ಮೈಸೂರು

ಮೈಸೂರು ದಸರಾ : ಆಹಾರ ಮೇಳಕ್ಕೆ ಅರ್ಜಿ ಆಹ್ವಾನ

ಮೈಸೂರು : ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2025ರ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವು” ಜನಪ್ರಿಯ ಆಹಾರ ಮೇಳವನ್ನು” ಸೆಪ್ಟೆಂಬರ್ 22 ರಿಂದ ಆಕ್ಟೋಬರ್ 02 ವರೆಗೆ ಮೈಸೂರಿನ ಮಹಾರಾಜ ಕಾಲೇಜು ಮೈದಾನ/ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಆಹಾರ ಮೇಳಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಆಹಾರ ಮೇಳದಲ್ಲಿ ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕ, ಹೊರ ರಾಜ್ಯದ ಆಹಾರ ಪದ್ಧತಿಯಡಿಯಲ್ಲಿ ಕಾಶ್ಮೀರಿ, ಪಂಜಾಬಿ, ರಾಜಸ್ಥಾನಿ, ಈಶಾನ್ಯ ಭಾರತ ಆಹಾರ ಪದ್ಧತಿ, ಆಂಧ್ರ ಶೈಲಿ, ಕೇರಳ ಶೈಲಿ, ತಮಿಳುನಾಡು ಶೈಲಿ, ಮರಾಠಿ ಶೈಲಿಯಲ್ಲಿನ ಸಸ್ಯಾಹಾರಿ ಮತ್ತು ಶಾಖಾಹಾರಿ ಆಹಾರ ಪದ್ಧತಿ ಶೈಲಿಯ ಜೊತೆಗೆ ಅಂತರ್ ರಾಷ್ಟ್ರೀಯ ಚೈನೀಸ್, ಟಿಬೆಟಿಯನ್, ಇಟಾಲಿಯನ್, ಫ್ರೆಂಚ್ ಹಾಗೂ ಆಫ್ರಿಕನ್ ಆಹಾರ ಪದ್ಧತಿಯಡಿಯಲ್ಲಿ ಆಹಾರ ತಯಾರಿಸುವ ಅಡುಗೆಗಳು ಮತ್ತು ಸಿರಿಧಾನ್ಯ ಮತ್ತು ಸಹಜ ಹಾಗೂ ಸಾವಯವ ಧಾನ್ಯಗಳು ಮತ್ತು ತರಕಾರಿಗಳಲ್ಲಿ ಅಡುಗೆಗಳನ್ನು ಮಾಡುವ ವ್ಯಕ್ತಿಗಳು, ಗೃಹಿಣಿಯರು, ಹೋಟೇಲ್ಗಳು, ಸಂಘ ಸಂಸ್ಥೆಗಳು, ರೆಸ್ಟೋರೆಂಟ್ಗಳು ಮತ್ತು ಇತರರು ಭಾಗವಹಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಆಗಸ್ಟ್ 25 ರಿಂದ ಸೆಪ್ಟೆಂಬರ್ 09 ರವರೆಗೆ ನಗರಸಭಾ ಕಾರ್ಯಾಲಯ ಎಸ್.ಆರ್.ಎಸ್. ಎದುರು, ಹೈಟೆನ್ಷನ್ ಜೋಡಿರಸ್ತೆ, ಹೂಟಗಳ್ಳಿ, ಮೈಸೂರು ಇಲ್ಲಿ ನೀಡಲಾಗುವುದು. ಸೆಪ್ಟೆಂಬರ್ 09 ರಂದು ಪಡೆದ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಮಂಟೇಸ್ವಾಮಿ ಉಪ ವಿಶೇಷಾಧಿಕಾರಿಗಳು ಆಹಾರ ಮೇಳ ಉಪಸಮಿತಿ ಹಾಗೂ ಜಂಟಿ ನಿರ್ದೇಶಕರು, ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾಧಿಕಾರಿಗಳ ಕಛೇರಿ, ಮೈಸೂರು .ಬಿ.ಎನ್.ಚಂದ್ರಶೇಖರ್, ಕಾರ್ಯಾಧ್ಯಕ್ಷರು ಆಹಾರ ಮೇಳ ಉಪಸಮಿತಿ ಹಾಗೂ ಪೌರಾಯುಕ್ತರು ನಗರಸಭೆ ಹೂಟಗಳ್ಳಿ ಮತ್ತು ಮಹೇಶ್, ಕಾರ್ಯದರ್ಶಿಗಳು. ಆಹಾರ ಮೇಳ ಉಪಸಮಿತಿ ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರು ಮೈಸೂರು ಅಭಿವೃದ್ಧಿ ಪ್ರಾಧಿಕಾರ ಮೈಸೂರು, ಜಮುನಾ.ಡಿ. ಕಛೇರಿ ವ್ಯವಸ್ಥಾಪಕರು, ಹೂಟಗಳ್ಳಿ ನಗರಸಭೆ ದೂ.ಸಂ: 9844464011, ಪ್ರಕಾಶ್ ದೂ.ಸಂ: 9964328792, ನಾಗೇಂದ್ರ ದೂ.ಸಂ: 8310846464 ನ್ನು ಸಂಪರ್ಕಿಸಬಹುದಾಗಿದೆ ಎಂದು ಹೂಟಗಳ್ಳಿ ನಗರಸಭೆ, ಪೌರಾಯುಕ್ತರು ಹಾಗೂ ದಸರಾ ಮಹೋತ್ಸವ-2025ರ ಆಹಾರ ಮೇಳ ಉಪಸಮಿತಿಯ ಕಾರ್ಯಾಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತು: ತನಿಖಾ ತಂಡಕ್ಕೆ 25 ಲಕ್ಷ ನಗದು ಬಹುಮಾನ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ…

1 hour ago

ರಾಜ್ಯಪಾಲರು ರಾಷ್ಟ್ರಗೀತೆ ಹಾಡದೇ ಹೋಗಿದ್ದು ಸಂವಿಧಾನದ ಉಲ್ಲಂಘನೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ರಾಷ್ಟ್ರಗೀತೆ ಹಾಡದೇ ಹೋಗಿದ್ದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿದರು. ಈ…

1 hour ago

ಕೇರಳದಲ್ಲಿ 3 ಅಮೃತ್‌ ಭಾರತ್‌ ಎಕ್ಸ್‌ಪ್ರೆಸ್‌ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ

ಕೇರಳ: ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಸರಣಿ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ…

2 hours ago

ಫಲಪುಷ್ಪ ವಸ್ತು ಪ್ರದರ್ಶನವನ್ನು ಜಿಲ್ಲೆಯ ಸಾರ್ವಜನಿಕರು ಕಣ್ತುಂಬಿಕೊಳ್ಳಿ: ಎನ್.ಚಲುವರಾಯಸ್ವಾಮಿ ಕರೆ

ಮಂಡ್ಯ: ಕಳೆದ ಬಾರಿಗಿಂತ ಈ ಬಾರಿ ವಿಶೇಷವಾಗಿ 2 ಲಕ್ಷಕ್ಕೂ ಅಧಿಕ ಹೂಗಳನ್ನು ಬಳಿಸಿ ವಿಶೇಷ ಫಲಪುಷ್ಪ ಪ್ರದರ್ಶನವನ್ನು ಮಾಡಲಾಗಿದೆ…

2 hours ago

ಮೈಸೂರು| ಬಣ್ಣ ಹೊಡೆಯುವ ವೇಳೆ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

ಮೈಸೂರು: ಅಪಾರ್ಟ್‌ಮೆಂಟ್‌ವೊಂದರಲ್ಲಿ ಬಣ್ಣ ಹೊಡೆಯುವ ವೇಳೆ ಕಾಲು ಜಾರಿ ಕೆಳಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಮೈಸೂರಿನ ದಿವಾನ್ಸ್‌ ರಸ್ತೆಯಲ್ಲಿರುವ…

3 hours ago

ಸಂಜೆ 6 ರಿಂದ ಬೆಳಗಿನ ಜಾವ 6ರವರೆಗೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ನಿಷೇಧ: ಭಕ್ತರು ಸಹಕರಿಸುವಂತೆ ಎ.ಈ.ರಘು ಮನವಿ

ಮಹಾದೇಶ್‌ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಜೆ 6 ಗಂಟೆಯಿಂದ ಬೆಳಗಿನ ಜಾವ 6…

3 hours ago