Mysore
28
scattered clouds

Social Media

ಶನಿವಾರ, 14 ನವೆಂಬರ್ 2026
Light
Dark

ಮೈಸೂರು| ಹುಲಿಗಾಗಿ ಇಟ್ಟ ಬೋನಿಗೆ ಬಿದ್ದ ಚಿರತೆ!

ಮೈಸೂರು: ಹುಲಿ ಸೆರೆಹಿಡಿಯಲು ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿರುವ ಘಟನೆ ಮೈಸೂರಿನ ಮರಸೆ ಗ್ರಾಮದಲ್ಲಿ ನಡೆದಿದೆ.

ಕೆಲ ದಿನಗಳ ಹಿಂದೆ ಗ್ರಾಮದಲ್ಲಿ ಹುಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಸುವನ್ನು ಕಟ್ಟಿ ಬೋನು ಇರಿಸಿದ್ದರು. ಆದರೆ ಹಸುವನ್ನು ತಿನ್ನಲು ಬಂದ ಚಿರತೆ ಬೋನಿಗೆ ಬಿದ್ದಿದೆ.

ಸೆರೆಯಾದ ಚಿರತೆ ಸುಮಾರು ನಾಲ್ಕರಿಂದ ಐದು ವರ್ಷದ ಗಂಡು ಚಿರತೆಯಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿದ್ದಾರೆ.

Tags:
error: Content is protected !!