ಮೈಸೂರು

ಕುಡಿಯುವ ನೀರು ಸರಬರಾಜಿಗೆ ಮುನ್ನ ನಿಯಮಿತವಾಗಿ ನೀರಿನ ಪರೀಕ್ಷೆ ನಡೆಸಿ: ಡಾ ಕೆ.ವಿ.ರಾಜೇಂದ್ರ

ಮೈಸೂರು: ಸಾರ್ವಜನಿಕರಿಗೆ ಕುಡಿಯುವ ನೀರನ್ನು ಸರಬರಾಜು ಮಾಡುವ ಮುನ್ನ ನಿಯಮಿತವಾಗಿ ನೀರಿನ ಪರೀಕ್ಷೆ ನಡೆಸಿ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಸೂಚಿಸಿದರು.

ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವಜನಿಕರಿಗೆ ಸರಬರಾಜು ಮಾಡುತ್ತಿರುವ ಕುಡಿಯುವ ನೀರಿನ ಗುಣಮಟ್ಟ ಪರಿಶೀಲನೆ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕುರಿತು ವಿಡಿಯೋ ಕಾನ್ಫರೆನ್ಸ್ ನಡೆಸಿ ಮಾತನಾಡಿದರು.

ಕಲುಷಿತ ನೀರು ಸೇವನೆಯಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಕುಡಿಯುವ ನೀರಿಗೆ ಯಾವುದೇ ಕಲುಷಿತ ನೀರು ಸೇರ್ಪಡೆಯಾಗದಂತೆ ಎಚ್ಚರವಹಿಸಿ ಎಂದರು.

ನೀರಿನ ಸರಬರಾಜು ವ್ಯವಸ್ಥೆಯಲ್ಲಿರುವ ಎಲ್ಲಾ ನೀರು ಶೇಖರಣಾ ಘಟಕಗಳನ್ನು ಸ್ವಚ್ಛಗೊಳಿಸಿ ಪ್ರತಿ ಹಂತದಲ್ಲಿಯೂ ಕ್ಲೋರಿನೇಷನ್ ಮಾಡಲು ಕ್ರಮವಹಿಸಿ ಎಂದರು.

ನೀರಿನ ಮೂಲಗಳಾದ ಕೊಳವೆ ಬಾವಿಗಳ ಸುತ್ತಮುತ್ತಲೂ ಯಾವುದೇ ಕಲುಷಿತ ಅಥವಾ ಚರಂಡಿ ನೀರು ನಿಲ್ಲದಂತೆ ನೀರು ಸರಾಗವಾಗಿ ಹರಿಯಲು ಸೂಕ್ತ ಚರಂಡಿ ವ್ಯವಸ್ಥೆ ಕೈಗೊಂಡು ನೀರಿನ ಮೂಲದ ಸುತ್ತ ಕಾಂಕ್ರೀಟ್ ಕಟ್ಟೆ ಕಟ್ಟಲು ಅಗತ್ಯ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಪರೀಕ್ಷೆ ನಡೆಸದೆ ಕುಡಿಯುವ ನೀರು ಸರಬರಾಜು ಮಾಡಿ ಸಾರ್ವಜನಿಕರ ಆರೋಗ್ಯಕ್ಕೆ ಯಾವುದೇ ತೊಂದರೆ ಉಂಟಾದಲ್ಲಿ ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಯ ಮುಖ್ಯಸ್ಥರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಗ್ರಾಮಗಳಲ್ಲಿ ಸ್ವಚ್ಛತೆ, ಚರಂಡಿಗಳ ನಿರ್ವಹಣೆ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಮೇಲ್ವಿಚಾರಣೆ ನಡೆಸಬೇಕು. ಹೋಟೆಲ್‌, ರಸ್ತೆಯ ಬದಿಯ ಫಾಸ್ಟ್‌ಫುಡ್‌ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವ ಬಗ್ಗೆ ತಿಳಿಸಬೇಕು. ಶುದ್ಧ ಕುಡಿಯುವ ನೀರು ಒದಗಿಸುವಂತೆ ಕಟ್ಟುನಿಟ್ಟಿನ ಸೂಚನೆ ಕೊಡಬೇಕು’ ಎಂದು ಹೇಳಿದರು.

ಜಿಲ್ಲೆಯಲ್ಲಿ ಡೆಂಗ್ಯೂ, ಚಿಕನ್‍ಗುನ್ಯಾ ವ್ಯಾಪಿಸದಂತೆ ತೀವ್ರ ನಿಗಾವಹಿಸುವಂತೆ ಅಧಿಕಾರಿಗಳು ಮುಂದಾಗಬೇಕು. ವಿವಿಧ ಇಲಾಖೆಯ ಅಧಿಕಾರಿಗಳು ಸಮನ್ವಯತೆ ಯೊಂದಿಗೆ ಕೆಲಸ ನಿರ್ವಹಿಸಬೇಕು ಎಂದು ಅವರು ತಿಳಿಸಿದರು.

ನೀರಿನ ವ್ಯವಸ್ಥೆಯಡಿ ಬರುವ ಎಲ್ಲಾ ಪೈಪ್‌ ಲೈನ್ ಗಳನ್ನು ಪ್ರತಿದಿನವೂ ಕಣ್ಣಗಾವಲು ನಡೆಸಿ. ಪೈಪ್ ಲೈನ್ ಹಾನಿಯಾಗಿದ್ದರೆ ಕಲುಷಿತ ನೀರು ಕುಡಿಯುವ ನೀರಿಗೆ ಸೇರ್ಪಡೆಯಾಗುವ ಸಾಧ್ಯತೆಯಿದೆ. ಗಮನವಹಿಸಿ ದುರಸ್ಥಿ ಕಾರ್ಯ ನಡೆಯಬೇಕು ಎಂದರು.

ಒಂದು ವೇಳೆ ನಗರ ಪ್ರದೇಶಗಳಲ್ಲಿ ಕರುಳು ಬೇನೆ, ವಾಂತಿ, ಭೇಧಿ ಪ್ರಕರಣಗಳು ಕಂಡು ಬಂದರೆ ತಕ್ಷಣ ಸಂಬಂಧ ಪಟ್ಟ ಅಧಿಕಾರಿಗಳು ಆ ಗ್ರಾಮಕ್ಕೆ ಭೇಟಿ ನೀಡಿ ಅಗತ್ಯ ಕ್ರಮ ವಹಿಸಬೇಕು. ತಾಲ್ಲೂಕಿನ ಆಸ್ಪತ್ರೆ ಹಾಗೂ ಕ್ಲಿನಿಕ್ ಗಳಲ್ಲಿ ಕರುಳು ಬೇನೆ ಪ್ರಕರಣಗಳು ಬಂದರೆ ಮಾಹಿತಿ ನೀಡುವಂತೆ ಹಾಗೂ ಆ ಸಂಬಂಧ ಅಗತ್ಯ ಕ್ರಮವಹಿಸಲು ಮುಂದಾಗಬೇಕು ಎಂದು ಅವರು ತಿಳಿಸಿದರು.

ಕುಡಿಯುವ ನೀರು ಸರಬರಾಜಿನ ಕೊಳವೆ ಮಾರ್ಗಗಳು ಒಡೆದು ಹೋದಲ್ಲಿ ತಕ್ಷಣ ದುರಸ್ಥಿಪಡಿಸಲು ಕ್ರಮವಹಿಸಬೇಕು. ನೀರು ಸರಬರಾಜು ಕೊಳವೆ ಮಾರ್ಗದಲ್ಲಿ ಪೈಪ್ ಒಡೆದು ಹೋಗಿದ್ದಲ್ಲಿ, ಹೊರಗಿನ ಇತರೆ ವಸ್ತುಗಳು, ಕೊಳಚೆ ನೀರು ಕುಡಿಯುವ ನೀರಿನ ಸರಬರಾಜಿನ ಪೈಪ್‌ಲೈನ್ ಒಳಗೆ ಹರಿಯದಂತೆ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.

ಸರ್ಕಾರದ ವಿವಿಧ ಯೋಜನೆಯಡಿ ಕುಡಿಯುವ ನೀರನ್ನು ಸರಬರಾಜು ಮಾಡಲು ನಿರ್ಮಿಸಿರುವ ಓವರ್‌ ಹೆಡ್ ಟ್ಯಾಂಕ್‌ಗಳ ನೀರಿನ ಗುಣಮಟ್ಟದ ಪರೀಕ್ಷೆ ಮಾಡಬೇಕು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ, ಸ್ವಚ್ಚ ನೀರು, ಸ್ವಚ್ಚ ವಾತಾವರಣ ನೀಡುವುದು ಅಧಿಕಾರಿಗಳ ಜವಾಬ್ದಾರಿಯಾಗಿದ್ದು ಸಾರ್ವಜನಿಕ ಸ್ಥಳಗಳಲ್ಲಿ ವೆಟ್ ವೆಸ್ಟ್ ಹಾಕಿದಂತೆ ಗಮನಹರಿಸಿ, ಮುಂದೆ ಮಳೆಗಾಲ ಆರಂಭವಾಗುವುದರಿಂದ ಚರಂಡಿ ಸ್ವಚ್ಛ ಗೊಳಿಸಿ ಹಾಗೂ ಗ್ರಾಮಗಳಲ್ಲಿ ಶುಚಿತ್ವದ ಅರಿವು ಮೂಡಿಸುವಂತೆ ತಿಳಿಸಿದರು.

ಸಭೆಯಲ್ಲಿ ಹುಣಸೂರು ಉಪವಿಭಾಗಾಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೇರ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಜನವರಿ 28 ಮತ್ತು 29ರಂದು ‘ತಟ್ಟೆ ಇಡ್ಲಿ ರಾದ್ಧಾಂತ’ ಹಾಸ್ಯ ನಾಟಕ ಪ್ರದರ್ಶನ

ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…

12 mins ago

ರಾಜೀವ್‌ ಗೌಡಗೆ ಆಶ್ರಯ ನೀಡಿದ ಉದ್ಯಮಿಯೂ ಪೊಲೀಸರ ವಶಕ್ಕೆ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡರನ್ನು…

37 mins ago

ಅಮೇರಿಕಾದಲ್ಲಿ ಭೀಕರ ಹಿಮ ಬಿರುಗಾಳಿ: 25 ಜನ ಸಾವು

ವಾಷಿಂಗ್ಟನ್:‌ ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…

2 hours ago

ನಟಿ ಕಾವ್ಯಾ ಗೌಡಗೆ ಪತಿ ಸಂಬಂಧಿಕರಿಂದ ಹಲ್ಲೆ: ಪತಿಗೂ ಚಾಕು ಇರಿತ

ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್‌ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…

2 hours ago

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…

5 hours ago

2028ಕ್ಕೆ ಸಿಎಂ ವಿಚಾರ: ಎಚ್‌ಡಿಕೆ ಹಗಲು ಕನಸು ಕಾಣುತ್ತಿದ್ದಾರೆ ಎಂದ ಜಮೀರ್‌ ಅಹಮ್ಮದ್‌ ಖಾನ್‌

ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು…

6 hours ago