ಮೈಸೂರು

Mysuru : ತಾಯಿಯ ಆಸೆ ನೆರವೇರಿಸಿದ ನಟ ಪ್ರಭುದೇವ

ಮೈಸೂರು: ನಟ ಪ್ರಭುದೇವ (Actor Prabhudeva) ಅವರಿಂದು ನಂಜನಗೂಡು ತಾಲ್ಲೂಕಿನ ಕೆಂಬಾಲು ಗ್ರಾಮದಲ್ಲಿ ದೇವಸ್ಥಾನ ಜೀರ್ಣೋದ್ಧಾರ (Temple Renovation) ಕಾರ್ಯಕ್ರಮದಲ್ಲಿ ಭಾಗಿಯಾಗುವ ಮೂಲಕ ತಾಯಿಯ ಆಸೆ ನೆರವೇರಿಸಿದ್ದಾರೆ.

ಕೆಂಬಾಲು ಗ್ರಾಮದಲ್ಲಿ ಚೋಳರ ಕಾಲದಲ್ಲಿ ನಿರ್ಮಾಣವಾಗಿದ್ದ ಮಹದೇಶ್ವರ ಸ್ವಾಮಿ ದೇವಸ್ಥಾನವು (Mahadeshwara Swamy Temple)  ಶಿಥಿಲಾವಸ್ಥೆ ಕಂಡಿತ್ತು. ಇದನ್ನು ನೋಡಿದ ಪ್ರಭುದೇವ ತಾಯಿ ಅವರು ಸ್ವಂತ ಖರ್ಚಿನಲ್ಲೇ ದೇವಸ್ಥಾನ ಜೀರ್ಣೋದ್ಧಾರ ಮಾಡಿಸುವಂತೆ ಮಗ ಪ್ರಭುದೇವ ಅವರಿಗೆ ತಾಕೀತು ಮಾಡಿದ್ದರು.

ಈ ಹಿನ್ನೆಲೆಯಲ್ಲಿ ತಾಯಿ ಆಸೆಯಂತೆ ದೇವಸ್ಥಾನವನ್ನು 25 ಲಕ್ಷ ರೂ ವೆಚ್ಚದಲ್ಲಿ ಜೀರ್ಣೋದ್ಧಾರ ಮಾಡಿ, ಇಂದು ಹೋಮ ಹವನ ಸೇರಿದಂತೆ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ:- ರಾಜ್ಯದ ಹಲವೆಡೆ ಇನ್ನೂ ಒಂದು ವಾರ ಧಾರಾಕಾರ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಪ್ರಭುದೇವ ಅವರ ಜೊತೆ ಪತ್ನಿಯೂ ಪೂಜೆಯಲ್ಲಿ ಭಾಗಿಯಾಗಿದ್ದು ವಿಶೇಷವೆನಿಸಿತ್ತು. ದೇವಸ್ಥಾನದಲ್ಲಿ ಪ್ರಭುದೇವರನ್ನು ನೋಡಿದ ಅಭಿಮಾನಿಗಳು ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು.

ಆಂದೋಲನ ಡೆಸ್ಕ್

Recent Posts

ಅಕ್ರಮ ಕೇರಳ ಲಾಟರಿ ಮಾರಾಟ: ಓರ್ವ ಬಂಧನ

ಗುಂಡ್ಲುಪೇಟೆ: ಅಕ್ರಮವಾಗಿ ಕೇರಳ ಲಾಟರಿ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಗುಂಡ್ಲುಪೇಟೆ ಠಾಣೆ ಪೊಲೀಸರು ಬಂಧಿಸಿ, ಲಾಟರಿ ಟೆಕೆಟ್‌ಗಳನ್ನು ವಶಕ್ಕೆ…

1 hour ago

ಮೈಸೂರಿನ ಜೆಕೆ ಮೈದಾನದಲ್ಲಿ ಶ್ವಾನಗಳ ಕಲರವ: ಗಮನ ಸೆಳೆದ ವೈವಿಧ್ಯಮಯ ತಳಿಗಳು

ಮೈಸೂರು: ಇಲ್ಲಿನ ಜೆಕೆ ಮೈದಾನದಲ್ಲಿ ಆಯೋಜಿಸಿರುವ ಶ್ವಾನ ಪ್ರದರ್ಶನವು ಶ್ವಾನಪ್ರಿಯರ ಗಮನ ಸೆಳೆಯುತ್ತಿದೆ. ಪ್ರದರ್ಶನದಲ್ಲಿ 50ಕ್ಕೂ ಹೆಚ್ಚು ತಳಿಗಳ ಸಾವಿರಕ್ಕೂ…

2 hours ago

ಹವಾಮಾನ ವೈಪರೀತ್ಯಕ್ಕೆ ದಸರಾ ಏರ್ ಶೋ ಮೊಟಕು: ಪ್ರೇಕ್ಷಕರಿಗೆ ನಿರಾಸೆ

ಮೈಸೂರು: ದಸರಾದ ಏರ್ ಶೋ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದ ಸಾವಿರಾರು ಪ್ರೇಕ್ಷಕರಿಗೆ ಹವಾಮಾನ ವೈಪರೀತ್ಯ ನಿರಾಸೆ ಉಂಟುಮಾಡಿದೆ. ಭಾರತೀಯ ವಾಯುಪಡೆಯ…

2 hours ago

ಓದುಗರ ಪತ್ರ: ಹೆಚ್‌ಡಿಕೆಯವರೇ, ಟೀಕೆ ಮಾಡುವಾಗ ಎಚ್ಚರಿಕೆ ಇರಬೇಕಲ್ಲವೇ?

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನ…

3 hours ago

ಓದುಗರ ಪತ್ರ: ಶಾಸಕ ಜಿ.ಟಿ.ದೇವೇಗೌಡರ ನಡೆ ಶ್ಲಾಘನಿಯ

ಮೈಸೂರಿನ ಕಳಸ್ಥವಾಡಿ ಸಮೀಪದ ವಿರಿಜ ನಾಲೆ ಸಮೀಪ ಇತ್ತೀಚೆಗೆ ನಡೆದ ಅವಘಡದಲ್ಲಿ ತೊಂದರೆಗೊಳಗಾದ ಕಬ್ಬು ಸಾಗಿಸುತ್ತಿದ್ದ ಚಂದ್ರು ಎಂಬ ರೈತನ…

3 hours ago

ಓದುಗರ ಪತ್ರ: ದನಗಳ ಪ್ರದರ್ಶನಕ್ಕೆ ಬಂದ ರೈತರೂ ಪ್ರತಿಭಟಿಸಬೇಕಾಯಿತಲ್ಲ…

ರೈತ ದಸರಾ ಅಂಗವಾಗಿ ಮೈಸೂರಿನ ಕುಕ್ಕರಹಳ್ಳಿಯ ಬೋಽಸತ್ವ ಹಾಸ್ಟೆಲ್ ಮುಂಭಾಗದಲ್ಲಿ ಏರ್ಪಡಿಸಲಾಗಿದ್ದ ಹಳ್ಳಿಕಾರ್ ತಳಿಯ ಜೋಡಿ ದನಗಳ ಪ್ರದರ್ಶನವನ್ನು ಗಮನಿಸಿದರೆ…

3 hours ago