ಮೈಸೂರು: ಜೀವದಾರ ರಕ್ತ ನಿಧಿ ಕೇಂದ್ರದ ವತಿಯಿಂದ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಜೀವದಾರ ರಕ್ತ ನಿಧಿ ಕೇಂದ್ರದ ಕಚೇರಿಯಲ್ಲಿ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ ಜನ್ಮದಿನ ಅಂಗವಾಗಿ 30ಕ್ಕೂ ಹೆಚ್ಚು ಮಂದಿ ಸ್ವಯಂ ಪ್ರೇರಿತ ರಕ್ತದಾನ ಮಾಡುವ ಮೂಲಕ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಬಳಿಕ ಮಾತನಾಡಿದ ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಈ ಬಾರಿಯ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಯನ್ನು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರಿಂದ ನೆರವೇರಿಸಲು ಕೃಷ್ಣರಾಜ ಕ್ಷೇತ್ರದ ಶಾಸಕರಾದ ಟಿ ಎಸ್ ಶ್ರೀವತ್ಸ ರವರು ಈಗಾಗಲೇ ಎರಡು ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ಮಾಡಿದ್ದಾರೆ. ಅದರಂತೆ ನಾವು ಸಹ ಈ ಬಾರಿ ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟನೆಗೆ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಆಹ್ವಾನಿಸುವಂತೆ ಸರ್ಕಾರಕ್ಕೆ ಮನವಿ ಮಾಡುತ್ತಿದ್ದೇವೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ರೇಣುಕಾ ರಾಜ್, ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್, ಜೆಡಿಎಸ್ ಕಾರ್ಯಾಧ್ಯಕ್ಷ ಪ್ರಕಾಶ್ ಪ್ರಿಯದರ್ಶನ್, ಬಿಜೆಪಿ ಯುವ ಮೋರ್ಚಾ ನಗರ ಪ್ರಧಾನ ಕಾರ್ಯದರ್ಶಿ ಲೋಹಿತ್, ಜಿ ರಾಘವೇಂದ್ರ, ಮಹೇಂದ್ರ ಶೈವ ಹಾಗೂ ಜೀವದಾರ ರಕ್ತ ನಿಧಿ ಕೇಂದ್ರದ ಸಿಬ್ಬಂದಿ ವರ್ಗ ಹಾಜರಿದ್ದರು.
ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ರಸ್ತೆ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ. ರಸ್ತೆಯ…
ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಜ್ಯೂಸ್ ಸೆಂಟರ್, ಕಾಫಿ, ಟೀ ಅಂಗಡಿಗಳು ಪ್ಲಾಸ್ಟಿಕ್ ಕವರ್, ನೀರಿನ ಬಾಟಲಿ, ಪ್ಲಾಸ್ಟಿಕ್ ಕಪ್‌ಗಳನ್ನು…
ಭಾರತದ ಹೆಚ್ಚಿನ ಕುಟುಂಬಗಳಿಗೆ ಅಡುಗೆ ಅನಿಲ ಅಥವಾ ಎಲ್‌ಪಿಜಿ ಎಂಬುದು ದಿನಚರಿಯ ಅವಿಭಾಜ್ಯ ಅಂಗವಾಗಿದೆ. ಸಿಲಿಂಡರ್ ಯಾವಾಗ ಖಾಲಿಯಾಗುತ್ತದೆ ಎನ್ನುವುದರತ್ತ…
ಗ್ರಾಮದಲ್ಲಿ ಆತಂಕ ಸೃಷ್ಟಿಸಿದ ಆನೆಗಳ ಹಿಂಡು; ಶಾಶ್ವತ ಪರಿಹಾರಕ್ಕೆ ಗ್ರಾಮಸ್ಥರ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ: ಸಮೀಪದ ಅರಣ್ಯ ಪ್ರದೇಶದಿಂದ…
ಒಂದು ವರ್ಷದಲ್ಲಿ ಹತ್ತಕ್ಕೂ ಹೆಚ್ಚು ಅಪಘಾತ; ಗಣಿಗಾರಿಕೆ ಹಗಲು-ರಾತ್ರಿ ನಡೆಯುವುದರಿಂದ ಟಿಪ್ಪರ್‌ಗಳ ಸಂಚಾರ ಹೆಚ್ಚಳ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ…