ಬೆಂಗಳೂರು: ವಿಶ್ವವಿಖ್ಯಾತ ದಸರಾ ಮಹೋತ್ಸವದ ಪ್ರಯುಕ್ತ ಮೈಸೂರಿನ ಪ್ರಮುಖ ರಸ್ತೆಗಳು ಮತ್ತು ವೃತ್ತಗಳು ಈ ಬಾರಿಯೂ ವಿದ್ಯುದ್ದೀಪಗಳಿಂದ ಝಗಮಗಿಸಲಿದೆ.
ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ನೇತೃತ್ವದಲ್ಲಿ ಸೋಮವಾರ(ಆ.12) ಬೆಳಕು ಭವನದಲ್ಲಿ ನಡೆದ ಸಭೆಯಲ್ಲಿ, ದಸರಾ ಉತ್ಸವ ಆರಂಭಕ್ಕೆ ಒಂದು ದಿನಮೊದಲು ಅಂದರೆ ಅ. 2ರಿಂದ 21 ದಿನಗಳ ಕಲಾ ದೀಪಾಲಂಕಾರ ಮಾಡಲುನಿರ್ಧರಿಸಲಾಗಿದೆ.
ಅಲ್ಲದೆ, ವಿದ್ಯುತ್ ದೀಪಾಲಂಕಾರ ಈ ಬಾರಿಯ ದಸರಾಗೆ ಮತ್ತಷ್ಟು ಕಳೆ ಕಟ್ಟಬೇಕು. ಈ ವಿಚಾರವಾಗಿ ಸೆಸ್ಕ್ ಅಧಿಕಾರಿಗಳು ವಿಶೇಷ ಗಮನ ಹರಿಸಬೇಕು ಎಂದು ಸಚಿವರು ನಿರ್ದೇಶಿಸಿದ್ದಾರೆ.
2024ರ ದಸರಾದಲ್ಲಿ 130 ಕಿ.ಮೀ. ರಸ್ತೆಗಳ ಉದ್ದದ್ದಕ್ಕೂ ದೀಪಗಳು ಬೆಳಗಲಿವೆ. 84 ವೃತ್ತಗಳು, ಉದ್ಯಾನವನ ಸೇರಿದಂತೆ ಪ್ರಮುಖ 64 ಸ್ಥಳಗಳಲ್ಲಿ ವಿದ್ಯುತ್ ದೀಪಗಳು ಕಂಗೊಳಿಸಲಿವೆ.
ಹಸಿರು ಚಪ್ಪರ, ಸುಸ್ವಾತಗ, ವಿವಿಧ ಕಮಾನುಗಳು, ನಿಗಮದ ಕಚೇರಿಗಳ ದೀಪಾಲಂಕಾರ, ಛಾಯಾಗ್ರಹಣ ಮತ್ತು ಸಮಾರಂಭಗಳ ವೇದಿಕೆ ಮತ್ತಿತರೆಡೆ ವಿದ್ಯುತ್ ದೀಪಾಲಾಂಕಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕಿ ಜಿ.ಶೀಲಾ ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು.
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…
ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…