ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಯಶಸ್ವಿಯಾಗಿ ನೆರವೇರಿದೆ. ದಸರಾ ಮುಗಿದ ಬೆನ್ನಲ್ಲೇ ಅರಮನೆ ಆವರಣ ಬಿಕೋ ಎನ್ನುತ್ತಿದೆ. ಅಂಬಾವಿಲಾಸ ಅರಮನೆ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಯುತ್ತಿದ್ದು, ಜಂಬೂಸವಾರಿ ಮೆರವಣಿಗೆ ವೀಕ್ಷಿಸಲು ಬಂದಿದ್ದವರು ಎಸೆದಿದ್ದ ತ್ಯಾಜ್ಯವನ್ನು ಸಿಬ್ಬಂದಿ ತೆರವುಗೊಳಿಸುವುದರಲ್ಲಿ ನಿರತರಾಗಿದ್ದಾರೆ.
ನಾಳೆ ತನ್ನ ಸ್ವಂತ ಜಾಗಕ್ಕೆ ಹೋಗುವ ದಸರಾ ಗಜಪಡೆ ಕಳೆದ 2 ತಿಂಗಳಿಂದ ಮೈಸೂರಿನಲ್ಲಿದ್ದು ದಸರಾ ಆನೆಗಳು ನಾಳೆ ತನ್ನ ಜಾಗಕ್ಕೆ ಮರಳಲಿದೆ. ಇದೇ ಮೊದಲ ಬಾರಿ ವಿದ್ಯುತ್ ದೀಪಗಳ ಬೆಳಕಿನ ಅಲಂಕಾರದ ನಡುವೆ ಜಂಬೂಸವಾರಿ ಸಾಗಿದ್ದು ಸಾಕಷ್ಟು ಯಶಸ್ಸುಗಳಿಸಿದೆ. ಶುಕ್ರವಾರ ತನ್ನ ಶಿಬಿರಗಳತ್ತ ಕ್ಯಾಪ್ಟನ್ ಅಭಿಮನ್ಯು ಮತ್ತು ತಂಡ ಪ್ರಯಾಣ ಬೆಳಸಲಿದೆ.
ಅರಮನೆ ಆವರಣದಲ್ಲಿ ದಸರಾ ಆನೆಗಳಿಗೆ ನಾಳೆ ವಿಶೇಷ ಪೂಜೆ ನೆರವೇರಿಸಲಾಗುವುದು. ನಂತರ ಮೈಸೂರು ಅರಮನೆ ಆಡಳಿತ ಮಂಡಳಿ ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಂದ ಬೀಳ್ಕೊಡುಗೆ ನೀಡಲಾಗುತ್ತದೆ.
ದಸರಾ ಗಜಪಡೆ ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಜಂಬೂಸವಾರಿ ಯಶಸ್ವಿಯಾಗಿ ನಡೆದಿದ್ದು, ದಸರಾ ಗಜಪಡೆಯ ನಾಯಕ ಅಭಿಮನ್ಯು ಎಲ್ಲರ ಮನಗೆದ್ದಿದ್ದಾನೆ. 750 ಕೆ.ಜಿ.ತೂಕದ ಚಿನ್ನದ ಅಂಬಾರಿಯನ್ನು ಹೊತ್ತು ಜಂಬೂಸವಾರಿ ನಡೆಸಿಕೊಟ್ಟು ಕ್ಯಾಪ್ಟನ್ ಅಭಿಮನ್ಯು ಶಬಾಷ್ ಗಿರಿ ಪಡೆದಿದ್ದಾನೆ..
ವಿಶೇಷವಾಗಿ ಅರಮನೆ ಆವರಣದಲ್ಲಿರುವ ಅಭಿಮನ್ಯು ನೋಡಲು ಜನರು ಮುಗಿಬಿದ್ದಿದ್ದಾರೆ. ಜೊತೆಗೆ ಸಾರ್ವಜನಿಕರು ಅಭಿಮನ್ಯು ಬಳಿ ನಿಂತು ಸೆಲ್ಫಿ ತೆಗೆದುಕೊಂಡು ಸಂಭ್ರಮಿಸುತ್ತಿದ್ದಾರೆ
ಉತ್ತರಾಖಂಡ: ಇಲ್ಲಿನ ಅಲ್ಮೋರಾದ ಭಿಕಿಯಾಸೈನ್ ಪ್ರದೇಶದಲ್ಲಿ ಪ್ರಯಾಣಿಕರಿದ್ದ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 12 ಮಂದಿ…
ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಉದ್ಯಮಿ ರಾಬರ್ಟ್ ವಾದ್ರಾ ಪುತ್ರ ರೈಹಾನ್ ವಾದ್ರಾ ತಮ್ಮ ಬಹುಕಾಲದ ಗೆಳತಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸಲು ಬಿಜೆಪಿಗೆ ಒಂದು ಅವಕಾಶ ಕೊಡಿ. ಭಯ, ಭ್ರಷ್ಟಾಚಾರ ಹಾಗೂ ದುರಾಡಳಿತವನ್ನು ಉತ್ತಮ ಆಡಳಿತದೊಂದಿಗೆ…
ಬೆಂಗಳೂರು: ದೇಶದಾದ್ಯಂತ ಕೇಂದ್ರ ಚುನಾವಣಾ ಆಯೋಗ ಕೈಗೆತ್ತಿಕೊಂಡಿರುವ ವಿಶೇಷ ಮತದಾರರ ಪರಿಷ್ಕರಣೆ (ಎಸ್‌ಐಆರ್)ಯನ್ನು ಕರ್ನಾಟಕದಲ್ಲೂ ನಡೆಸಬೇಕೆಂದು ಕೇಂದ್ರ ಸಚಿವೆ ಶೋಭಾ…
ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಾಹಿತಿ ಪ್ರಕಾರ…
ಟಿ.ನರಸೀಪುರ: ಇಂದು ವೈಕುಂಠ ಏಕಾದಶಿಯ ಸಂಭ್ರಮ ಮನೆಮಾಡಿದ್ದು, ಟಿ.ನರಸೀಪುರದ ಪ್ರಸಿದ್ಧ ಶ್ರೀ ಗುಂಜಾನರಸಿಂಹಸ್ವಾಮಿ ದೇವಾಲಯದಲ್ಲಿ ಏಕಾದಶಿ ಪ್ರಯುಕ್ತ ವಿಶೇಷ ಪೂಜಾ…