Mysuru | Installation of smart meters for electricity connection mandatory from July 1
ಮೈಸೂರು : ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗ (ಕೆಇಆರ್‌ಸಿ)ದ ಆದೇಶದಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದ ವ್ಯಾಪ್ತಿಯಲ್ಲಿ 2025ರ ಜುಲೈ 1ರಿಂದ ಹೊಸ ವಿದ್ಯುತ್ ಸಂಪರ್ಕ ಪಡೆಯುವ ಗ್ರಾಹಕರಿಗೆ (HT ಹೊರತುಪಡಿಸಿ) ಸ್ಮಾರ್ಟ್ ಮೀಟರ್ ಅಳವಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಸೆಸ್ಕ್ ನಿಗದಿಪಡಿಸಿರುವ ದರದಲ್ಲಿ ರೀಟೇಲ್ ಔಟ್‌ಲೆಟ್‌ಗಳಲ್ಲಿ ಸ್ಮಾರ್ಟ್ ಮೀಟರ್‌ಗಳನ್ನು ಖರೀದಿಸಿ, ವಿದ್ಯುತ್ ಸಂಪರ್ಕ ಪಡೆಯಬೇಕಿದೆ ಎಂದು ಸೆಸ್ಕ್‌ನ ಐಟಿ ಮತ್ತು ಎಂಐಎಸ್ ವಿಭಾಗದ ಪ್ರಧಾನ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೂ.27ರಂದು ಗ್ರಾಹಕರ ಸಭೆ:
ಸ್ಮಾರ್ಟ್ ಮೀಟರ್ ಕಡ್ಡಾಯಗೊಳಿಸಿರುವ ಕುರಿತು ಗ್ರಾಹಕರಿಗೆ ಅರಿವು ಮೂಡಿಸಲು ಜೂ.27ರಂದು ಬೆಳಗ್ಗೆ 11.30ಕ್ಕೆ ನಿಗಮ ಕಚೇರಿ ಸಭಾಂಗಣದಲ್ಲಿ ಸಭೆ ಆಯೋಜಿಸಲಾಗಿದೆ. ಆಸಕ್ತ ಗ್ರಾಹಕರು ಸಭೆಯಲ್ಲಿ ಭಾಗವಹಿಸಿ ಸ್ಮಾರ್ಟ್ ಮೀಟರ್ ಅನುಷ್ಠಾನದ ಬಗ್ಗೆ ಹೆಚ್ಚಿನ ವಿವರಗಳನ್ನು ಪಡೆಯಬಹುದು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ 76ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ…
ಶಿವಪುರ, ನಾಚನಹಳ್ಳಿಪಾಳ್ಯ, ರೈಲ್ವೆ ವರ್ಕ್‌ಶಾಪ್ ನಿಲುಗಡೆ ತಾಣದಲ್ಲಿ ನಿಲ್ಲದ ಬಸ್‌ಗಳು ಕೈ ಸಂಜ್ಞೆಗೂ ಕ್ಯಾರೇ ಎನ್ನದ ಡ್ರೈವರ್‌ಗಳು; ಮಹಿಳೆಯರು, ವಯೋವೃದ್ಧರು,…
ಕಷ್ಟ-ಸುಖಗಳಿಗೆ ಸ್ಪಂದಿಸುವ ಮನಃಸ್ಥಿತಿ ಕಳೆದುಕೊಂಡ ಜನತೆ ಕೈಯಲ್ಲಿ ಹಿಡಿದಿದ್ದ ದಿನ ಪತ್ರಿಕೆಯ ಮೇಲೆ ಕಣ್ಣು ನೆಟ್ಟಿದ್ದ ಚಿದಾನಂದ ಇದ್ದಕ್ಕಿದ್ದಂತೆ 'ಥೋ'…
ಕಳೆದ ಗುರುವಾರ ಆರಂಭವಾದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನು ಯಥಾವತ್ತು ಓದುವುದಕ್ಕೆ ರಾಜ್ಯಪಾಲರು ನಿರಾಕರಿಸಿದ್ದಲ್ಲದೆ, ತಾವೇ…
ಜಾಗೃತಿ ಕಾರ್ಯಕ್ರಮಗಳು ಮತ್ತಷ್ಟು ಪರಿಣಾಮಕಾರಿ ಆಗಲಿ ಡಾ.ಡಿ.ಜೆ.ಶಶಿಕುಮಾರ್ ದೇಶದ ಐಕ್ಯತೆ, ಭದ್ರತೆ ಮತ್ತು ಪ್ರಗತಿಗೆ ಕಾರಣವಾಗಿರುವ ಭಾರತದ ಸಂವಿಧಾನ ರಚನೆಯಾಗಿ…
ಹೊಸದಿಲ್ಲಿ : ಇಲ್ಲಿನ ಕೆಂಪುಕೋಟೆಯಲ್ಲಿ ಇಂದು ನಡೆಯುವ ಗಣರಾಜ್ಯೋತ್ಸವಕ್ಕೆ ಸಂತೇಮರಹಳ್ಳಿ ಹೋಬಳಿ ವ್ಯಾಪ್ತಿಯ ಇಬ್ಬರು ಮಹಿಳೆಯರು ವಿಶೇಷ ಆಹ್ವಾನಿತರಾಗಿ ಆಯ್ಕೆಯಾಗಿದ್ದಾರೆ.…