ಮೈಸೂರು

ಮೈಸೂರು | ಕೆಎಸ್‌ಆರ್‌ಟಿಸಿ ಬಸ್‌ ಹರಿದು ವ್ಯಕ್ತಿ ಸಾವು

ಮೈಸೂರು : ಕೆಎಸ್‌ಆರ್‌ಟಿಸಿ ಬಸ್‌ ಹರಿದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಲ್ಲಿನ ಶ್ರೀರಾಂಪುರದಲ್ಲಿ ನಡೆದಿದೆ.

ಶ್ರೀರಾಂಪುರದ ನಿವಾಸಿ ಪುರುಷೋತ್ತಮಯ್ಯ(71) ಮೃತಪಟ್ಟವರು. (ಇಂದು)ಗುರುವಾರ ಬೆಳಿಗ್ಗೆ 7 ಗಂಟೆಗೆ ಹಾಲಿಗೆ ಬೂತ್‌ಗೆ ಬಂದು ಹಾಲು ಖರೀದಿಸಿ ತಮ್ಮ ಸ್ಕೂಟರ್‌ ನಲ್ಲಿ  ಮನೆಗೆ ತೆರಳುತ್ತಿದ್ದರು. ಈ ವೇಳೆ ಸ್ಕೂಟರ್‌ಗೆ ಕೆಎಸ್‌ಆರ್‌ಟಿಸಿ ನಗರ ಸಂಚಾರ ಬಸ್‌ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಪುರುಷೋತ್ತಮಯ್ಯ ಕೆಳಗುರುಳಿದ್ದು, ಬಸ್‌ ಟಯರ್‌ ಅವರ ತಲೆಯ ಮೇಲೆ ಹರಿದಿದೆ. ಈ ಸಂಬಂಧ ಕೆ.ಆರ್‌ ಸಂಚಾರ ಠಾಣೆಯಲ್ಲಿ ದೂರು ದಾಖಲಾಗಿದೆ.

ರಸ್ತೆಯ ಪಕ್ಕದಲ್ಲೇ ತರಕಾರಿ ಮಾರಾಟಗಾರರು ಇರುವುದರಿಂದ ಓಡಾಡಲು ತೊಡಕಾಗಿದೆ. ಮೊದಲು ಅಲ್ಲಿಂದ ತರಕಾರಿ ಮಾರಾಟಗಾರರನ್ನು ತೆರವುಗೊಳಿಸಿ ಬೇರೆ ಕಡೆ ವ್ಯವಸ್ಥೆ ಮಾಡಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ಬೀದಿನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಜೆ.ಪಿ.ನಗರದ ಸಾಯಿಬಾಬಾ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ರಾತ್ರಿಯ ಹೊತ್ತಿನಲ್ಲಿ ಒಂದೇ ಸಮನೆ ಬೊಗಳುತ್ತಿರುತ್ತವೆ. ದ್ವಿಚಕ್ರವಾಹನ…

5 mins ago

ಗುಂಡ್ಲುಪೇಟೆ | ವಿದ್ಯುತ್ ಸ್ಪರ್ಶಿಸಿ ಹುಲಿ ಸಾವು

ಗುಂಡ್ಲುಪೇಟೆ : ತಾಲೂಕಿನ ಪಡಗೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಅಡವಿ ಮಠದ ಸಮೀಪವಿರುವ…

42 mins ago

ಓದುಗರ ಪತ್ರ | ಪ್ರಾಣಿ, ಪಕ್ಷಿಗಳಿಗೆ ನೀರು ಕೊಡಿ

ಬೇಸಿಗೆ ಆರಂಭವಾಗುವುದೇ ತಡ ಪ್ರತಿಯೊಬ್ಬರಿಗೂ ಬಾಯಾರಿಕೆ ಹೆಚ್ಚಾಗಿ, ಜಾಸ್ತಿ ನೀರು ಕುಡಿಯಬೇಕಾಗುತ್ತದೆ. ಬಿಸಿಲಿನ ಬೇಗೆ ಹೆಚ್ಚಾಗುವುದರಿಂದ ಎಂತಹವರಿಗೂ ವಿವಿಧ ರೀತಿಯ…

1 hour ago

ಓದುಗರ ಪತ್ರ | ಸರ್ಕಾರಿ ಶಾಲೆಗಳಿಗೆ ಲ್ಯಾಪ್ ಟಾಪ್, ವೈಫೈ ಸೌಲಭ್ಯ ಕಲ್ಪಿಸಿ

ಈಗ ಶಾಲೆಯಲ್ಲಿ ಶಿಕ್ಷಕರು ಕೇವಲ ಪಠ್ಯ ಬೋಧಕರಾಗಿ ಮಾತ್ರ ಉಳಿದಿಲ್ಲ. ಬೋಧನೆಯ ಜೊತೆ ಜೊತೆಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳುವುದು, ಮಧ್ಯಾಹ್ನದ…

2 hours ago

ಆಂದೋಲನ ವಿಶೇಷ ; ಸೋನಂ ವಾಂಗ್ಚುಕ್ ದಿಢೀರ್ ಬಿಡುಗಡೆ ‌

• ಆರೋಪ ಸಾಬೀತು ಮಾಡಲು ಕೇಂದ್ರ ವಿಫಲ • ಸುಪ್ರೀಂ ಮುಜುಗರದಿಂದ ಪಾರು? ಪರಿಸರ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಮಾಡಿದ…

4 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆಗೆ ಸಕಲ ಸಿದ್ಧತೆ

ಮಹಾದೇಶ್‌ ಎಂ.ಗೌಡ ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರದಿಂದ ಪ್ರಾರಂಭವಾಗಿರುವ ಯುಗಾದಿ ಜಾತ್ರಾ ಮಹೋತ್ಸವ ಮಾರ್ಚ್ 19ರವರೆಗೆ…

4 hours ago