Mysore
30
broken clouds

Social Media

ಶನಿವಾರ, 25 ಜುಲೈ 2026
Light
Dark

ಮೈಸೂರು | ಆಯುಧಪೂಜೆ, ವಿಜಯದಶಮಿಗೆ ಖರೀದಿ ಭರಾಟೆ ಜೋರು

ಮೈಸೂರು : ಇಂದು ಎಲ್ಲೆಡೆ ನವರಾತ್ರಿ ಆಯುಧ ಪೂಜೆ ನಾಳೆ ವಿಜಯದಶಮಿ ಸಂಭ್ರಮ. ಹೀಗಾಗಿ ನಗರದ ಕೆ.ಆರ್.ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದೆ. ಬೆಲೆ ಏರಿಕೆ ಮಧ್ಯೆ ಜನರು ಹೂವು, ಹಣ್ಣು, ತರಕಾರಿ, ಪೂಜಾ ಸಾಮಾಗ್ರಿ ಖರೀದಿಸುತ್ತಿದ್ದಾರೆ.

ಕೆ.ಆರ್​.ಮಾರುಕಟ್ಟೆಗೆ ಬರುವವರಿಗೆ ಟ್ರಾಫಿಕ್ ಜಾಮ್ ಬಿಸಿ ತಟ್ಟಿದೆ. ಮೆಟ್ರೊಪಾಲ್‌, ಅರಸು ರಸ್ತೆಯಿಂದ ಕೆ.ಆರ್.ಮಾರುಕಟ್ಟೆವರೆಗೆ ಟ್ರಾಫಿಕ್​ ಜಾಮ್ ಉಂಟಾಗಿದೆ. ಅಗತ್ಯ ವಸ್ತುಗಳ ಖರೀದಿ ಭರಾಟೆ ಜೋರಾಗಿದೆ. ಆಯುಧ ಪೂಜೆ ಹಾಗೂ ವಿಜಯದಶಮಿ ಹಿನ್ನೆಲೆಯಲ್ಲಿ ಗುರುವಾರ ಸರ್ಕಾರಿ ರಜೆ ಇರುವುದರಿಂದ ಕೆಲವು ಕಚೇರಿಗಳು, ವ್ಯಾಪಾರ ಮಳಿಗೆಗಳು, ಗೋದಾಮು, ಕಾರ್ಖಾನೆಗಳಲ್ಲಿ ನಿನ್ನೆಯ ಪೂಜೆ ನೆರವೇರಿಸಲಾಗಿದ್ದು, ಹೀಗಿದ್ದರೂ ಮಾರುಕಟ್ಟೆಯಲ್ಲಿ ಹಬ್ಬಕ್ಕೆ ಬೇಕಾದ ವಸ್ತುಗಳ ಖರೀದಿಗೆ ಮುಗಿಬಿದ್ದಿದ್ದ ದೃಶ್ಯಗಳು ಕಂಡುಬಂದವು.

ಇದನ್ನೂ ಓದಿ:-ಉಸಿರಾಟದ ಸಮಸ್ಯೆಯಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು

ನಗರದ ಕೆ.ಆರ್‌.ಮಾರುಕಟ್ಟೆ, ಕೆ.ಆರ್‌ ಆಸ್ಪತ್ರೆ ವೃತ್ತ, ಗಾಂಧಿ ಸ್ಕೈರ್, ವಿವಿ ಮೊಹಲ್ಲ ಸೇರಿದಂತೆ ವಿವಿಧ ಮಾರುಕಟ್ಟೆಗಳಲ್ಲಿ ಹೂ-ಹಣ್ಣು, ಬಾಳೆಕಂದು, ನಿಂಬೆಹಣ್ಣು, ಬೂದುಕುಂಬಳಕಾಯಿ, ಕಡ್ಲೆಪುರಿ, ಸಿಹಿ ಪದಾರ್ಥಗಳ ಮಾರಾಟ ದೃಶ್ಯಗಳು ಕಂಡುಬಂದವು.

ವಾಹನಗಳಿಗೆ ಹಾಗೂ ಕಾರ್ಖಾನೆಗಳ ಯಂತ್ರೋಪಕರಣಗಳಿಗೆ ಹೆಚ್ಚಾಗಿ ಬಳಕೆಯಾಗುವ ಬೂದುಕುಂಬಳಕಾಯಿ ಬೆಲೆ ಹೆಚ್ಚಾಗಿದ್ದು, ಸಗಟು ದರದಲ್ಲಿ ಕೆಜಿಗೆ 25 ರೂ.ಗಳಿಂದ 30 ರೂ.ಗೆ ಮಾರಾಟವಾಗುತ್ತಿದ್ದರೆ, ಚಿಲ್ಲರೆಯಾಗಿ ಕೆಜಿಗೆ 40 ರಿಂದ 60 ರೂ. ಮಾರಾಟ ಮಾಡಲಾಗುತ್ತಿದೆ. ಇನ್ನೂ ಹಲವೆಡೆ ಗಾತ್ರಕ್ಕೆ ತಕ್ಕಂತೆ ಬೆಲೆ ನಿಗದಿ ಮಾಡಲಾಗಿದೆ.

ಬೂದುಕುಂಬಳದ ಬೇಡಿಕೆ ಹೆಚ್ಚಾದ್ದರಿಂದ ಬೆಲೆಯೂ ಸಹ ಹೆಚ್ಚಳವಾಗಿದೆ. ಹಬ್ಬಗಳ ಸಂದರ್ಭದಲ್ಲಿ ಹೂಗಳ ಬೆಲೆ ಸಾಮಾನ್ಯವಾಗಿ ಹೆಚ್ಚಾಗಿರುತ್ತದೆ. ಸೇವಂತಿ ಮಾರು 150 ರೂ., ಕೆಜಿಗೆ 200 ರೂ. ಚೆಂಡು ಹೂವಿನ ಬೆಲೆಯೂ ಸಹ ತುಸು ಏರಿಕೆಯಾಗಿದೆ, ಮಲ್ಲಿಗೆ 400 ರೂ.ಗಳಿಂದ 800 ರೂ., ಗುಲಾಬಿ 300 ರೂ., ಕನಕಾಂಬರ 1000 ರೂ., ಸುಗಂಧರಾಜ 300 ರೂ.ಗಳಿಗೆ ಮಾರಾಟವಾಗುತ್ತಿದೆ. ಹಣ್ಣುಗಳ ಬೆಲೆಯೂ ಏರಿಕೆಯಾಗಿದ್ದು, ದಾಳಿಂಬೆ 150 ರೂ., ಸೇಬು 150 ರೂ.ಗಳಿಂದ 200, ಮೂಸಂಬೆ 80 ರಿಂದ 100, ಏಲಕ್ಕಿ ಬಾಳೆ 120 ರೂ., ಪಚ್ಚಬಾಳೆ 50 ರೂ.ಗಳಿಗೆ ಮಾರಾಟವಾಗುತ್ತಿದ್ದರೆ, ಜೋಡಿ ಬಾಳೆಕಂದು ಗಾತ್ರಕ್ಕೆ ತಕ್ಕಂತೆ 50 ರೂ.ಗಳಿಂದ 500 ಗಳಿಗೆ ಮಾರಾಟವಾಗುತ್ತಿದೆ.

Tags:
error: Content is protected !!