರಂದು ಈ 9 ಆನೆಗಳನ್ನು ಅರಮನೆಗೆ ಬರಮಾಡಿಕೊಳ್ಳಲಾಗುವುದು. ಆಗಸ್ಟ್ 21 ರಿಂದ 23ರ ವರೆಗೆ ಅಂದ್ರೆ 2 ದಿನಗಳ ಕಾಲ 9 ಆನೆಗಳು ಮೈಸೂರಿನ ಅರಣ್ಯ ಭವನದಲ್ಲಿ ವಾಸ್ತವ್ಯ ಹೊಡಲಿವೆ.


ನಾಡಹಬ್ಬಕ್ಕೆ ಆಗಮಿಸುವ ಆನೆಗಳ ವಿವರ

ಅಭಿಮನ್ಯು (58), ಭೀಮ (24), ಗೋಪಿ (41), ಧನಂಜಯ (43), ಕಂಜನ್‌ (25), ರೋಹಿಣಿ (22), ಲಕ್ಷ್ಮೀ (53), ವರಲಕ್ಷ್ಮಿ (67), ಏಕಲವ್ಯ (38) ಆನೆಗಳು ಮೊದಲ ಗಜಪಯಣದಲ್ಲಿ ಮೈಸೂರಿಗೆ ಬರಲಿವೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

4 hours ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

6 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

7 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

7 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

7 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

7 hours ago