ಮೈಸೂರು

ಮೈಸೂರು ದಸರಾ : ಯುದ್ಧ ವಿಮಾನ ಪ್ರದರ್ಶನಕ್ಕಗಿ ಕೇಂದ್ರಕ್ಕೆ ಮನವಿ

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದಲ್ಲಿ ಪ್ರವಾಸಿಗರು, ಸ್ಥಳೀಯರನ್ನು ಮೈ ರೋಮಾಂಚನಗೊಳಿಸುವ ವೈಮಾನಿಕ ಪ್ರದರ್ಶನದಲ್ಲಿ ಯುದ್ಧ ವಿಮಾನಗಳ ಪ್ರದರ್ಶನ ನಡೆಸುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಬೇಡಿಕೆ ಇಡಲಿದೆ.

ವರ್ಷದಿಂದ ವರ್ಷಕ್ಕೆ ವೈಮಾನಿಕ ಪ್ರದರ್ಶನದಲ್ಲಿ ವಿಮಾನಗಳ ಹಾರಾಟ ಹೆಚ್ಚಿಸುವ ಬದಲಿಗೆ ಕಡಿತ ಮಾಡಿದ್ದರಿಂದ ಅಷ್ಟೇನೂ ಮನರಂಜನೆ ದೊರೆತಿರಲಿಲ್ಲ. ಹಾಗಾಗಿ, ಈ ಬಾರಿ ಯುದ್ಧ ವಿಮಾನಗಳ ಹಾರಾಟವನ್ನು ನಡೆಸುವಂತೆ ಕೋರಿ ಪತ್ರವ್ಯವಹಾರ ಮಾಡಲಾಗಿದೆ.

೨೦೨೦,೨೦೨೧ರಲ್ಲಿ ಕೊರೊನಾ ಕಾರಣಕ್ಕಾಗಿ ವೈಮಾನಿಕ ಪ್ರದರ್ಶನ ರದ್ದುಪಡಿಸಲಾಗಿತ್ತು. ೨೦೨೩ರಲ್ಲಿ ವೈಮಾನಿಕ ಪ್ರದರ್ಶನಕ್ಕೆ ಅನುಮತಿ ದೊರೆತಿರಲಿಲ್ಲ. ೨೦೨೪ ಮತ್ತು ೨೦೨೫ರಲ್ಲಿ ವೈಮಾನಿಕ ಪ್ರದರ್ಶನ ನಡೆದಿದೆ. ಆದ್ದರಿಂದ, ಈ ಬಾರಿ ಮತ್ತಷ್ಟು ವಿಮಾನಗಳ ಪ್ರದರ್ಶನ ನಡೆಸುವಂತೆ ಕೋರಲಾಗುತ್ತಿದೆ ಎಂದು ಹೇಳಲಾಗಿದೆ.

ಆಂದೋಲನ ಡೆಸ್ಕ್

Recent Posts

ಹನೂರಿನಲ್ಲಿ ಮೇವು-ನೀರಿಲ್ಲದೆ ಜಾನುವಾರುಗಳ ಪರದಾಟ: ಕಸ, ಪೇಪರ್ ತಿಂದು ಜೀವ ಉಳಿಸಿಕೊಳ್ಳುತ್ತಿರುವ ಮೂಕ ಪ್ರಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…

4 hours ago

ಬಂಡೀಪುರ ಸಫಾರಿ ವಾಹನಗಳಿಗೆ ಜಿಪಿಎಸ್ ಡ್ಯಾಶ್ ಕ್ಯಾಮರಾ ಅಳವಡಿಕೆ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…

5 hours ago

ಮೈಸೂರಿನಲ್ಲಿ ಯತೀಂದ್ರ ಮಹಾರಾಜನ ಏಕಚಕ್ರಾಧಿಪತ್ಯವಿದೆ: ಎಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…

5 hours ago

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…

5 hours ago

ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ CWRC ಶಿಫಾರಸು

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್‌ ಕಾವೇರಿ…

6 hours ago

ಓದುಗರ ಪತ್ರ: ಮನವಿಗೆ ಸ್ಪಂದಿಸಿದಕ್ಕಾಗಿ ಅಭಿನಂದನೆಗಳು

ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…

14 hours ago