ಮೈಸೂರು : ಫುಟ್‌ಪಾತ್‌ಗಳನ್ನು ಅತಿಕ್ರಮಿಸಿದ್ದ ಅನಧಿಕೃತ ವ್ಯಾಪಾರಿಗಳ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ಶುಕ್ರವಾರ ಖಡಕ್ಕಾಗಿ ಕಾರ್ಯಾಚರಣೆ ನಡೆಸಿತು. ವಲಯ-5 ವ್ಯಾಪ್ತಿಯ ಮೇಟಗಳ್ಳಿ ಕೆ.ಆರ್.ಎಸ್. ಮುಖ್ಯ ರಸ್ತೆಯಲ್ಲಿ ಜೆಸಿಬಿ ಬಳಸಿ ಭರ್ಜರಿ ತೆರವು ಕಾರ್ಯ ನಡೆಯಿತು.
ಬೆಳಿಗ್ಗೆಯಿಂದ ಆರಂಭವಾದ ಕಾರ್ಯಾಚರಣೆಯಲ್ಲಿ ಪಾಲಿಕೆ ಸಿಬ್ಬಂದಿ ಫುಟ್‌ಪಾತ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ವರ್ಷಗಳಿಂದ ಇದ್ದ ಪೆಟ್ಟಿಗೆ ಅಂಗಡಿ, ಶೆಡ್, ತಳ್ಳುವ ಗಾಡಿ ಮತ್ತು ಅನಧಿಕೃತ ಜಾಹೀರಾತು ಫಲಕಗಳನ್ನು ತೆರವುಗೊಳಿಸಿದರು. ಅಂದಾಜು 30ಕ್ಕೂ ಹೆಚ್ಚು ಅಂಗಡಿಗಳನ್ನು ಜೆಸಿಬಿ ಮೂಲಕ ಕೆಡವಲಾಯಿತು.
ಒಂದೆಡೆ ಸಾರ್ವಜನಿಕರು “ಈಗಾದರೂ ಫುಟ್‌ಪಾತ್‌ನಲ್ಲಿ ನಡೆದಾಡಲು ಜಾಗ ಸಿಕ್ಕಿತು” ಎಂದು ಸಮಾಧಾನ ವ್ಯಕ್ತಪಡಿಸಿದರೆ, ಇನ್ನೊಂದೆಡೆ ಹಠಾತ್ ತೆರವಿನಿಂದ ಜೀವನೋಪಾಯ ಕಳೆದುಕೊಂಡ ವ್ಯಾಪಾರಿಗಳಲ್ಲಿ ಆತಂಕ ಮನೆಮಾಡಿದೆ.
ಆಯುಕ್ತೆ ಸವಿತಾ ಸೂಚನೆ ಮೇರೆಗೆ ಕಾರ್ಯಾಚರಣೆ
ಪಾಲಿಕೆಯ ನೂತನ ಆಯುಕ್ತೆ ಎಂ.ಕೆ. ಸವಿತಾ ಅವರ ನಿರ್ದೇಶನದಂತೆ ವಲಯ-5ರ ಎ.ಇ.ಇ ಯತೀಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ವರ್ಕ್ ಇನ್ಸ್‌ಪೆಕ್ಟರ್ ನಾಗರಾಜು, ಹೆಲ್ತ್ ಇನ್ಸ್‌ಪೆಕ್ಟರ್ ಗೀತಾ ಹಾಗೂ ಮೇಟಗಳ್ಳಿ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಅರುಣ್ ನೇತೃತ್ವದ ಪೊಲೀಸ್ ತಂಡ ಭದ್ರತೆ ಒದಗಿಸಿತು.
ಇನ್ನೂ ಮುಂದುವರಿಯಲಿದೆ
“ನಗರದ ಎಲ್ಲಾ ವಲಯಗಳಲ್ಲೂ ಫುಟ್‌ಪಾತ್‌ಗಳನ್ನು ಸಂಚಾರ ಮುಕ್ತಗೊಳಿಸುವವರೆಗೆ ಈ ಕಾರ್ಯಾಚರಣೆ ನಿಲ್ಲುವುದಿಲ್ಲ” ಎಂದು ಪಾಲಿಕೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಸಯ್ಯಾಜಿರಾವ್ ರಸ್ತೆ, ದೇವರಾಜ ಮಾರುಕಟ್ಟೆ, ನಜರ್‌ಬಾದ್ ಸೇರಿದಂತೆ ಇತರೆ ಒತ್ತುವರಿ ಪ್ರದೇಶಗಳಲ್ಲೂ ಇದೇ ರೀತಿ ಕಾರ್ಯಾಚರಣೆ ನಡೆಸುವುದಾಗಿ ಅವರು ತಿಳಿಸಿದರು.
ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…
ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ ಹನೂರು: ಮಹಾಲಯ ಅಮಾವಾಸ್ಯೆ…
ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ ಗುಂಡ್ಲುಪೇಟೆ:…
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…