Mysore
24
clear sky

Social Media

ಭಾನುವಾರ, 26 ಏಪ್ರಿಲ 2026
Light
Dark

ಮೈಸೂರು ಕೊಡಗು ಲೋಕಸಭಾ ಚುನಾವಣೆ- ಎರಡನೇ ದಿನ ಒಂದು ನಾಮಪತ್ರ ಸಲ್ಲಿಕೆ

ಮೈಸೂರು : ಮೈಸೂರು ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಅಂಗವಾಗಿ ಎರಡನೇ ದಿನವಾದ ಇಂದು ಅಖಿಲ ಭಾರತ ಹಿಂದೂ ಮಹಾಸಭಾ ಪಕ್ಷದ ಅಭ್ಯರ್ಥಿಯಾಗಿ ಎ.ಎಸ್. ಸತೀಶ್ ಅವರು ಜಿಲ್ಲಾ ಚುನಾವಣಾಧಿಕಾರಿ ಡಾ:ಕೆ.ವಿ.ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು.

ಚುನಾವಣೆಗೆ ಅಧಿಸೂಚನೆ ಪ್ರಕಟವಾದ ಮೊದಲ ದಿನ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು, ಎರಡನೇ ದಿನ ಸ್ಪರ್ಧೆ ಬಯಸಿ ಅಖಿಲ ಭಾರತ ಹಿಂದೂ ಮಹಾಸಭಾ ಪಕ್ಷದ ಅಭ್ಯರ್ಥಿಯಾಗಿ ಎ.ಎಸ್. ಸತೀಶ್ ನಾಮಪತ್ರ ಸಲ್ಲಿಸಿದ್ದು, ಇದುವರೆಗೆ ಮೂವರು ಉಮೇದುವಾರಿಕೆ ಸಲ್ಲಿಸಿದ್ದಾರೆ.

Tags:
error: Content is protected !!