ಮೈಸೂರು

ಮೈಸೂರು ದಸರಾ ಗಜಪಡೆಗಳ ಶಾರ್ಟ್ ಲಿಸ್ಟ್ ರೆಡಿ

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಪ್ರಮುಖವಾದ ಆಕರ್ಷಣೆ ಅಂದರೆ ಅದು ದಸರಾ ಗಜಪಡೆ. ಜಂಬೂಸವಾರಿ ಮೆರವಣಿಗೆಯಲ್ಲಿ ಗಜಗಾಂಭೀರ್ಯದಿಂದ ಹೆಜ್ಜೆ ಹಾಕುವ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ಗಜಪಡೆ ಅಂದರೆ ಎಲ್ಲರಿಗೂ ಅಚ್ಚುಮೆಚ್ಚು.

ಅಕ್ಟೋಬರ್‌ ೧೨ ರಂದು ಜಂಬೂಸವಾರಿ ಮೆರವಣಿಗೆ ನಡೆಯಲಿದ್ದು, ಈಗಾಗಲೇ ೨೦೨೪ ರ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ದಸರಾ ಗಜಪಡೆಗಳ ಶಾರ್ಟ್‌ ಲಿಸ್ಟ್‌ ರೆಡಿಯಾಗಿದೆ.

ಈ ಬಾರಿ ೧೪ ಆನೆಗಳು, ಹೆಚ್ಚುವರಿ ನಾಲ್ಕು ಆನೆ ಸೇರಿದಂತೆ ೧೮ ಆನೆಗಳನ್ನು ಅಂತಿಮಗೊಳಿಸಲು ಉದ್ದೇಶಿಸಲಾಗಿದೆ. ಈ ಆನೆಗಳು ಆಗಸ್ಟ್‌ ೯ ಅಥವಾ ೧೧ ರಂದು ಮೈಸೂರಿಗೆ ಆಗಮಿಸಲಿವೆ. ಮೊದಲ ತಂಡದಲ್ಲಿ ೯ ಆನೆಗಳು ಬರಲಿವೆ.

ಇನ್ನು ರಾಜ್ಯದಾದ್ಯಂತ ಉತ್ತಮವಾದ ಮಳೆಯಾಗಿರುವ ಕಾರಣ ಈ ಬಾರಿ ವಿಜೃಂಭಣೆಯಿಂದ ದಸರಾ ಆಚರಣೆ ಮಾಡಲು ಚಿಂತನೆ ನಡೆಸಲಾಗಿದ್ದು, ಈ ಹಿನ್ನೆಲೆಯಲ್ಲಿ ಆನೆಗಳಿಗೆ ಹೆಚ್ಚಿನ ತರಬೇತಿ ನೀಡುವುದಕ್ಕಾಗಿ ೬೦ ದಿನ ಮುಂಚಿತವಾಗಿ ಆನೆಗಳನ್ನ ಮೈಸೂರಿಗೆ ಕರೆದುಕೊಂಡು ಬರಲು ಉದ್ದೇಶಿಸಲಾಗಿದೆ.

ಈಗಾಗಲೇ ನಾಗರಹೊಳೆ  ಅರಣ್ಯ ವ್ಯಾಪ್ತಿಯ ಮತ್ತಿಗೋಡು, ಭೀಮನಕಟ್ಟೆ, ದೊಡ್ಡಹರವೆ, ಕೊಡಗಿನ ದುಬಾರೆ, ಬಂಡೀಪುರದ ರಾಂಪುರ ಕ್ಯಾಂಪ್‌ ಗೆ ಮೈಸೂರು ವನ್ಯಜೀವಿ ವಿಭಾಗದ ಡಿಸಿಎಫ್‌ ಬಿಎಂ ಶರಣಬಸಪ್ಪ ನೇತೃತ್ವದ ಅಧಿಕಾರಿಗಳ ತಂಡ ತೆರಳಿ ಒಟ್ಟು ೨೨ ಆನೆಗಳನ್ನ ಪರಿಶೀಲನೆ ಮಾಡಿದ್ದಾರೆ. ಅವುಗಳಲ್ಲಿ ೧೮ ಆನೆಗಳ ಪಟ್ಟಿ ಸಿದ್ದಪಡಿಸಿ ೧೪ಆನೆ ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಆಯ್ಕೆಯಾಗಿವೆ. ಉಳಿದ ೪ ಆನೆಗಳನ್ನ ಕಾಯ್ದಿರಿಸಲಾಗಿದೆ.

ಆಯ್ಕೆಯಾಗಿರುವ ೧೪ ಆನೆಗಳಲ್ಲಿ ಮೊದಲ ತಂಡದಲ್ಲಿ ೯ ಆನೆಗಳನ್ನ ಗಜಪಯಣದ ಮೂಲಕ ಮೈಸೂರಿಗೆ ಕರೆತರಲಾಗುತ್ತಿದೆ. ಮೊದಲ ತಂಡದಲ್ಲಿ ಮತ್ತಿಗೋಡು ಕ್ಯಾಂಪ್‌ ನಿಂದ ಗಜಪಡೆ ನಾಯಕ ಅಭಿಮನ್ಯು, ಭೀಮ, ಹೊಸ ಆನೆ ಏಕಲವ್ಯ, ಭೀಮನಕಟ್ಟೆ ಕ್ಯಾಂಪ್‌ ನಿಂದ ವರಲಕ್ಷ್ಮೀ, ದುಬಾರೆ ಕ್ಯಾಂಪ್‌ ನಿಂದ ಧನಂಜಯ, ಗೋಪಿ, ಕಂಜನ್‌, ರಾಂಪುರ ಕ್ಯಾಂಪ್‌ ನಿಂದ ರೋಹಿತ, ಲಕ್ಷ್ಮೀ  ಆನೆಗಳು ಮೈಸೂರಿಗೆ ಎಂಟ್ರಿ ಕೊಡಲಿವೆ.

ಇನ್ನು ಎರಡನೇ ತಂಡದಲ್ಲಿ ದುಬಾರೆ ಕ್ಯಾಂಪ್‌ ನಿಂದ ಪ್ರಶಾಂತ್‌, ಸುಗ್ರೀವ, ಮತ್ತಿಗೋಡು ಕ್ಯಾಂಪ್‌ ನಿಂದ ಮಹೇಂದ್ರ, ದೊಡ್ಡಹರವೆಯಿಂದ ಲಕ್ಷ್ಮೀ, ರಾಂಪುರ ಕ್ಯಾಂಪ್‌ ನಿಂದ ಹಿರಣ್ಯ ಆನೆಗಳನ್ನ ಮೈಸೂರಿಗೆ ಕರೆದುಕೊಂಡು ಬರಲಾಗುತ್ತದೆ.

ದುಬಾರ್‌ ಕ್ಯಾಂಪ್‌ ನಿಂದ ಅನುಭವಿ ಪ್ರಶಾಂತ್‌, ಅಯ್ಯಪ್ಪ, ರಾಮಾಪುರ ಕ್ಯಾಂಪ್‌ ನಿಂದ ಪಾರ್ಥಸಾರಥಿ, ಹಾಗೂ ಮಾಲಾದೇವಿ ಆನೆಗಳನ್ನ ಆಯ್ಕೆ ಮಾಡಿ ಕಾಯ್ದಿರಿಸಲಾಗಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

2 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

2 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

2 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

3 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

4 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

4 hours ago