Mysore
21
overcast clouds
Light
Dark

Mysuru dasara 2024: ದಸರಾ ಉದ್ಘಾಟನೆಗೆ ಸುತ್ತೂರು ಶ್ರೀ ಆಹ್ವಾನಿಸಿ: ಜೀವದಾರ ಗಿರೀಶ್‌ ಮನವಿ

ಮೈಸೂರು: ಜೀವದಾರ ರಕ್ತ ನಿಧಿ ಕೇಂದ್ರದ ವತಿಯಿಂದ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಜೀವದಾರ ರಕ್ತ ನಿಧಿ ಕೇಂದ್ರದ ಕಚೇರಿಯಲ್ಲಿ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ ಜನ್ಮದಿನ ಅಂಗವಾಗಿ 30ಕ್ಕೂ ಹೆಚ್ಚು ಮಂದಿ ಸ್ವಯಂ ಪ್ರೇರಿತ ರಕ್ತದಾನ ಮಾಡುವ ಮೂಲಕ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಬಳಿಕ ಮಾತನಾಡಿದ ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಈ ಬಾರಿಯ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಯನ್ನು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರಿಂದ ನೆರವೇರಿಸಲು ಕೃಷ್ಣರಾಜ ಕ್ಷೇತ್ರದ ಶಾಸಕರಾದ ಟಿ ಎಸ್ ಶ್ರೀವತ್ಸ ರವರು ಈಗಾಗಲೇ ಎರಡು ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ಮಾಡಿದ್ದಾರೆ. ಅದರಂತೆ ನಾವು ಸಹ ಈ ಬಾರಿ ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟನೆಗೆ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಆಹ್ವಾನಿಸುವಂತೆ ಸರ್ಕಾರಕ್ಕೆ ಮನವಿ ಮಾಡುತ್ತಿದ್ದೇವೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ರೇಣುಕಾ ರಾಜ್, ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್, ಜೆಡಿಎಸ್ ಕಾರ್ಯಾಧ್ಯಕ್ಷ ಪ್ರಕಾಶ್ ಪ್ರಿಯದರ್ಶನ್, ಬಿಜೆಪಿ ಯುವ ಮೋರ್ಚಾ ನಗರ ಪ್ರಧಾನ ಕಾರ್ಯದರ್ಶಿ ಲೋಹಿತ್, ಜಿ ರಾಘವೇಂದ್ರ, ಮಹೇಂದ್ರ ಶೈವ ಹಾಗೂ ಜೀವದಾರ ರಕ್ತ ನಿಧಿ ಕೇಂದ್ರದ ಸಿಬ್ಬಂದಿ ವರ್ಗ ಹಾಜರಿದ್ದರು.