mysuru health program
ಮೈಸೂರು: 2024-25ನೇ ಸಾಲಿನ ಮಾರ್ಚ್-25ರ ಅಂತ್ಯಕ್ಕೆ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದ ಭೌತಿಕ ಮತ್ತು ಆರ್ಥಿಕ ಪ್ರಗತಿ ಪರಿಶೀಲನೆ ಬುಧವಾರ ನಡೆಯಿತು.
2024-25ನೇ ಸಾಲಿನ ಆರ್ಥಿಕ ವರ್ಷದಲ್ಲಿ ಅನುಷ್ಠಾನ ಮಾಡಲಾಗಿರುವ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆಯ ಸಂಬಂಧ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಸಭೆಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಎಸ್. ಯುಕೇಶ್ ಕುಮಾರ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿಯಲ್ಲಿ ಆಯೋಜಿಸಲಾಗಿತ್ತು.
ಸಮುದಾಯ ಮಟ್ಟದಲ್ಲಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು ಮತ್ತು ಯೋಜನೆಗಳ ಸವಲತ್ತು ಮತ್ತು ಸೌಲಭ್ಯಗಳ ಬಗ್ಗೆ ಪರಿಶೀಲಿಸಿದ ಯುಕೇಶ್ ಕುಮಾರ್, ತಾಯಿ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ಹೈರಿಸ್ಕ್ ಮತ್ತು ಸಾಮಾನ್ಯ ಗರ್ಭಿಣಿ ಮಹಿಳಯರು ಮತ್ತು ಬಾಣಂತಿಯರ ಆರೋಗ್ಯ ತಪಾಸಣೆ ಕುರಿತು ಮನೆ ಭೇಟಿ, ಹಾಗೂ ಪಿ.ಎಂ.ಎಸ್.ಎಂ.ಎ ಕಾರ್ಯಕ್ರಮದಲ್ಲಿ ಗರ್ಭಿಣಿ ಮಹಿಳೆಯರ ತಪಾಸಣೆ ಮಕ್ಕಳ ಆರೋಗ್ಯ ಕಾರ್ಯಕ್ರದಡಿಯಲ್ಲಿ ಸಮುದಾಯ ಮಟ್ಟದಲ್ಲಿ ನವಜಾತ ಶಿಶುಗಳ ಆರೈಕೆ ಹಾಗೂ ಸಮುದಾಯ ಮಟ್ಟದಲ್ಲಿ ಮಕ್ಕಳ ಆರೈಕೆ, ರಾಷ್ಟ್ರೀಯ ಲಸಿಕಾ ಕಾರ್ಯಕ್ರಮದಡಿಯಲ್ಲಿ ಲಸಿಕೆಯಿಂದ ವಂಚಿತವಾಗದಂತೆ ಶೇ 100 ರಷ್ಟು ಪ್ರಗತಿ ಸಾಧಿಸಲು ಸೂಚಿಸಿದರು.
ವಿಶೇಷ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳುವ ಮೂಲಕ ಮಕ್ಕಳಿಗೆ ಲಸಿಕಾಕರಣವನ್ನು ಮಾಡಲು ಸೂಚಿಸಿದರು.
ಬಾಲ್ಯ ವಿವಾಹ ಕಾಯ್ದೆ, ಭ್ರೂಣಹತ್ಯೆ ಹಾಗೂ ಪೋಕ್ಸೋ ಕಾಯ್ದೆಗಳ ಬಗ್ಗೆ ಪರಿಶೀಲನೆ ನಡೆಸಲಾಯಿತು. ಕುಟುಂಬ ಕಲ್ಯಾಣ ನಿಯಂತ್ರಣ ಕಾರ್ಯಕ್ರಮದಲ್ಲಿ ಸಂತಾನ ನಿಯಂತ್ರಣಕೆ ಇರುವ ಶಾಶ್ವತ ಮತ್ತು ತಾತ್ಕಾಲಿಕ ವಿಧಾನಗಳು, ಸಂತಾನಹರಣ ಚಿಕಿತ್ಸೆ ಹಾಗೂ ಕಾಯಕಲ್ಪ ಕಾರ್ಯಕ್ರಮದಲ್ಲಿ ಪ್ರಮಾಣೀಕೃತವಾಗಿರುವ ಆರೋಗ್ಯ ಕೇಂದ್ರಗಳ ಪರಿಶೀಲನೆ ನಡೆಸಿ, ಸದರಿ ಕಾರ್ಯಕ್ರಮದಲ್ಲಿ ಶೇಕಡಾ 100 ರಷ್ಟು ಪ್ರಗತಿ ಸಾಧಿಸಲು ನಿರ್ದೇಶನ ನೀಡಿದರು.
2024-25ನೇ ಸಾಲಿನಲ್ಲಿ ಕುಂಠಿತವಾಗಿರುವ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿ ಪ್ರಗತಿಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವಿವರಾತ್ಮಕ ಕ್ರಿಯೋಜನೆಯನ್ನು ಸಿದ್ದಪಡಿಸಲು ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳಿಗೆ ಹಾಗೂ ಅಧೀನ ಸಿಬ್ಬಂದಿಗಳಿಗೆ ಸೂಚಿಸಿದರು.
ಈ ಸಭೆಯಲ್ಲಿ ಆರೋಗ್ಯ ಇಲಾಖೆಯ ಎಲ್ಲಾ ಕಾರ್ಯಕ್ರಮ ಅನುಷ್ಟಾನ ಅಧಿಕಾರಿಗಳು, ಎಲ್ಲಾ ತಾಲ್ಲೂಕುಗಳ ತಾಲ್ಲೂಕು ಆರೋಗ್ಯ ಅಧಿಕಾರಿಗಳು ಜಿಲ್ಲಾ ಮಟ್ಟದ ಎಲ್ಲಾ ಕಾರ್ಯಕ್ರಮಗಳ ವ್ಯವಸ್ಥಾಪಕರು, ಸಲಹೆಗಾರರು, ಕಾರ್ಯಕ್ರಮ ಸಂಯೋಜಕರು ಹಾಗೂ ಆರೋಗ್ಯ ಸಿಬ್ಬಂದಿಗಳು ಭಾಗವಹಿಸಿದ್ದರು.
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…
ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…
ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…
ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು…
ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…